ತಾಲೂಕು ಕಚೇರಿ ಲಂಚಮುಕ್ತಗೊಳಿಸಿ


Team Udayavani, Mar 10, 2018, 5:04 PM IST

kol-1.jpg

ಕೋಲಾರ: ಬಂಗಾರಪೇಟೆ ತಹಶೀಲ್ದಾರ್‌ ಆಗಿ ಕೆಎಎಸ್‌ ಅಧಿಕಾರಿಯನ್ನೇ ನೇಮಕ ಮಾಡಬೇಕು ಮತ್ತು ತಾಲೂಕು
ಕಚೇರಿ ಹಾಗೂ ಇತರೆ ಕಚೇರಿಗಳನ್ನು ಲಂಚಮುಕ್ತಗೊಳಿಸಬೇಕೆಂದು ಒತ್ತಾಯಿಸಿ ಜನಾಧಿಕಾರ ಸಂಘಟನೆ ಮುಖಂಡರು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುಖಂಡರು, ಈಗಾಗಲೇ ಸಂಘಟನೆಯಿಂದ ಈ ವಿಷಯದ ಬಗ್ಗೆ ಪ್ರತಿಭಟನೆ ನಡೆಸಿದ್ದು, ತಮ್ಮ ಗಮನಕ್ಕೂ ತಂದಿದ್ದೇವೆ. ಆದರೂ, ಯಾವುದೇ ಕ್ರಮ ಕೈಗೊಂಡಿಲ್ಲ. ಯಾವುದೇ ಸರ್ಕಾರದ ಆದೇಶವಿಲ್ಲದೆ ಮತ್ತು ಚುನಾವಣಾ ನೀತಿ ಸಂಹಿತೆ ಜಾರಿಯಾಗದೆ ಕಚೇರಿ ಮುಂಭಾಗದಲ್ಲಿ ನಾಮಫ‌ಲಕ ಹಾಕಿದ್ದಾರೆ. ಈ ಮೂಲಕ ಇಲ್ಲಿನ ತಾಲೂಕು ಅಧಿಕಾರಿಗಳು ಪ್ರತಿಭಟನೆ ಮತ್ತು ಸಾರ್ವಜನಿಕರ ಹಕ್ಕುಗಳನ್ನು ಮೊಟುಕುಗೊಳಿಸಲು ಯತ್ನಿಸುತ್ತಿದ್ದಾರೆಂದು ಆರೋಪಿಸಿದರು.

ಫೆ.24 ರಂದು ಕಚೇರಿ ಮುಂಭಾಗದಲ್ಲಿ ನಡೆದ ಬಗರ್‌ ಹುಕುಂ ಸಾಗುವಳಿ ಚೀಟಿ ವಿತರಣಾ ಕಾರ್ಯಕ್ರಮದಲ್ಲಿ
ಕೆಲವರಿಗೆ ಚೀಟಿ ವಿತರಿಸಿ, ಒಂದು ವಾರದೊಳಗೆ ಉಳಿದ ಫ‌ಲಾನುಭವಿಗಳಿಗೆ ವಿತರಿಸುವುದಾಗಿ ಘೋಷಣೆ
ಮಾಡಿದ್ದಾರೆ. ಆದರೆ, ಇದುವರೆಗೂ ಸಾಗುವಳಿ ಚೀಟಿಗಳನ್ನು ನೀಡಿಲ್ಲ. ಈ ಬಗ್ಗೆ ತಾವು ಗಮನ ಹರಿಸಿ ಕಚೇರಿಗೆ ಗ್ರಾಮಿಣ ಪ್ರದೇಶದಿಂದ ರೈತರು ಅಲೆದಾಡುವುದನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು. ತಾಲೂಕು ಕಚೇರಿಯ ಕೆಲವು ಅಧಿಕಾರಿಗಳು ಸುಮಾರು ವರ್ಷಗಳಿಂದ ಇದೇ ಕಚೇರಿಯಲ್ಲಿ ಠಿಕಾಣಿ ಹೂಡಿದ್ದಾರೆ. ಸಾರ್ವಜನಿಕರಿಗೆ ಯಾವುದೇ ಕೆಲಸ ಕಾರ್ಯಗಳನ್ನು ಮಾಡಿಕೊಡದೆ, ಕನಿಷ್ಠ ಗೌರವವನ್ನೂ ಕೊಡುತ್ತಿಲ್ಲ. ಮೂರು ವರ್ಷಕ್ಕೂ ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಬೇರುಬಿಟ್ಟಿರುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಿ, ಸಾರ್ವಜನಿಕರಿಗೆ ಅನಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.

ಜನಸಾಮಾನ್ಯರಿಗೆ ಹಾಗೂ ಪ್ರಗತಿಪರ ಸಂಘಟನೆಗಳಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಕಚೇರಿ ಮುಂಭಾಗದಲ್ಲಿ ಅವಕಾಶ ಮಾಡಿಕೊಡಬೇಕು. ಲಂಚಮುಕ್ತ ತಾಲೂಕು ಕಚೇರಿ ಎಂದು ಪ್ರತಿ ಇಲಾಖೆ ಮುಖ್ಯಸ್ಥರ ಕೊಠಡಿ ಮುಂದೆ ಫ‌ಲಕ ಹಾಕಬೇಕೆಂದು ಒತ್ತಾಯಿಸಿದರು. ನಿಯೋಗದಲ್ಲಿ ಜನಾಧಿಕಾರ ಸಂಘಟನೆ ಜಿಲ್ಲಾಧ್ಯಕ್ಷ
ಕೆ.ರಾಮಮೂರ್ತಿ, ತಾಲೂಕು ಅಧ್ಯಕ್ಷ ಎಸ್‌.ಕೆ.ಜಗದೀಶ್‌, ಗ.ರಾಮಕ್ಕ, ನಾರಾಯಣಮ್ಮ, ಕವಿತಾ ಮುಂತಾದವರು
ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.