ರಾಜೀವ್ ಬಣ್ಣನೆ:ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಸಂಕೇಶ್ವರ್
Team Udayavani, Mar 13, 2018, 12:09 PM IST
ಹುಬ್ಬಳ್ಳಿ: ರಾಜ್ಯಸಭಾ ಟಕೆಟ್ ದೊರಕದ ಹಿನ್ನಲೆಯಲ್ಲಿ ಬಿಜೆಪಿ ತೊರೆಯುತ್ತಿದ್ದಾರೆ ಎನ್ನುವ ಸುದ್ದಿಗೆ ಉದ್ಯಮಿ, ಮಾಜಿ ಸಂಸದ ಡಾ.ವಿಜಯ್ ಸಂಕೇಶ್ವರ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು ‘ನಾನು ಯಾವುದೇ ಟಿಕೆಟ್‌ಗೆ ಅರ್ಜಿ ಹಾಕಿಲ್ಲ. ನಾನು 12 ನೇ ವಯಸ್ಸಿನಿಂದ ಆರ್‌ಎಸ್‌ಎಸ್‌ನಲ್ಲಿದ್ದವನು, ನನಗೆ ವಾಜಪೇಯಿ , ಅಡ್ವಾಣಿ ಅವರು 3 ಬಾರಿ ಅರ್ಜಿ ಹಾಕದೆ ಟಿಕೆಟ್ ನೀಡಿದ್ದರು. ಸಚಿವ ಸ್ಥಾನವನ್ನೂ ನೀಡಲು ಮುಂದಾಗಿದ್ದರು ಆದರೆ ನಾನು ಪತ್ರಿಕೆ ಆರಂಭಿಸುವ ಸಲುವಾಗಿ ಬಿಟ್ಟಿದ್ದೆ’ ಎಂದರು.
‘ಬಿಜೆಪಿ ರಾಜ್ಯಾಧ್ಯಕ್ಷ ರಾಗಿದ್ದ ಯಡಿಯೂರಪ್ಪ ಅವರು ನನಗೆ ಎಂಎಲ್‌ಸಿ ಟಿಕೆಟ್ ಕೇಳದೆ ನೀಡಿದ್ದರು. ಮೊನ್ನೆಯೂ ನಿಮ್ಮ ಹೆಸರನ್ನು ಅಂತಿಮಗೊಳಿಸಿದ್ದೇವೆ ಎಂದಿದ್ದರು. ಜಗದೀಶ್ ಶೆಟ್ಟರ್ ಅವರೂ ನನ್ನ ಮತ್ತು ರಾಜೀವ್ ಚಂದ್ರಶೇಖರ್ ಅವರ ಹೆಸರನ್ನು ಅಂತಿಮಗೊಳಿಸಿರುವುದಾಗಿ ದೂರವಾಣಿ ಕರೆ ಮಾಡಿದ್ದರು.ಈಗ ಆಯ್ಕೆಯಾಗಿರುವ ರಾಜೀವ್ ಚಂದ್ರಶೇಖರ್ ಅವರು ನನ್ನ ಆತ್ಮೀಯ ಮಿತ್ರ,2 ಬಾರಿ ಪಕ್ಷೇತರರಾಗಿ ರಾಜ್ಯಸಭಾ ಸದಸ್ಯರಾಗಿದ್ದವರು ಅವರು.ಅದು ಸುಲಭದ ಮಾತಲ್ಲ. ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಅವರು ನನಗಿಂತ ಹೆಚ್ಚು ಶೈಕ್ಷಣಿಕ ಅರ್ಹತೆ ಹೊಂದಿದ್ದಾರೆ.ಅವರಿಗೆ ಅನುಭವವೂ ಇದೆ. ಕೇರಳದಲ್ಲಿ ಬಿಜೆಪಿ ಕಟ್ಟಲು ಅವರ ಕೊಡುಗೆಯೂ ಸಿಗಲಿದೆ’ ಎಂದರು.
‘ರಾಜೀವ್ ಚಂದ್ರಶೇಖರ್ ಅವರು ಕನ್ನಡಿಗರಲ್ಲ ಎಂದು ಭಾರೀ ಚರ್ಚೆ ನಡೆಯುತ್ತಿದೆ. ಇದನ್ನು ನಾನು ಒಪ್ಪುವುದಿಲ್ಲ. ಅವರ ತಂದೆ ಕನ್ನಡಿಗರು, ಅವರು ಕರ್ನಾಟಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಹಾಡಿ ಹೊಗಳಿದರು.
ಬಿಎಸ್‌ವೈ ಸಿಎಂ, ಮೋದಿ ಮತ್ತೆ ಪಿಎಂ
‘ನನಗೆ ಬಿಜೆಪಿಯ ಮೇಲೆ ಯಾವುದೇ ಅಸಮಾಧಾನ ಇಲ್ಲ.ಕಾಂಗ್ರೆಸ್ ಹಠಾವೋ ಕರ್ನಾಟಕದಲ್ಲೂ ಆಗಬೇಕು. ನನ್ನ ಮುಂದಿನ ಗುರಿ ಯಡಿಯೂರಪ್ಪನವರನ್ನು ಮತ್ತೆ ಸಿಎಂ ಮಾಡುವುದು, ಜಗತ್ತಿಗೆ ನಾಯಕನಾಗಿರುವ ನರೇಂದ್ರ ಮೋದಿ ಅವರನ್ನು ಮತ್ತೆ ಪಿಎಂ ಮಾಡುವುದು. ಇದಕ್ಕಾಗಿ ನನ್ನ ಹೆಚ್ಚಿನ ಸಮಯ ಮೀಸಲಿಡುತ್ತೇನೆ’ಎಂದು ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.