ಬಿಜೆಪಿ ಸೇರಿದ ರಾಜೀವ್ ಚಂದ್ರಶೇಖರ್
Team Udayavani, Mar 13, 2018, 6:20 AM IST
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ರಾಜೀವ್ ಚಂದ್ರಶೇಖರ್ ಸೋಮವಾರ ಬಿಜೆಪಿ ಸೇರಿದ್ದಾರೆ. ವಿಶೇಷವೆಂದರೆ, ರಾಜ್ಯಸಭೆಗೆ ಪಕ್ಷದ ಟಿಕೆಟ್ ಘೋಷಣೆಯಾದ ಬಳಿಕ ಅವರು ಬಿಜೆಪಿ ಸೇರಿದ್ದಾರೆ.
ಮಲ್ಲೇಶ್ವರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್ ಸಮ್ಮುಖದಲ್ಲಿ ರಾಜೀವ್ ಚಂದ್ರಶೇಖರ್ ಬಿಜೆಪಿ ಸದಸ್ಯತ್ವ ಪಡೆದರು.ಇದಕ್ಕೂ ಮುನ್ನ ಬಸವನಗುಡಿಯ ಗವಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿದ್ದ ರಾಜೀವ್ ಚಂದ್ರಶೇಖರ್ ಅವರು ವಿಶೇಷ ಪೂಜೆ ಸಲ್ಲಿಸಿ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಆಗಮಿಸಿದರು. ಯಡಿಯೂರಪ್ಪ, ಜಗದೀಶ ಶೆಟ್ಟರ್ ಮತ್ತಿತರರು ಆತ್ಮೀಯವಾಗಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಪಕ್ಷ ಸೇರ್ಪಡೆ ಪ್ರಕ್ರಿಯೆ ಮುಗಿಸಿದರು. ನಂತರ ಅಲ್ಲೇ ರಾಜ್ಯಸಭೆಗೆ ಸಲ್ಲಿಸಬೇಕಾದ ನಾಮಪತ್ರ ಸಿದಟಛಿಪಡಿಸಲಾಯಿತು. ಯಡಿಯೂರಪ್ಪ ಮತ್ತು ಜಗದೀಶ ಶೆಟ್ಟರ್ ನಾಮಪತ್ರ ಪರಿಶೀಲಿಸಿದ ಬಳಿಕ ಯಡಿಯೂರಪ್ಪ ಅವರ ಕಾರಿನಲ್ಲೇ ರಾಜೀವ್ ಚಂದ್ರಶೇಖರ್ ಅವರು ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಲು ವಿಧಾನಸೌಧಕ್ಕೆ ತೆರಳಿದರು.
ಎನ್‌ಡಿಎ ನಂಟು: ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಸದಸ್ಯರಾಗಿ ಕರ್ನಾಟಕದಿಂದ ಎರಡು ಬಾರಿ ರಾಜ್ಯಸಭೆಗೆ
ಆಯ್ಕೆಯಾಗಿದ್ದ ರಾಜೀವ್ ಚಂದ್ರಶೇಖರ್ ಅವರು ಈಗ ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಆದರೆ, ಎನ್‌ಡಿಎ ಜತೆ ಮೊದಲಿನಿಂದಲೂ ಅವರು ನಂಟು ಹೊಂದಿದ್ದರು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಈ ನಂಟು ಮತ್ತಷ್ಟು ಗಟ್ಟಿಯಾಯಿತಲ್ಲದೆ, ಬಿಜೆಪಿ ನೇತೃತ್ವದ ಎನ್‌ಡಿಎ ಅಂಗಪಕ್ಷಗಳ ಕೇರಳ ಘಟಕದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.
ಆರ್.ಸಿ. ಆಯ್ಕೆಗೆ ಸಮರ್ಥನೆ
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜೀವ್ ಚಂದ್ರಶೇಖರ್ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿರುವ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್,ರಾಜೀವ್ ಚಂದ್ರಶೇಖರ್ ಕರ್ನಾಟಕಕ್ಕೆ ಒಳಿತು ಮಾಡುತ್ತಿರುವ ಕನ್ನಡಿಗರು ಎಂದು ಹೇಳಿದ್ದಾರೆ. ಬೆಂಗಳೂರು ರಕ್ಷಿಸಿ ಪಾದಯಾತ್ರೆ ವೇಳೆ ಮಾತನಾಡಿದ ಅವರು, ರಾಜೀವ್ ಚಂದ್ರಶೇಖರ್ ಕನ್ನಡದವರು. ಇಲ್ಲಿನ ಕೆರೆ, ಪರಿಸರ ಉಳಿವಿಗಾಗಿ ಹೋರಾಟ ಮಾಡಿದ್ದಾರೆ. ಕನ್ನಡ ದೃಶ್ಯ ಮಾಧ್ಯಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಹೀಗಿರುವಾಗ ಅವರನ್ನು ಬೇರೆ ರಾಜ್ಯದವರು ಎನ್ನುವುದು ಸರಿಯಲ್ಲ. ಕೇರಳದಿಂದ ಬಂದಿರುವ ಕೆ.ಜೆ.ಜಾರ್ಜ್, ಎನ್.ಎ.ಹ್ಯಾರಿಸ್ ಅವರನ್ನು ನಾವು ಒಪ್ಪಿಕೊಂಡಿಲ್ಲವೇ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.