ಮ್ಯಾಕ್ರನ್ಗೆ ಭವ್ಯ ಸ್ವಾಗತ:14 ಒಪ್ಪಂದಕ್ಕೆ ಭಾರತ-ಫ್ರಾನ್ಸ್ ಸಹಿ
Team Udayavani, Mar 10, 2018, 3:33 PM IST
ಹೊಸದಿಲ್ಲಿ : ನಿನ್ನೆ ಶುಕ್ರವಾರ ರಾತ್ರಿಯಿಂದ ಆರಂಭಗೊಂಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್ ಅವರ ನಾಲ್ಕು ದಿನಗಳ ಭಾರತ ಭೇಟಿಯ ಪಾರ್ಶ್ವದಲ್ಲಿ ಉಭಯ ದೇಶಗಳು 14 ಪ್ರಮುಖ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿವೆ.
ಉಭಯ ದೇಶಗಳ ನಡುವಿನ ವ್ಯೂಹಾತ್ಮಕ ಪಾಲುದಾರಿಕೆಗೆ ಅತ್ಯಧಿಕ ಮಹತ್ವ ನೀಡಬೇಕಾದ ಅಗತ್ಯವನ್ನು ಒತ್ತಿ ಹೇಳಿದ ಮ್ಯಾಕ್ರನ್ ಅವರು, ವಿಶ್ವದ ಎರಡು ಮಹೋನ್ನತ ಪ್ರಜಾಸತ್ತೆಗಳು ಇನ್ನಷ್ಟು ನಿಕಟವಾಗಿ ಪರಿಶ್ರಮಿಸಬೇಕಾದ ಅಗತ್ಯವಿದೆ ಎಂದೇ ಹೇಳಿದರು.
ಭಾರತ ಮತ್ತು ಫ್ರಾನ್ಸ್ ಪೌರ ಪರಮಾಣು ಸಹಕಾರ, ಬಾಹ್ಯಾಕಾಶ ಸರಕಾರ, ಭಾರತೀಯ ರೈಲ್ವೆಗೆ ವಿದ್ಯುತ್ ಚಾಲಿತ ತಂತ್ರಜ್ಞಾನದ ವರ್ಗಾವಣೆ ಮುಂತಾಗಿ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 14 ಒಪ್ಪಂದಗಳಿಗೆ ಸಹಿ ಹಾಕಿದವು.
40ರ ಹರೆಯದ ಮ್ಯಾಕ್ರನ್ ಅವರು ಉಭಯ ದೇಶಗಳ ನಡುವಿನ ಬಾಂಧವ್ಯ ವೃದ್ಧಿಯಲ್ಲಿ ಇದೊಂದು ಹೊಸ ಯುಗದ ಆರಂಭ ಎಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಜಂಟಿ ಹೇಳಿಕೆಯಲ್ಲಿ , ವರ್ಣಿಸಿದರು.
ಶುಕ್ರವಾರ ತಡರಾತ್ರಿ ಪತ್ನಿ ಬಿಗ್ರಿಟ್ ಹಾಗೂ ಉನ್ನತ ಉದ್ಯಮಿಗಳು ಮತ್ತು ಅಧಿಕಾರಿಗಳ ತಂಡದೊಂದಿಗೆ ಆಗಮಿಸಿದ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಪ್ರಧಾನಿ ಮೋದಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಇಬ್ಬರೂ ಪರಸ್ಪರ ಆತ್ಮೀಯ ಅಪ್ಪುಗೆಯನ್ನು ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!
Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್ಫೇಕ್ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ
Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.