ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಮಾನ್ಯತೆ ನೀಡಿ
Team Udayavani, Mar 13, 2018, 11:52 AM IST
ಅಫಜಲಪುರ: ಲಿಂಗಾಯತ ಧರ್ಮ ತನ್ನದೇ ಆದ ವಿಶಿಷ್ಟತೆ ಹೊಂದಿದ ಧರ್ಮವಾಗಿದೆ. ವಿಶ್ವಗುರು ಬಸವಣ್ಣನವರು ಈ ಧರ್ಮದ ಸ್ಥಾಪಕರಾಗಿದ್ದಾರೆ. ಇದು ಹಿಂದೂ ಧರ್ಮದ ಭಾಗವಾಗಿಲ್ಲ ಎನ್ನುವುದಕ್ಕೆ ಸಾಕಷ್ಟು ಉದಾಹರಣೆಗಳು
ಸಿಗುತ್ತವೆ. ಹೀಗಾಗಿ ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಮಾನ್ಯತೆ ಸಿಗಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾದ ಸದಸ್ಯರು ತಹಶೀಲ್ದಾರ್ ಇಸ್ಮಾಯಿಲ್ ಮುಲ್ಕಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಬಸವರಾಜ ಚಾಂದಕವಟೆ, ಶಂಕ್ರೆಪ್ಪ ಮಣೂರ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಜಾತಿ ವ್ಯವಸ್ಥೆ, ವರ್ಣ ವ್ಯವಸ್ಥೆ, ಮೇಲು-ಕೀಳು ಭಾವನೆಗಳು, ತಾರತಮ್ಯ ಮುಂತಾದ ಕೆಟ್ಟ ಆಚರಣೆಗಳನ್ನು ಹೊಂದಿದ ಹಿಂದೂ ಧರ್ಮದ ವಿರುದ್ಧ ನಿಂತು ಸಮ ಸಮಾಜ ನಿರ್ಮಾಣಕ್ಕಾಗಿ ಲಿಂಗಾಯತ ಧರ್ಮ ಸ್ಥಾಪನೆ ಮಾಡಿದ್ದಾರೆ. ಅನುಭವ ಮಂಟಪ ಸ್ಥಾಪಿಸಿ ಎಲ್ಲ ಜಾತಿ, ಜನಾಂಗದವರಿಗೆ ಸಮಾನತೆ ಕಲ್ಪಿಸಿದ್ದಾರೆ. ಬಸವಾದಿ ಶರಣರ ಸಮಾನತೆ ತತ್ವಗಳು ಭಾರತೀಯ ಸಂವಿಧಾನದಲ್ಲೂ ಅಡಕವಾಗಿವೆ.
ಹೀಗಿರುವಾಗ ಬಸವ ಧರ್ಮವಾದ ಲಿಂಗಾಯತ ಧರ್ಮಕ್ಕೆ ಏಕೆ ಸಂವಿಧಾನಿಕ ಮಾನ್ಯತೆ ಸಿಗಬಾರದು ಎಂದು ಪ್ರಶ್ನಿಸಿದ ಅವರು, ಆದಷ್ಟು ಬೇಗ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತ್ಯೇಕ ಲಿಂಗಾಯತ್ ಧರ್ಮ ಮಾನ್ಯತೆಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಒತ್ತಾಯಿಸಿದರು. ಮುಖಂಡರಾದ ಶ್ರೀಮಂತ ಬಿರಾದಾರ, ಸದಾಶಿವ ಮೇತ್ರಿ ಮಾತನಾಡಿದರು.
ಈ ಸಂದರ್ಭದಲ್ಲಿ ಗೋವಿಂದ್ ಭಟ್, ರಾಜುಕುಮಾರ ಬಡದಾಳ, ಹಣಂತ್ರಾಯ ಬಿರಾದಾರ, ಮಹಾದೇವ, ಭಗವಂತ ವಗ್ಗೆ, ರವಿ ಗೌರ, ಅರುಣಕುಮಾರ ಹೂಗಾರ, ನಿಂಗೊಂಡಪ್ಪ, ಶಿವಬಸಪ್ಪ, ಬಸವರಾಜ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.