ಲೋಕಾಯುಕ್ತರ ಮೇಲೆ ಹಲ್ಲೆ ನಡೆಸಿದ ಆರೋಪಿ ಸಿಸಿಬಿ ವಶಕ್ಕೆ
Team Udayavani, Mar 13, 2018, 6:40 AM IST
ಬೆಂಗಳೂರು: ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ತೇಜರಾಜ್ನನ್ನು ಸಿಸಿಬಿ ಪೊಲೀಸರು ಮೂರು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ ಸಂಬಂಧ ಈ ಮೊದಲು ತನಿಖೆ ನಡೆಸುತ್ತಿದ್ದ ವಿಧಾನಸೌಧ ಪೊಲೀಸರು ಆರೋಪಿಯನ್ನು ಐದು ದಿನಗಳ ಕಾಲ ವಶಕ್ಕೆ ಪಡೆದಿದ್ದರು. ಸೋಮವಾರ ವಶಕ್ಕೆ ಪಡೆದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ 8 ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರು ಪಡಿಸಿದ್ದರು.
ಬಳಿಕ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು ಆರೋಪಿಯನ್ನು ಮತ್ತೆ ಮೂರು ದಿನಗಳ ಕಾಲ ವಶಕ್ಕೆ ನೀಡುವಂತೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಯನ್ನು ಮೂರು ದಿನಗಳ ಕಾಲ ಸಿಸಿಬಿ ವಶಕ್ಕೆ ನೀಡಿದ್ದಾರೆ.
ಲೋಕಾಯುಕ್ತರು ಸದ್ಯದಲ್ಲೇ ವಾರ್ಡ್ಗೆ
ಲೋಕಾಯುಕ್ತರ ಆರೋಗ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಚೇತರಿಕೆ ಕಂಡು ಬಂದಿದ್ದು, ಸದ್ಯದಲ್ಲೇ ಸಾಮಾನ್ಯ ವಾರ್ಡ್ಗೆ ಸ್ಥಳಾಂತರಿಸಲಿದ್ದಾರೆ. ಪ್ರತಿದಿನ ಮೂರು ಬಾರಿ ಲೋಕಾಯುಕ್ತರ ರಕ್ತದ ಒತ್ತಡ, ಶುಗರ್ ಪ್ರಮಾಣದಲ್ಲಿ ಏರುಪೇರು ಆಗುತ್ತಿದೆ. ಹೀಗಾಗಿ ಸದ್ಯ ಐಸಿಯುನಲ್ಲೇ ಚಿಕಿತ್ಸೆ ಮುಂದುವರಿಸಿದ್ದೇವೆ ಎಂದು ಮಲ್ಯ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.