ಕಲ್ಲೇರಿ: ಚರಂಡಿ ನಿರ್ಮಾಣಕ್ಕೆ 4 ಲಕ್ಷ ಮಂಜೂರು, ಕಾಮಗಾರಿ ಪರಿಶೀಲನೆ
Team Udayavani, Mar 10, 2018, 5:26 PM IST
ಉಪ್ಪಿನಂಗಡಿ: ತಣ್ಣೀರುಪಂಥ ಗ್ರಾ. ಪಂ. ವ್ಯಾಪ್ತಿಯ ಕಲ್ಲೇರಿ ಪೇಟೆಯ ಜನರ ಬಹುಕಾಲದ ಬೇಡಿಕೆಯಾಗಿದ್ದ ಚರಂಡಿ ನಿರ್ಮಾಣ ಕಾಮಗಾರಿಗೆ 4 ಲಕ್ಷ ರೂ. ಮಂಜೂರು ಆಗಿದ್ದು, ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಕಲ್ಲೇರಿ ಪೇಟೆಯಲ್ಲಿ 78 ಮೀಟರ್ ಉದ್ದಕ್ಕೆ ಡಿಎಂಎಫ್ ಯೋಜನೆ ಅಡಿಯಲ್ಲಿ ಚರಂಡಿಗೆ ಕಾಂಕ್ರೀಟ್ ಕಾಮಗಾರಿಗೆ ಅನುದಾನ ಮಂಜೂರು ಆಗಿದ್ದು, ಕಾಮಗಾರಿಯ ಗುಣಮಟ್ಟದ ಬಗ್ಗೆ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಯವಿಕ್ರಂ, ಸದಸ್ಯ ಅಯೂಬ್, ತಾಜುದ್ದೀನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಗುತ್ತಿಗೆದಾರರಿಗೆ ಸೂಚನೆ
ಚರಂಡಿ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದ ಗ್ರಾಮ ಪಂಚಾಯತ್ ಅಧ್ಯಕ್ಷ ಜಯವಿಕ್ರಂ, ಒಂದು ಕಡೆ ಸಣ್ಣ ಪುಟ್ಟ ಲೋಪ ದೋಷ ಕಂಡು ಬಂದಿದ್ದು, ಇದನ್ನು ಸರಿಪಡಿಸಲು ಸೂಚನೆ ನೀಡಲಾಗಿದೆ. ಅದಾಗ್ಯೂ ಈ ಚರಂಡಿಯ ಪೂರ್ಣ ಪ್ರಮಾಣದ ಕಾಮಗಾರಿಗೆ ಅನುದಾನ ಮಂಜೂರು ಆಗಿರುವುದಿಲ್ಲ, ಆದರೆ ಮುಂದೆ ಅನುದಾನ ಒದಗಿಸುವ ಭರವಸೆಯೊಂದಿಗೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Sullia: ಬಿಎಸ್ಸೆನ್ನೆಲ್ ಟವರ್‌ಗೆ ಸೋಲಾರ್ ಪವರ್!
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.