ಜೀವಿತಾವಧಿವರೆಗೆ ಕ್ಸಿ ಅಧ್ಯಕ್ಷ


Team Udayavani, Mar 12, 2018, 10:15 AM IST

china.jpg

ಬೀಜಿಂಗ್‌:  ಚೀನದ ಹಾಲಿ ಅಧ್ಯಕ್ಷ  ಕ್ಸಿ ಜಿನ್‌ಪಿಂಗ್‌ ತಮ್ಮ ಜೀವಿತಾವಧಿಯವರೆಗೆ ಇದೇ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಚೀನದ ಸಂವಿಧಾನದಲ್ಲಿ ಐತಿಹಾಸಿಕ ತಿದ್ದುಪಡಿ ತಂದು, ಸಂಸತ್‌ನಲ್ಲಿ ಅದಕ್ಕೆ ಒಪ್ಪಿಗೆಯನ್ನೂ ಪಡೆಯಲಾಗಿದೆ.

ಪ್ರಸಕ್ತ ತಿಂಗಳಲ್ಲಿಯೇ ಕ್ಸಿ ಜಿನ್‌ಪಿಂಗ್‌ ಅವರು ಎರಡನೇ ಅವಧಿಗೆ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುವ ಅವಕಾಶ ಪಡೆಯುವವರಿದ್ದರು. ಕಮ್ಯುನಿಸ್ಟ್‌ ಪಾರ್ಟಿ ಆಫ್ ಚೀನ (ಸಿಪಿಸಿ)ದ ಸಂಸ್ಥಾಪಕ ಮಾವೋ ಝೆಡಾಂಗ್‌ ಜೀವಿತಾವಧಿಯವರೆಗೆ ಚೀನದ ಅಧ್ಯಕ್ಷರಾಗಿದ್ದರು. ಅವರ ಬಳಿಕ ಹಾಲಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ಗೆ ಈ ಅವಕಾಶ ಸಿಗುತ್ತಿದೆ. ಹೀಗಾಗಿ ಅಂಥ ಅವಕಾಶ ಪಡೆದ ಎರಡನೇ ವ್ಯಕ್ತಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈ ಬೆಳವಣಿಗೆಯಿಂದಾಗಿ ಚೀನದ ಸಂಸತ್‌, ನ್ಯಾಷನಲ್‌ ಪೀಪಲ್ಸ್‌ ಪಾರ್ಟಿ (ಎನ್‌ಪಿಸಿ) ಆಡಳಿತ ಪಕ್ಷ ಸೂಚಿಸುವ ಅಂಶಗಳಿಗೆ ಒಪ್ಪಿಗೆ ಸೂಚಿಸುವ ರಬ್ಬರ್‌ಸ್ಟಾಂಪ್‌ ಎಂಬ ಅನ್ವರ್ಥ ನಾಮವನ್ನು ಉಳಿಸಿಕೊಂಡಂತಾಗಿದೆ.

ಇದುವರೆಗೆ ಚೀನದಲ್ಲಿ ಅಧ್ಯಕ್ಷರಾದ ವ್ಯಕ್ತಿ ಎರಡು ಬಾರಿಗೆ ಮಾತ್ರ ಆ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ಇತ್ತು. ಚೀನ ಸಂವಿಧಾನದಲ್ಲಿ ಸದ್ಯ ಉಲ್ಲೇಖವಾಗಿರುವ ಅಧ್ಯಕ್ಷ, ಉಪಾಧ್ಯಕ್ಷ ಎಂಬ ಹುದ್ದೆಯನ್ನು ತೆಗೆದುಹಾಕಲು ಕೂಡ ಸಂಸತ್‌ನಲ್ಲಿ ಒಪ್ಪಿಕೊಳ್ಳಲಾಗಿದೆ. ಪ್ರಸ್ತಾವ ಅಂಗೀಕಾರಕ್ಕೆ 2,958 ಮತಗಳು ಬಂದಿವೆ. ಇಬ್ಬರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದರೆ, ಮೂವರು ಗೈರು ಹಾಜರಾಗಿದ್ದರು.

ರವಿವಾರ ನಡೆದ ಮತದಾನದಲ್ಲಿ ಮತಪತ್ರಗಳನ್ನು ಬಳಕೆ ಮಾಡಲಾಗಿತ್ತು. ವಿದ್ಯುನ್ಮಾನ ಮತಯಂತ್ರ ಅಥವಾ ನಿರ್ಧಾರಕ್ಕೆ ಸಮ್ಮತಿ ಸೂಚಿಸಲು ಕೈ ಎತ್ತಿ ಅಭಿಪ್ರಾಯ ತಿಳಿಸುವ ವ್ಯವಸ್ಥೆಯನ್ನು ಅನುಸರಿಸಲಾಗಿರಲಿಲ್ಲ. ಸಂಸತ್‌ನಲ್ಲಿ ಅಧ್ಯಕ್ಷ ಕ್ಸಿ ಅವರು ಮೊದಲು ಎದ್ದು ನಿಂತು ಮತ ಹಾಕಿದರು. ಇದಕ್ಕೂ ಮುನ್ನ ಸಿಪಿಸಿಯ ಉನ್ನತ ಮಟ್ಟದ ಸಮಿತಿಯಾಗಿರುವ ಏಳು ಮಂದಿ ಸದಸ್ಯರು ಸಂವಿಧಾನ ತಿದ್ದುಪಡಿಲಿಗೆ ಒಪ್ಪಿಗೆ ಸೂಚಿಸಿದ್ದರು.

ತಿದ್ದುಪಡಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ರಾಜಕೀಯ ವಿಶ್ಲೇಷಕರು, ಒಂದು ಪಕ್ಷದ ಆಡಳಿತ ಎನ್ನುವುದಕ್ಕಿಂತ ಒಬ್ಬ ವ್ಯಕ್ತಿಯ ಆಡಳಿತ ಎಂಬ ಸ್ಥಿತಿ ಬಂದಿದೆ. ಇದೊಂದು ಚಕ್ರವರ್ತಿಯ ಆಡಳಿತದಂತೆ ಇದೆ. ಅದು ನೆರೆಯ ರಾಷ್ಟ್ರಗಳ ಮೇಲೆ ಪ್ರಭಾವ ಬೀರಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತ- ಚೀನ ಸಂಬಂಧ
ಹಾಲಿ ಅಧ್ಯಕ್ಷರ ಅವಧಿಯಲ್ಲಿಯೇ 73 ದಿನಗಳ ಡೋಕ್ಲಾಂ ವಿವಾದ ಉಂಟಾಗಿತ್ತು. ಕೋಟ್ಯಂತರ ರೂ. ಮೌಲ್ಯದ ವಿವಿಧ ಕಾಮಗಾರಿಗಳಲ್ಲಿ ನೆರೆಯ ರಾಷ್ಟ್ರ ಹೂಡಿಕೆ ಮಾಡಿದೆ. ಅದರಲ್ಲಿ ಚೀನ ಪಾಕಿಸ್ಥಾನ ಇಕಾನಮಿಕ್‌ ಕಾರಿಡಾರ್‌ ಯೋಜನೆಯೂ ಸೇರಿದೆ.

ನೇಪಾಳ, ಶ್ರೀಲಂಕಾ, ಮಾಲ್ಡೀವ್ಸ್‌, ಭೂತಾನ್‌ಗಳಲ್ಲಿಯೂ ಅದು ರಸ್ತೆ ಮತ್ತು ರೈಲು ಸಂಪರ್ಕ ಯೋಜನೆಗಳಲ್ಲಿ ಹೂಡಿಕೆ ಮಾಡಿದೆ. ಇದು ಭಾರತಕ್ಕೆ ವ್ಯೂಹಾತ್ಮಕವಾಗಿ ಸವಾಲೂ ಹೌದು.

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ

1-cali

Los Angeles Wildfires: ಹಾಲಿವುಡ್‌ ಸ್ಟಾರ್‌ಗಳ ಮನೆ ಆಹುತಿ: 10 ಮಂದಿ ಸಾ*ವು

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.