4.90 ಕೋ.ರೂ. ವೆಚ್ಚದ ಕಾರ್ಮಿಕ ಭವನಕ್ಕೆ ಶಿಲಾನ್ಯಾಸ
Team Udayavani, Mar 11, 2018, 10:58 AM IST
ಮಹಾನಗರ: ನಗರದ ಕದ್ರಿ- ಯೆಯ್ನಾಡಿಯಲ್ಲಿ ಸುಮಾರು 4.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಾರ್ಮಿಕ ಭವನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಶಾಸಕ ಜೆ.ಆರ್. ಲೋಬೋ ಅವರು ಶಿಲಾನ್ಯಾಸ ನೆರವೇರಿಸಿ, ಒಂದು ವರ್ಷದ ಹಿಂದೆ ಕಾರ್ಮಿಕ ಭವನ ಕಟ್ಟಡಕ್ಕೆ ಮಂಜೂರಾತಿ ದೊರೆತಿದೆ. ಈ ಪ್ರದೇಶದಲ್ಲಿ ಕೆಪಿಟಿ, ಐಟಿಐ, ಮಹಿಳಾ ಐಟಿಐ ಇದ್ದು, ಬಹಳಷ್ಟು ಪ್ರಯೋಜನಕಾರಿಯಾಗಲಿದೆ. ಕಾರ್ಮಿಕರ ವಿವಿಧ ಕಾರ್ಯಕ್ರಮಗಳನ್ನು ಜರಗಿಸಲು, ಇಲಾಖೆಗಳ ಕಾರ್ಯಕ್ರಮ ಹಾಗೂ ಕಾರ್ಮಿಕರಿಗೆ ತರಬೇತಿಯನ್ನು ಕೊಡುವಂತಹ ಕಾರ್ಯಕ್ರಮಗಳನ್ನು ನಡೆಸಲು ಅನುಕೂಲಕರವಾಗಲಿದೆ ಎಂದರು.
ಒಂದು ವರ್ಷದಲ್ಲಿ ಪೂರ್ಣ
ಸುಮಾರು 50 ಸೆಂಟ್ಸ್ ಜಾಗವಿರುವ ಈ ಪ್ರದೇಶದಲ್ಲಿ ಜಿ+2 ಮಾದರಿಯಲ್ಲಿ ಕಟ್ಟಡವನ್ನು ಕಟ್ಟಲಾಗುವುದು. ಕೆಳ ಅಂತಸ್ತು ಕೂಡ ಇರುತ್ತದೆ. ಕಟ್ಟಡದ ವಿಸ್ತೀರ್ಣ 11,000 ಚದರಡಿ ಇದೆ. ಒಂದು ವರ್ಷದ ಅವಧಿಯಲ್ಲಿ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಪಾಲಿಕೆಯ ಹಣಕಾಸು ಸ್ಥಾಯೀ ಸಮಿತಿ ಅಧ್ಯಕ್ಷ ರಾಧಾಕೃಷ್ಣ, ಕೆ.ಎಸ್.ಆರ್.ಟಿ.ಸಿ. ನಿರ್ದೇಶಕ ಟಿ.ಕೆ. ಸುಧೀರ್, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತ ನಾಗರಾಜ್, ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ಗಳಾದ ರವಿಕುಮಾರ್, ದಾಸ್ ಪ್ರಕಾಶ್ ಹಾಗೂ ರಮಾನಂದ ಪೂಜಾರಿ, ಚೇತನ್ ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.