ಮಹಿಳೆಯರು ಮೀಸಲಾತಿ ಅವಲಂಬಿಸದಿರಿ: ಮೀನಾಕ್ಷಿ


Team Udayavani, Mar 9, 2018, 2:21 PM IST

0803mlr26.jpg

ಮಂಗಳೂರು: ಈಗಿನ ಮಹಿಳೆಯರು ಪುರುಷರಿಗೆ ಸರಿ ಸಮನಾಗಿ ಬದುಕು ಸಾಗಿಸುತ್ತಿ ದ್ದಾರೆ. ನಾವು ಎಲ್ಲ ಕ್ಷೇತ್ರಗಳಲ್ಲೂ ಮುಂದುವರಿದಿದ್ದು, ಮಹಿಳಾ  ಮೀಸಲಾತಿಯನ್ನು ಅವಲಂಬಿಸ ಬಾರದು. ಗಂಡು-ಹೆಣ್ಣಿನ ತಾರತಮ್ಯ ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು.

ಅವರು ನಗರದ ಜಿ.ಪಂ. ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿ.ಪಂ. ಸಿಇಒ ಎಂ.ಆರ್‌. ರವಿ ಮಾತನಾಡಿ, ಹಿಂದಿನ ಕಾಲದ ತಾಯಂದಿರಲ್ಲಿ ಇದ್ದ ಧೈರ್ಯ, ಆತ್ಮವಿಶ್ವಾಸ ಈಗಿನ ವಿದ್ಯಾವಂತ ಹೆಣ್ಣು ಮಕ್ಕಳಲ್ಲಿ ಕಾಣದಾಗಿದೆ. ಇಂದು ಸಂಸ್ಕಾರವಂತರಾದ, ದೇಶ ವನ್ನು ಕಟ್ಟುವಂತಹ ಹೆಣ್ಣು ಮಕ್ಕಳ ಆವಶ್ಯಕತೆ ನಮ್ಮ ಸಮಾಜಕ್ಕೆ ಇದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಬರಹ ಗಾರರಾದ ಅ.ನಾ. ಪೂರ್ಣಿಮಾ ಅವರು ಈ ವಿಶ್ವ ಮಹಿಳಾ ದಿನವನ್ನು “ಅಭಿವೃದ್ಧಿಗಾಗಿ ಒತ್ತಾಯ’ ಎಂಬ ಘೋಷಣೆ ಅಡಿಯಲ್ಲಿ ಆಚರಿಸ ಲಾಗುತ್ತಿದೆ. ಹೆಮ್ಮಕ್ಕ‌ಳನ್ನು ಮುಖ್ಯ ವಾಹಿನಿಗೆ ತರುವ ಪ್ರಯತ್ನ ನಡೆ ಯಬೇಕು. ಶೋಷಣೆಯನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಹೆಣ್ಣು ಮೈಗೂಡಿಸಬೇಕು ಎಂದರು.

ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡಿದರೂ ಅವಳ ಮೇಲೆ ನಿರಂತರ ವಾಗಿ ದೌರ್ಜನ್ಯ ನಡೆಯ ತ್ತಲೇ ಇದೆ. ಮಹಿಳೆಯರು ಜಾಗೃತರಾಗಬೇಕು. ಮಹಿಳೆಯರು ಸರಕಾರದ ಸೌಲಭ್ಯ ಗಳ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಧಕರಾದ ಕಸ್ತೂರಿ (ಸಂಗೀತ ಕ್ಷೇತ್ರ), ಈಶ್ವರಿ ಸ್ತ್ರೀಶಕ್ತಿ ಗುಂಪು (ಈರೆಕೋಡಿ, ಬಂಟ್ವಾಳ), ವೇದಾವತಿ (ಏಣಿತಡ್ಕ-1 ಅಂಗನವಾಡಿ ಕೇಂದ್ರ, ಪುತ್ತೂರು), ವನಿತಾ (ಕೊಳಲ ಬಾಕಿಮಾರು, ಅಂಗನವಾಡಿ ಕೇಂದ್ರ, ಬಂಟ್ವಾಳ), ರೇಣುಕಾ (ಬಡಕಬೈಲು ಅಂಗನವಾಡಿ ಕೇಂದ್ರ, ಬಂಟ್ವಾಳ), ಸುಲೋಚನಾ (ಬೆಳ್ಳಾರೆ, ಅಂಗನವಾಡಿ ಕೇಂದ್ರ, ಸುಳ್ಯ) ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೃಷ್ಟಿದೋಷವುಳ್ಳ 10 ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ, ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಟಾಕಿಂಗ್‌ ಲ್ಯಾಪ್‌ಟಾಪ್‌ ವಿತರಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಸುಂದರ ಪೂಜಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಉಸ್ಮಾನ್‌, ಜಿ.ಪಂ. ಸದಸ್ಯೆ ಧನಲಕ್ಷ್ಮೀ ಗಟ್ಟಿ, ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಶಕುಂತಲಾ ಮತ್ತು ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯಮುನಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Mangaluru: ಗಾಂಜಾ ಸೇವನೆ; ಯುವಕನ ಬಂಧನ

14

Mangaluru: ಸ್ಕೂಟರ್‌ ಕಳವು; ಪ್ರಕರಣ ದಾಖಲು

16-moodbidri

Mudbidri: ದ್ವಿಚಕ್ರ ವಾಹನ ಅಪಘಾತ; ಗಾಯಾಳು ಸವಾರ ಮೃತ್ಯು

5

Bajpe: ಊರಿನ ಜಾರಿಗೆ ಸಿಪ್ಪೆಗೆ ಹೊರರಾಜ್ಯದಲ್ಲಿ ಬೇಡಿಕೆ

4(3

Mangaluru: ಮುಂಗಾರು ಹಂಗಾಮಿನಲ್ಲಿ ಈ ಬಾರಿ ಬೇಸಾಯ ತಡವಾದರೂ ಉತ್ತಮ ಬೆಳೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.