ಇಂದು 50,000 ರೈತರಿಂದ ವಿಧಾನಭವನ ಮುತ್ತಿಗೆ
Team Udayavani, Mar 12, 2018, 9:20 AM IST
ಮುಂಬಯಿ: ಅಖೀಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಬರೋಬ್ಬರಿ 50 ಸಾವಿರ ಅನ್ನದಾತರು ಕಾಲ್ನಡಿಗೆಯಲ್ಲೇ 180 ಕಿ.ಮೀ. ಸಂಚರಿಸಿ, ರವಿವಾರ ಮುಂಬಯಿ ತಲುಪಿದ್ದಾರೆ. ಮಹಾರಾಷ್ಟ್ರ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಹಾಗೂ ಸಾಲಮನ್ನಾ ಸಹಿತ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇವರು ಸೋಮವಾರ ವಿಧಾನಭವನಕ್ಕೆ ಮುತ್ತಿಗೆ ಹಾಕಲಿದ್ದಾರೆ. ರೈತರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಮತ್ತು ಸಾಲ ಮನ್ನಾದ ಭರವಸೆ ನೀಡಿದ್ದ ಸರಕಾರ ಅದನ್ನು ಪೂರೈಸಿಲ್ಲ. ಹೀಗಾಗಿ ನಾವು ಸರಕಾರದಿಂದ ಉತ್ತರ ಬಯಸುತ್ತಿದ್ದೇವೆ ಎಂದು ಕಿಸಾನ್ ಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ನವಾಲೆ ತಿಳಿಸಿದ್ದಾರೆ. 180 ಕಿ.ಮೀ. ಪಾದಯಾತ್ರೆ ಆರಂಭವಾಗುವಾಗ 12 ಸಾವಿರ ರೈತರಿದ್ದರು.
ಅದಕ್ಕೀಗ ಇನ್ನಷ್ಟು ಮಂದಿ ಸೇರಿ ಈಗ ಸಂಖ್ಯೆ 50 ಸಾವಿರ ದಾಟಿದೆ ಎಂದೂ ಅವರು ಹೇಳಿದ್ದಾರೆ. ಇದೇ ವೇಳೆ, ರೈತರು ಮುತ್ತಿಗೆ ಹಾಕುವ ವಿಚಾರ ತಿಳಿಯುತ್ತಿದ್ದಂತೆಯೇ ಸಿಎಂ ದೇವೇಂದ್ರ ಫಡ್ನವೀಸ್ ಅವರು ಸಚಿವ ಗಿರೀಶ್ ಮಹಾಜರ್ ಅವರನ್ನು ಸಂಧಾನಕಾರರಾಗಿ ನೇಮಿಸಿ, ರೈತರ ಬಳಿ ಕಳುಹಿಸಿದ್ದಾರೆ. ಇನ್ನೊಂದೆಡೆ, ವಿಪಕ್ಷ ಕಾಂಗ್ರೆಸ್ ಮತ್ತು ಶಿವಸೇನೆ ರೈತರಿಗೆ ಬೆಂಬಲ ಸೂಚಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.