ಸತತ ನಾಲ್ಕನೇ ಬಾರಿಗೆ ಭಯ್ಯಾಜಿ ಜೋಷಿ ಆಯ್ಕೆ


Team Udayavani, Mar 11, 2018, 6:05 AM IST

Suresh-Bhaiyyaji-Joshi.jpg

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ( ಪ್ರಧಾನ ಕಾರ್ಯದರ್ಶಿ)ರಾಗಿ ಸತತ ನಾಲ್ಕನೇ ಬಾರಿಗೆ ಸುರೇಶ್‌ ಭಯ್ಯಾಜಿ ಜೋಷಿ ಅವರೇ ಆಯ್ಕೆಯಾಗಿದ್ದಾರೆ.

ಇಲ್ಲಿನ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಲ್ಲಿ ನಡೆಯುತ್ತಿರುವ ಮೂರು ದಿನಗಳ ಪ್ರತಿನಿಧಿ ಸಭೆಯಲ್ಲಿ ಜೋಷಿ ಅವರೇ ಪುನರಾಯ್ಕೆಯಾಗಿದ್ದಾರೆ ಎಂದು ಪ್ರಚಾರ ಪ್ರಮುಖ್‌ ಮನಮೋಹನ್‌ ವೈದ್ಯ ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ನ ಎರಡನೇ ಅತ್ಯಂತ ಮಹತ್ವದ ಹುದ್ದೆ ಎಂದೇ ಪರಿಗಣಿಸಲಾಗಿರುವ ಸರಕಾರ್ಯವಾಹ ಸ್ಥಾನಕ್ಕೆ ಕರ್ನಾಟಕದ ದತ್ತಾತ್ರೇಯ ಹೊಸ ಬಾಳೆ ಅವರು ಆಯ್ಕೆಯಾಗಲಿದ್ದಾರೆ ಎಂಬ ಮಾತುಗಳು ಕೆಲ ದಿನಗಳಿಂದ ಕೇಳಿ ಬರುತ್ತಿದ್ದವು. ಆದರೆ, ಈ ಸಭೆಯಲ್ಲಿ ಬೇರೊಬ್ಬರ ಆಯ್ಕೆ ಬಗ್ಗೆ ಚರ್ಚೆಯೇ ನಡೆಯಲಿಲ್ಲ ಎಂದು ವೈದ್ಯ ಹೇಳಿದ್ದಾರೆ. ಇದೇ ವೇಳೆ ವಿ. ನಾಗರಾಜ್‌ ಅವರು ಕ್ಷೇತ್ರೀಯ ಸಂಘಚಾಲಕ್‌ ಆಗಿ ಮರು ಆಯ್ಕೆ ಯಾಗಿದ್ದಾರೆ. 2021ರ ವರೆಗೆ ಈ ಹುದ್ದೆ ಯಲ್ಲಿ ಕಾರ್ಯನಿರ್ವ ಹಿಸಲಿರುವ ಜೋಷಿ ಅವರು, ದೀರ್ಘಾವಧಿ ವರೆಗೆ ಈ ಹುದ್ದೆ ಯಲ್ಲಿ ಕಾರ್ಯ ನಿರ್ವಹಿಸಿದ ಎಚ್‌.ವಿ.ಶೇಷಾದ್ರಿ ಅವರ ದಾಖಲೆ ಹತ್ತಿರಕ್ಕೆ ಬರಲಿದ್ದಾರೆ. ಶೇಷಾದ್ರಿ ಅವರು 1987ರಿಂದ 2000 ರವರೆಗೆ ಈ ಹುದ್ದೆಯಲ್ಲಿದ್ದರು.
 
ಮಾತೃ ಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ: ಮಾತೃ ಭಾಷೆ ಅಥವಾ ಯಾವುದೇ ಭಾರತೀಯ ಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ಒದಗಿಸಬೇಕು. ಇದಕ್ಕಾಗಿ ಸರಕಾರ ಸೂಕ್ತ ನೀತಿ ರೂಪಿಸಬೇಕು ಎಂದು ಆರೆಸ್ಸೆಸ್‌ ನಿಲುವಳಿ ಮಂಡಿಸಿದೆ. ಪ್ರತಿನಿಧಿ ಸಭೆಯಲ್ಲಿ ಈ ಸಂಬಂಧ ಒತ್ತಾಯಿಸಲಾಗಿದೆ. ಉನ್ನತ ಶಿಕ್ಷಣದ ಪ್ರವೇಶ ಪರೀಕ್ಷೆಯಲ್ಲೂ ಎಲ್ಲ ಸ್ಥಳೀಯ ಭಾಷೆಯ ಆಯ್ಕೆ ಅವಕಾಶವೂ ಇರಬೇಕು. ಬೋಧನೆ ಮತ್ತು ಅಧ್ಯಯನ ಪಠ್ಯವೂ ಭಾರತೀಯ ಭಾಷೆಯಲ್ಲಿ ಲಭ್ಯವಾಗಬೇಕು ಎಂದು ನಿಲುವಳಿಯಲ್ಲಿ ವಿವರಿಸಲಾಗಿದೆ.

ಆಕಾಶವಾಣಿಗಿಂತ ಪ್ರಭಾವಿ: ಭಾರತದ ಶೇ.92ರಷ್ಟು ಭೂಭಾಗವನ್ನು ಆಕಾಶವಾಣಿ ವ್ಯಾಪಿಸಿದ್ದರೆ, ಆರೆಸ್ಸೆಸ್‌ ಶೇ. 95 ರಷ್ಟು ಭೂಭಾಗ ವ್ಯಾಪಿಸಿದ್ದಾಗಿ ಹೇಳಲಾಗಿದೆ. ನಾಗಾ ಲ್ಯಾಂಡ್‌, ಮಿಜೋರಾಂ, ಕಾಶ್ಮೀರದ ಕೆಲ ಭಾಗ ಹೊರತು ಪಡಿಸಿ ಬಹುತೇಕ ಪ್ರದೇಶಗಳನ್ನು ವ್ಯಾಪಿಸಿದ್ದೇವೆ ಎಂದು ಆರೆಸ್ಸೆಸ್‌ನ ಜಂಟಿ ಪ್ರಧಾನ ಕಾರ್ಯದರ್ಶಿ ಕೃಷ್ಣ ಗೋಪಾಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why do most earthquakes occur in the Himalayan foothills?

Earthquakes: ಹಿಮಾಲಯದ ತಪ್ಪಲಲ್ಲಿ ಅತೀ ಹೆಚ್ಚು ಭೂಕಂಪ ಸಂಭವಿಸುವುದೇಕೆ?

“Bharatpol” for international police cooperation

Bharatpol: ಅಂತಾರಾಷ್ಟ್ರೀಯ ಪೊಲೀಸ್‌ ಸಹಕಾರಕ್ಕೆ “ಭಾರತ್‌ಪೋಲ್‌’

Kerala: Skull found in fridge of house that had been abandoned for 20 years!

Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!

Indian astronomers discover the creation of a new galaxy!

Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!

Shahrukh’s wife Gauri converted?: Deep fake photo viral

AI: ಶಾರುಖ್‌ ಪತ್ನಿ ಗೌರಿ ಮತಾಂತರ?: ಡೀಪ್‌ ಫೇಕ್‌ ಫೋಟೋ ವೈರಲ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.