ನ್ಯಾ| ಸದಾಶಿವ ಆಯೋಗ ವರದಿ ಅನುಷ್ಠಾನಕ್ಕೆ ಒತ್ತಾಯ
Team Udayavani, Mar 12, 2018, 1:19 PM IST
ಸೇಡಂ: ನ್ಯಾ| ಎ.ಜೆ. ಸದಾಶಿವ ಆಯೋಗ ರಚಿತ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಮಾದಿಗರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡ ಸೇಡಂನಿಂದ ಕಲಬುರಗಿ ಕಾಲ್ನಡಿಗೆ ಜಾಥಾಕ್ಕೆ ಹಂಪಿ ಮಾತಂಗ ಮಠದ ಪೂರ್ಣಾನಂದ ಸ್ವಾಮೀಜಿ ಚಾಲನೆ ನೀಡಿದರು.
ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಹೊರಟ ಜಾಥಾ ಮುಖ್ಯ ರಸ್ತೆಯಲ್ಲಿ ಸಂಚರಿಸಿ, ಕಲಬುರಗಿ ಕ್ರಾಸ್ ಮೂಲಕ
ಮುಂದುವರಿಯಿತು. ಈ ವೇಳೆ ಮಾತನಾಡಿದ ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾಧ್ಯಕ್ಷ ವಿಜಯಕುಮಾರ ಆಡಕಿ, ಅನೇಕ ವರ್ಷಗಳಿಂದ ಸದಾಶಿವ ಆಯೋಗದ ವರದಿ ಜಾರಿಗಾಗಿ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ಆದರೆ ಯಾವ
ಕಾರಣಕ್ಕಾಗಿ ವರದಿ ಅನುಷ್ಠಾನಕ್ಕೆ ಹಿಂದೇಟು ಹಾಕಲಾಗುತ್ತಿದೆ ಎಂಬುದು ಅರಿಯದಂತಾಗಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹುಬ್ಬಳ್ಳಿ, ಕೂಡಲಸಂಗಮ ಮತ್ತು ಬೆಂಗಳೂರಿನಲ್ಲಿ ನಡೆದ ಸಮಾರಂಭಗಳಲ್ಲಿ ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡುವ ಭರವಸೆ ನೀಡಿ ಈಗ ಕೈ ಚೆಲ್ಲಿ ಕೂತಿದ್ದಾರೆ ಎಂದು ಆರೋಪಿಸಿದರು.
ಜಾಥಾ ವ್ಯವಸ್ಥಾಪಕ ಶ್ರೀಶೈಲ ಎಂ.ಜಿ. ಮಾತನಾಡಿ, ಸರ್ಕಾರ ದಲಿತರ ಶಕ್ತಿ ಅರಿತು ಕೂಡಲೇ ವರದಿ ಜಾರಿಗೆ ಮುಂದಾಗಬೇಕು. ಇಲ್ಲವಾದಲ್ಲಿ ಹೋರಾಟಗಳು ಉಗ್ರ ಸ್ವರೂಪ ಪಡೆದುಕೊಳ್ಳಲಿವೆ ಎಂದು ಹೇಳಿದರು.
ಸುಂದರ ಮಂಗಾ, ಜಗನ್ನಾಥ ಚಿಂತಪಳ್ಳಿ, ಜಾನ ಹೊಸಳ್ಳಿಕರ್, ಮಾರುತಿ ಕೊಡಂಗಲಕರ್, ಗಣಪತರಾವ ಚಿಮ್ಮನಚೋಡ್ಕರ್, ಕಾಶಿನಾಥ ನಾಟೀಕಾರ, ಶರಣಪ್ಪ ಕಣೇಕಲ್, ರಾಮು ಕಣೇಕಲ್, ಲೊಕೇಶ ಹಂದರಕಿ, ಸುರೇಶ ಇವಣಿ, ಮಲ್ಲಿಕಾರ್ಜುನ ರಾಜೊಳ್ಳಿ, ಬಸವರಾಜ ಕಾಳಗಿ, ರಾಜು ಕಾಳಗಿ, ಶಂಭುಲಿಂಗ ನಾಟೀಕಾರ, ಈರಪ್ಪ
ಗುಂಡಗುರ್ತಿ, ಮಹೇಶ, ಹಣಮಂತ ಭರತನೂರ, ಅಶೋಕ ಫೀರಂಗಿ, ಅನಂತಪ್ಪ ಮೋತಕಪಲ್ಲಿ, ವೆಂಕಟಪ್ಪ ಮೋತಕಪಲ್ಲಿ, ಹಣಮಂತ ಲೋಕಪಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.