14 ಒಪ್ಪಂದಕ್ಕೆ ಭಾರತ-ಫ್ರಾನ್ಸ್‌ ಸಹಿ

Team Udayavani, Mar 11, 2018, 6:00 AM IST

PTI3_10_2018_000076a.jpg

ಹೊಸದಿಲ್ಲಿ: ಭಾರತ ಮತ್ತು ಫ್ರಾನ್ಸ್‌ ನಡುವಿನ ವ್ಯೂಹಾತ್ಮಕ ಸಂಬಂಧದಲ್ಲಿ ಮಹತ್ವದ ಮೈಲುಗಲ್ಲು ಎಂಬಂತೆ ಶನಿವಾರ ಉಭಯ ರಾಷ್ಟ್ರಗಳು ರಕ್ಷಣೆ, ಭದ್ರತೆ, ಪರಮಾಣು ಶಕ್ತಿ ಸೇರಿದಂತೆ 14 ಒಪ್ಪಂದಗಳಿಗೆ ಸಹಿ ಹಾಕಿವೆ.

4 ದಿನಗಳ ಭಾರತ ಪ್ರವಾಸ ಆರಂಭಿಸಿರುವ ಫ್ರಾನ್ಸ್‌ ಅಧ್ಯಕ್ಷ ಇಮಾನ್ಯುವಲ್‌ ಮ್ಯಾಕ್ರನ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ದ್ವಿಪಕ್ಷೀಯ ಮಾತುಕತೆಯ ಬಳಿಕ, ಅವರ ಸಮ್ಮುಖದಲ್ಲೇ ಒಪ್ಪಂದಗಳಿಗೆ ಸಹಿ ಹಾಕಲಾಯಿತು. ಎರಡೂ ದೇಶಗಳ ಸಶಸ್ತ್ರ ಪಡೆಗಳ ನಡುವೆ ಪರಸ್ಪರ ಲಾಜಿಸ್ಟಿಕ್‌ ಸಹಕಾರ, ರಹಸ್ಯ ಅಥವಾ ಸಂರಕ್ಷಿತ ದಾಖಲೆಗಳಿಗೆ ಭದ್ರತೆ ನೀಡುವ ಒಪ್ಪಂದವೂ ಇವುಗಳಲ್ಲಿ ಸೇರಿದೆ. ಫ್ರಾನ್ಸ್‌ನಿಂದ ತರಿಸಲಾಗುತ್ತಿರುವ ರಫೇಲ್‌ ಯುದ್ಧವಿಮಾನಗಳ ಕುರಿತು ವಿವಾದ ಎದ್ದಿರುವಂತೆಯೇ ಇಂತಹುದೊಂದು ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ.
 
ಮಾತುಕತೆ ಬಳಿಕ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ರಕ್ಷಣಾ ಸಹಕಾರವು ಅತ್ಯಂತ ಬಲಿಷ್ಠವಾಗಿದ್ದು, ಹೆಚ್ಚು ವಿಶ್ವಾಸಾರ್ಹ ರಕ್ಷಣಾ ಪಾಲುದಾರ ರಾಷ್ಟ್ರಗಳ ಪೈಕಿ ಫ್ರಾನ್ಸ್‌ ಕೂಡ ಒಂದು ಎಂದು ಹೇಳಿದ್ದಾರೆ. ಸಶಸ್ತ್ರಪಡೆಗಳ ನಡುವಿನ ಸಹಕಾರವು ರಕ್ಷಣಾ ಸಂಬಂಧದಲ್ಲಿ ಸುವರ್ಣ ಹೆಜ್ಜೆ ಎಂದೂ ಅವರು ಬಣ್ಣಿಸಿದ್ದಾರೆ. ಇದೇ ವೇಳೆ ಮಾತನಾಡಿದ ಮ್ಯಾಕ್ರನ್‌, ಪೆಸಿಫಿಕ್‌ ಮತ್ತು ಹಿಂದೂ ಮಹಾಸಾಗರದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡಿಕೊಳ್ಳುವಲ್ಲಿ ಎರಡೂ ದೇಶಗಳು ಬದ್ಧವಾಗಿರಲಿದೆ ಎಂದಿದ್ದಾರೆ. ಜತೆಗೆ, ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲೂ ಉಭಯ ದೇಶಗಳು ಜತೆಯಾಗಿರಲಿವೆ ಎಂದಿದ್ದಾರೆ ಮ್ಯಾಕ್ರನ್‌.

ಫ್ರೆಂಡ್‌ ಕ್ಲಬ್‌ ಆರಂಭ: ಪ್ರಧಾನಿ ಮೋದಿಯವರ ಕ್ಷೇತ್ರವಾದ ವಾರಾಣಸಿಯ ಅಸ್ಸಿ ಘಾಟ್‌ನಲ್ಲಿ “ಇಂಡೋ ಫ್ರೆಂಚ್‌ ಫ್ರೆಂಡ್ಸ್‌ ಕ್ಲಬ್‌’ ಎಂಬ ನೂತನ ಸಂಸ್ಥೆ ಆರಂಭಿಸಲಾಗಿದೆ. ಮ್ಯಾಕ್ರನ್‌ ಹಾಗೂ ಪ್ರಧಾನಿ ಮೋದಿ ಸದ್ಯದಲ್ಲೇ ವಾರಾಣಸಿಗೆ ಭೇಟಿ ನೀಡಲಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರು ಮತ್ತು ಫ್ರಾನ್ಸ್‌ ನಾಗರಿಕರು ಈ ಸಂಸ್ಥೆ ಸ್ಥಾಪಿಸಿದ್ದಾರೆ. 

ವಾರಣಾಸಿಯಲ್ಲಿ ಅಧ್ಯಾತ್ಮ, ಸಂಸ್ಕೃತಿ ಅಧ್ಯಯನಕ್ಕಾಗಿ  ಫ್ರಾನ್ಸ್‌ ನಾಗರಿಕರು ಅನೇಕ ವರ್ಷಗಳಿಂದ ನೆಲೆಸಿದ್ದಾರೆ. ಹಾಗೆ ಬರುವ ಫ್ರಾನ್ಸ್‌ ನಾಗರಿಕರು ಹಾಗೂ ಭಾರತೀಯರ ನಡುವಿನ ಸಂಪರ್ಕ ಸಾಧ್ಯತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ಲಬ್‌ ಆರಂಭಿಸಲಾಗಿದೆ.

ವಾಯುಪಡೆಗೆ ರಫೇಲ್‌? ಏತನ್ಮಧ್ಯೆ, ಫ್ರಾನ್ಸ್‌ನ ರಕ್ಷಣಾ ಸಚಿವೆ ಫ್ಲಾರೆನ್ಸ್‌ ಪಾರ್ಲಿ, ಭಾರತದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಫೆ. 26ರಂದು ಪತ್ರ ಬರೆದಿದ್ದು, ಅದರಲ್ಲಿ ಭಾರತೀಯ ವಾಯುಪಡೆಗೆ ಈಗಾಗಲೇ ಫ್ರಾನ್ಸ್‌ನಿಂದ ಬರಬೇಕಿರುವ ರಫೇಲ್‌ ಯುದ್ಧ ವಿಮಾನಗಳನ್ನು ಹೊರತುಪಡಿಸಿ, ಹೆಚ್ಚುವರಿಯಾಗಿ 36 ಯುದ್ಧ ವಿಮಾನಗಳನ್ನು ಒದಗಿಸುವ ಬಗ್ಗೆ ಖಾತ್ರಿ ನೀಡಿದ್ದಾರೆ. ಈ ವಿಚಾರವನ್ನು, ಶನಿವಾರ, ಮೋದಿ-ಮ್ಯಾಕ್ರನ್‌ ಅವರ ಜಂಟಿ ಸುದ್ದಿಗೋಷ್ಠಿ ಯಲ್ಲಿ ಪ್ರಕಟಿಸಲಾಗಿಲ್ಲ. ಆದರೂ, ಈ ಹೊಸ ಒಪ್ಪಂದದ ವಿಚಾರದ ಬಗ್ಗೆ ಫ್ಲಾರೆನ್ಸ್‌ ಪತ್ರದಲ್ಲಿ ವಿವರಿಸಲಾಗಿದೆ ಎಂದು ಎನ್‌ಡಿಟಿವಿ ಹೇಳಿದೆ. .

ಸ್ಪೈಸ್‌ಜೆಟ್‌ ಭಾರೀ ಮೊತ್ತದ ಡೀಲ್‌
ವಿಮಾನಯಾನ ಕ್ಷೇತ್ರದಲ್ಲೇ ಅತಿ ದೊಡ್ಡ ಒಪ್ಪಂದವೊಂದನ್ನು ಸ್ಪೈಸ್‌ ಜೆಟ್‌ ಶನಿವಾರ ಫ್ರಾನ್ಸ್‌ನ ಸ್ಯಾಫ್ರಾನ್‌ ಗ್ರೂಪ್‌ನೊಂದಿಗೆ ಮಾಡಿ ಕೊಂಡಿದೆ. ಸಿಎಫ್ಎಂ ಏರ್‌ಕ್ರಾಫ್ಟ್ ಎಂಜಿನ್‌ಗೆ ಸಂಬಂಧಿಸಿದ ಒಪ್ಪಂದ ಇದಾಗಿದ್ದು, ಈ ಡೀಲ್‌ನ ಮೊತ್ತವು 80 ಸಾವಿರ ಕೋಟಿ ರೂ.ಗಿಂತಲೂ ಹೆಚ್ಚು ಎಂದು ಕಂಪನಿ ತಿಳಿಸಿದೆ. 155 ಬೋಯಿಂಗ್‌ 737 ಮ್ಯಾಕ್ಸ್‌ ವಿಮಾನಗಳಿಗೆ ಲೀಪ್‌-1ಬಿ ಎಂಜಿನ್‌ ಖರೀದಿಸುವ ಒಪ್ಪಂದ ಇದಾಗಿದೆ.

ಬಾಹ್ಯಾಕಾಶ ತಂತ್ರಜ್ಞಾನದಲ್ಲೂ ಸಹಕಾರ ಸಾಧಿಸುವ ನಿಟ್ಟಿನಲ್ಲಿ ಭಾರತ-ಫ್ರಾನ್ಸ್‌ ಹೆಜ್ಜೆಯಿಟ್ಟಿದೆ. ಕೆಲ ಪ್ರಮುಖ ಪ್ರದೇಶಗಳಲ್ಲಿ ನೌಕೆಗಳ ಪತ್ತೆ, ಗುರುತಿಸುವಿಕೆ ಮತ್ತು ನಿಗಾಗೆ ಸಂಬಂಧಿಸಿ ಇಸ್ರೋ ಮತ್ತು ಸಿಎನ್‌ಇಎಸ್‌ ಒಪ್ಪಂದ ಮಾಡಿಕೊಂಡಿವೆ. ಜತೆಗೆ, ಜೈತಾಪುರ ಅಣುಶಕ್ತಿ ಸ್ಥಾವರದ ಕೆಲಸ ತ್ವರಿತಗೊಳಿಸುವ ಕುರಿತೂ ಮಾತುಕತೆ ನಡೆಸಲಾಗಿದೆ. ಇದೇ ವೇಳೆ, ಅವಶ್ಯಕ ಸಂದರ್ಭಗಳಲ್ಲಿ ಪರಸ್ಪರರ ಸೇನಾ ನೆಲೆ ಬಳಸಿಕೊಳ್ಳುವ ಬಗ್ಗೆಯೂ ಒಪ್ಪಂದ ಮಾಡಿಕೊಳ್ಳಲಾಗಿದೆ. ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ಚೀನಾದ ವಿಸ್ತರಣಾ ಮನೋಭಾವ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಒಪ್ಪಂದ ಮಹತ್ವ ಪಡೆದಿದೆ.

ಮೋದಿ ಅಪ್ಪುಗೆಯ ಸ್ವಾಗತ  
ಶುಕ್ರವಾರ ರಾತ್ರಿ, ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ಹೊಸದಿಲ್ಲಿಗೆ ವಿಮಾನದಲ್ಲಿ ಬಂದಿಳಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಅವರನ್ನು ಖುದ್ದು ಪ್ರಧಾನಿ ಮೋದಿಯವರೇ ಆತ್ಮೀಯವಾಗಿ ಸ್ವಾಗತಿಸಿದರು. ಎಂದಿನಂತೆ, ಮೋದಿಯವರ ಅಪ್ಪುಗೆಯ ಸ್ವಾಗತ, ಮ್ಯಾಕ್ರನ್‌ ಅವರನ್ನು ಖುಷಿಪಡಿಸಿತು. ಆನಂತರ, ಟ್ವಿಟರ್‌ನಲ್ಲಿಯೂ ಮ್ಯಾಕ್ರನ್‌ ಅವರಿಗೆ ಸ್ವಾಗತ ಕೋರಿದ ಮೋದಿ, ಮ್ಯಾಕ್ರನ್‌ ಭೇಟಿ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಯಾಗಿಸುತ್ತದೆ ಎಂದು ಬಣ್ಣಿಸಿದರು. ಇತ್ತೀಚೆಗಷ್ಟೇ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರಾಡ್ನೂ ಭೇಟಿ ವೇಳೆ ಪ್ರಧಾನಿ ಮೋದಿ ಖುದ್ದು ಸ್ವಾಗತಿಸಿಲ್ಲ ಎಂಬ ವಿಚಾರ ಚರ್ಚೆಗೆ ಕಾರಣವಾಗಿತ್ತು.

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.