ಬಂಟರ ಸಂಘ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆಗೆ ಚಾಲನೆ
Team Udayavani, Mar 9, 2018, 4:43 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಮಹಿಳಾ ವಿಭಾಗವು ಪ್ರತೀ ವರ್ಷದಂತೆ ಈ ಬಾರಿಯೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯು ಮಾ. 8 ರಂದು ಅಪರಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಿತು.
ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿ ದೀಪಪ್ರಜ್ವಲಿಸಿ ಚಾಲನೆ ನೀಡಿದರು. ಬಂಟರ ಸಂಘ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ ಇವರ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಪಾಲ್ಗೊಂಡ ಮಹಿಳಾ ಉದ್ಯಮಿ ಜ್ಯೋತಿ ಆರ್. ಎನ್. ಶೆಟ್ಟಿ, ಸಂಘದ ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಉಮಾ ಕೆ. ಶೆಟ್ಟಿ, ಗೌರವ ಕಾರ್ಯದರ್ಶಿ ಚಿತ್ರಾ ಆರ್. ಶೆಟ್ಟಿ, ಗೌರವ ಕೋಶಾಧಿಕಾರಿ ಆಶಾ ವಿ. ರೈ, ಜತೆ ಕಾರ್ಯದರ್ಶಿ ಮನೋರಮಾ ಎನ್. ಶೆಟ್ಟಿ, ಜತೆ ಕೋಶಾಧಿಕಾರಿ ರತ್ನಾ ಪಿ. ಶೆಟ್ಟಿ ಇವರು ಉಪಸ್ಥಿತರಿದ್ದರು.
ವಿಶೇಷ ಆಕರ್ಷಣೆಯಾಗಿ ಬಾಲಿವುಡ್ ನಟಿ ಕರಿಷ್ಮಾ ಕಪೂರ್ ಇವರು ಆಗಮಿಸಿದ್ದು, ಇವರನ್ನು ಬಂಟರ ಸಂಘದ ಮಹಿಳಾ ವಿಭಾಗದ ಪದಾಧಿಕಾರಿಗಳು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸ್ಮರಣಾರ್ಥ ಭಂಡಾರಿ ಕುಟುಂಬಿಕರು ಪ್ರತಿವರ್ಷ ಮಹಿಳಾ ವಿಭಾಗದ ಮೂಲಕ ವಿಶಿಷ್ಟ ಮಹಿಳಾ ಸಾಧಕಿಯರಿಗೆ ನೀಡುವ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಪ್ರಶಸ್ತಿಯನ್ನು ಈ ಬಾರಿ ಸಂಘದ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ, ಸಮಾಜ ಸೇವಕಿ ಲತಾ ಪ್ರಭಾಕರ್ ಶೆಟ್ಟಿ ಇವರಿಗೆ ಪ್ರದಾನಿಸಿ ಗೌರವಿಸಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮ
ಬಂಟರ ಸಂಘದ ವಿವಿಧ ಪ್ರಾದೇಶಿಕ ಸಮಿತಿಗಳು, ಸಂಘದ ಮಹಿಳಾ ವಿಭಾಗ ಹಾಗೂ ಯುವ ವಿಭಾಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು. ಸಂಘದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಮಹಿಳಾ ವಿಭಾಗದ ಸದಸ್ಯೆಯರು, ಸಮಾಜ ಬಾಂಧವರು, ವಿವಿಧ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಚಿತ್ರ-ವರದಿ : ಪ್ರೇಮನಾಥ್ ಶೆಟ್ಟಿ ಮುಂಡ್ಕೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.