ಸಂದಿಗ್ದಕ್ಕೆ ಸಿಲುಕಿದ ಸಿಎಂ ರಾಜೀನಾಮೆ ಬೆದರಿಕೆ ಹಾಕಿಲ್ಲ: ಎಂಬಿಪಿ
Team Udayavani, Mar 10, 2018, 7:30 AM IST
ಬೆಂಗಳೂರು: ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವ ಕುರಿತು ಸಂಪುಟ ಸಭೆಯಲ್ಲಿ ಸಚಿವರ ನಡುವೆ
ಯಾವುದೇ ವಾಗ್ವಾದ ನಡೆದಿಲ್ಲ. ಯಾವ ಸಚಿವರೂ ರಾಜೀನಾಮೆ ನೀಡುವ ಬೆದರಿಕೆ ಹಾಕಿಲ್ಲವೆಂದು ಲಿಂಗಾಯತ ಪ್ರತ್ಯೇಕ ಧರ್ಮ
ಹೋರಾಟದ ನಾಯಕತ್ವ ವಹಿಸಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಪುಟ ಸಭೆಯಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದಿದ್ದರೆ, ನಾನೂ ಸೇರಿ ಡಾ.ಶರಣ ಪ್ರಕಾಶ್ ಪಾಟೀಲ್, ಬಸವರಾಜ ರಾಯರಡ್ಡಿ, ವಿನಯ್ ಕುಲಕರ್ಣಿ
ರಾಜೀನಾಮೆ ನೀಡುವ ಬೆದರಿಕೆ ಹಾಕಿಲ್ಲ. ಈಶ್ವರ್ ಖಂಡ್ರೆ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಕೂಡಾ ರಾಜೀನಾಮೆ ಬೆದರಿಕೆ
ಹಾಕಿಲ್ಲ. ಈ ಬಗ್ಗೆ ಮಾಧ್ಯಮಗಳಲ್ಲಿ ತಪ್ಪಾಗಿ ವರದಿ ಪ್ರಕಟವಾಗಿದ್ದು, ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯದಲ್ಲಿ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆಂದು ಎಂ.ಬಿ.ಪಾಟೀಲ್
ತಿಳಿಸಿದ್ದಾರೆ.
ಲಿಂಗಾಯತ ಪ್ರತ್ಯೇಕ ಧರ್ಮ ಮಾಡಬೇಕೆಂದು ಹೊರಟವರ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ಸ್ವಲ್ಪ ದಿನ ಕಾದು ನೋಡಿ. ಎಲ್ಲವೂ ತಿರುಗು ಮುರುಗಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಸಚಿವರ ಮಧ್ಯೆ ಏನೇನು ಮಾತುಕತೆ ನಡೆದಿದೆ ಎಂಬುದು ಗೊತ್ತಿದೆ. ಈ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿ. ಆಮೇಲೆ ನೋಡೋಣ.
● ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
MUST WATCH
ಹೊಸ ಸೇರ್ಪಡೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Teertharoopa Tandeyavarige: ತೀರ್ಥರೂಪರ ಜೊತೆ ರಚನಾ
Ramanagara: ಬಸ್ -ಬೈಕ್ ಅಪಘಾತ; ಇಬ್ಬರು ಮಕ್ಕಳು ಮೂವರು ಸ್ಥಳದಲ್ಲೇ ಮೃತ್ಯು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.