ಜಕ್ಕೂರು ವಿಮಾನ ನಿಲ್ದಾಣದಲ್ಲಿ ಬೆಂಕಿ!
Team Udayavani, Mar 11, 2018, 10:48 AM IST
ಬೆಂಗಳೂರು: ವಿಮಾನ ತರಬೇತಿ ಮತ್ತು ವಿವಿಐಪಿ ವಿಮಾನ ಲ್ಯಾಂಡ್ ಆಗುವ ಜಕ್ಕೂರು ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಜೆ 4ಗಂಟೆಗೆ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯನ್ನು ಅಗ್ನಿಶಾಮಕ ದಳ ಸಿಬ್ಬಂದಿ ನಂದಿಸಿದ್ದಾರೆ. ಜಕ್ಕೂರು ರನ್ ವೇ ಸುತ್ತಲ ಪ್ರದೇಶದಲ್ಲಿ ಒಣಗಿದ ಹುಲ್ಲಿಗೆ ಬೆಂಕಿ ಹತ್ತಿಕೊಂಡು ಅಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ, ನಂತರ ಹೆಚ್ಚು ಸ್ಥಳವನ್ನು ವ್ಯಾಪಿಸಿದೆ. ಇದನ್ನು ಗಮನಿಸಿದ ಸಿಬ್ಬಂದಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಮೂರು ಅಗ್ನಿಶಾಮಕ ವಾಹನದಲ್ಲಿ ಬಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಯಾರೋ ಸಿಗರೇಟ್ ಸೇದಿ ಒಣ ಹುಲ್ಲಿಗೆ ಎಸೆದ ಪರಿಣಾಮ ಕಿಡಿ ಒಣ ಹುಲ್ಲಿಗೆ ತಾಗಿ ದೊಡ್ಡದಾಗಿ ವ್ಯಾಪಿಸಿದೆ ಎಂದು ಅಗ್ನಿಶಾಮಕದಳ ಸಿಬ್ಬಂದಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಜಕ್ಕೂರಿನಲ್ಲಿ ಯಾವುದೇ ವಿಮಾನಗಳ ಲ್ಯಾಂಡಿಂಗ್‌ಗೆ ಅವಕಾಶ ನೀಡಲಿಲ್ಲ. ವಿಐಪಿ ವಿಮಾನಗಳು ಎಚ್‌ಎಎಲ…, ಯಲಹಂಕ ಮತ್ತು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಯುವಂತೆ ವ್ಯವಸ್ಥೆ ಮಾಡಲಾಯಿತು ಎಂದು ಮೂಲಗಳಿಂದ ತಿಳಿದು ಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.