ಆರೋಗ್ಯ ತಪಾಸಣೆ ಲಾಭ ಪಡೆಯಿರಿ
Team Udayavani, Mar 12, 2018, 4:56 PM IST
ಕೆಂಭಾವಿ: ಗ್ರಾಮೀಣ ಬಡ ಜನರು ಅತ್ಯಾಧುನಿಕ ಆರೋಗ್ಯ ತಪಾಸಣೆಗೆ ನಗರ ಪ್ರದೇಶಗಳಿಗೆ ಹೋಗಿ ಬರುವುದರಿಂದ ಆರ್ಥಿಕ ಹೊರೆಯೊಂದಿಗೆ ಹಲವು ತೊಂದರೆ ಅನುಭವಿಸುವುದು ಸಾಮಾನ್ಯವಾಗಿದೆ. ಇದನ್ನು ಮನಗಂಡು ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಕೈಗೊಳ್ಳಲಾಗಿದ್ದು, ಜನತೆ ಇದನ್ನು ಸದುಪಯೋಗ ಪಡೆದುಕೊಳ್ಳುವಂತೆ ಖ್ಯಾತ ಮಕ್ಕಳ ತಜ್ಞ ಡಾ| ಸುದತ್ ದರ್ಶನಾಪುರ ಕರೆ ನೀಡಿದರು.
ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸ್ಪರ್ಶ ಆಸ್ಪತ್ರೆ ಬೆಂಗಳೂರು, ಬಾಪುಗೌಡ ದರ್ಶನಾಪೂರ ಎಜುಕೇಶನ ಚಾರಿಟೇಬಲ್ ಟ್ರಸ್ಟ್ ಮತ್ತು ಸ್ಪಂದನ ಆಸ್ಪತ್ರೆ ಶಹಾಪುರ ಅವರ ಸಹಯೋಗದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಂಬರುವ ದಿನಗಳಲ್ಲಿ ಗ್ರಾಮೀಣ ಜನತೆ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳುವುದರ ಜೊತೆಗೆ ಟ್ರಸ್ಟ್ ವತಿಯಿಂದ ಗ್ರಾಮೀಣ ಭಾಗದ ಜನರ ಮನೆಬಾಗಿಲಿಗೆ ಉಚಿತ ಉತ್ತಮ ಆರೋಗ್ಯ ಸೇವೆ ನೀಡುವ ಕನಸು ನಮ್ಮದಾಗಿದೆ ಎಂದ ಅವರು, ಪಟ್ಟಣದಲ್ಲಿ ಪ್ರತಿವರ್ಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಖ್ಯಾತ ಮೂಳೆ ತಜ್ಞ ಡಾ| ವೀರೇಶ ಜವಳಿ ಮಾತನಾಡಿ, ಇಂದಿನ ಆಧುನಿಕ ವೈದ್ಯಪದ್ಧತಿ ಸಾಕಷ್ಟು ಬೆಳವಣಿಗೆ ಹೊಂದಿದ್ದು, ಸೂಕ್ತ ಚಿಕಿತ್ಸೆ ಪಡೆಯುವುದರ ಮೂಲಕ ಇಂತಹ ಶಿಬಿರಗಳ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ
ನೀಡಿದರು.
ಶಿಬಿರದಲ್ಲಿ ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಮಕ್ಕಳ ಕಾಯಿಲೆ, ಮೆದುಳು ಮತ್ತು ಬೆನ್ನು ಹುರಿ, ಎದೆಗೂಡಿನ ಸಮಸ್ಯೆ ಸೇರಿದಂತೆ ಹಲವು ರೋಗಗಳಿಗೆ ಉಚಿತ ತಪಾಸಣೆ ಮಾಡಲಾಯಿತು.
ಡಾ| ಎಸ್.ಆರ್. ಸಿನ್ನೂರ, ಡಾ|ಅನಮೋಲ್, ಡಾ| ಸೌಮ್ಯ, ಡಾ| ಕುಲಜೀತ್, ಡಾ| ಮುಖೇಶ, ಡಾ| ಕಟ್ಟಿಮನಿ, ಡಾ| ಕಿರಣ ಜಕರಡ್ಡಿ ಸೇರಿದಂತೆ ಹಲವು ತಜ್ಞ ವೈದ್ಯರಿಂದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನರು ಶಿಬಿರದ ಸದುಪಯೋಗ ಪಡೆದುಕೊಂಡರು.
20 ಜನರನ್ನು ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಉಚಿತ ಹೃದಯ ಶಸ್ತ್ರ ಚಿಕಿತ್ಸೆಗೆ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ಹೇಮರಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಾಂತಗೌಡ ನೀರಲಗಿ, ಸೌಹಾರ್ದ ಸಂಯುಕ್ತ ಸಹಕಾರಿ ಸಂಘದ ನಿರ್ದೇಶಕ ವೈ.ಟಿ. ಪಾಟೀಲ್, ಶರಣಬಸ್ಸು ಡಿಗ್ಗಾವಿ, ಸಂಗನಗೌಡ ಮರಡ್ಡಿ, ಶಿವರಾಜ
ಬೂದೂರು, ಡಾ| ಯಂಕನಗೌಡ ಪಾಟೀಲ್, ಮೋಹನರಡ್ಡಿ ಡಿಗ್ಗಾವಿ, ಗುರುಪಾದಪ್ಪ ಕುಂಬಾರ, ಅಶೋಕ ಭಂಗ್, ಗೌಡಪ್ಪಗೌಡ ಯಡಿಯಾಪೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.