ರೌಡಿಶೀಟರ್‌ ಮೇಲೆ ಗುಂಡಿನ ದಾಳಿ


Team Udayavani, Mar 13, 2018, 3:07 PM IST

vij-1.jpg

ವಿಜಯಪುರ: ಜಿಲ್ಲೆಯಲ್ಲಿ ರೌಡಿಗಳ ಹೆಡೆಮುರಿ ಕಟ್ಟುವ ಕಾರ್ಯಾಚರಣೆ ಮತ್ತಷ್ಟು ಚುರುಕುಗೊಂಡಿದ್ದು, ಕಳೆದ 35
ಗಂಟೆಯಲ್ಲಿ ಜಿಲ್ಲೆಯಲ್ಲಿ ಮತ್ತೂಬ್ಬ ರೌಡಿ ಮೇಲೆ ಪೊಲೀಸರು ಆತ್ಮರಕ್ಷಣೆಗೆ ಗುಂಡು ಹಾರಿಸಿ ಗಾಯಗೊಳಿಸಿ ಬಂಧಿಸಿರುವ ಘಟನೆ ಸೋಮವಾರ ನಸುಕಿನಲ್ಲಿ ಜರುಗಿದೆ.

ವಿಜಯಪುರ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಭಾಗವಾಗಿ ನಗರದ ಗಾಂಧಿ ಚೌಕ್‌ ಠಾಣೆ
ಪೊಲೀಸರು ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ನಗರದ ನವಬಾಗ ಸಂದಲಬಾವಡಿ ನಿವಾಸಿ ರೌಡಿ ಶೀಟರ್‌ ಯೂನಿಸ್‌ ಆಕ್ಲಾಸ್‌ ಪಟೇಲ್‌ (25) ಪೊಲೀಸರ ಗುಂಡೇಟಿನಿಂದ ಗಾಯಗೊಂಡ ಆರೋಪಿ. ಆರೋಪಿ ಬಂಧನಕ್ಕಾಗಿ ಸೋಮವಾರ ಬೆಳಗ್ಗೆ 4ರ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಯೂನಿಸ್‌ ಅಡಗಿದ್ದ ಸ್ಥಳದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸ ರಿಂದ ತಪ್ಪಿಸಿಕೊಳ್ಳಲು ಆರೋಪಿಯು ಪಿಎಸ್‌ಐ ಆರೀಫ್‌ ಮುಶಾಪುರಿ, ಪೇದೆ ಎಂ.ಎ. ಮಾದನಶಟ್ಟಿ ಮೇಲೆ ಚಾಕುವಿನಿಂದ ದಾಳಿ ನಡೆಸಿ ಗಾಯಗೊಳಿಸಿದ್ದಾನೆ.

ಚಾಕುವಿನಿಂದ ಇರಿದಿದ್ದು ಅಲ್ಲದೇ ಗಾಜಿನ ಬಾಟಲಿಗಳು ಹಾಗೂ ಕಲ್ಲುಗಳನ್ನು ತೂರಿ ಪರಾರಿಗೆ ಯತ್ನಿಸಿದ್ದು, ಈ ಹಂತದಲ್ಲಿ ಪೊಲೀಸರು ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿ ತನ್ನ ದಾಳಿ ಮುಂದುವರಿಸಿದ್ದಾನೆ. ಈ ಹಂತದಲ್ಲಿ ಎಸೈ ಆರೀಫ್‌ ಅವರು ಆತ್ಮರಕ್ಷಣೆಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದರೆ, ಆರೋಪಿಗೆ ಹಾರಿಸಿದ ಇನ್ನೆರಡು ಗುಂಡುಗಳಲ್ಲಿ ಒಂದು ಆತನ ಕಾಲಿಗೆ ತಗುಲಿ ಗಾಯಗೊಂಡಿದ್ದಾನೆ. ಮತ್ತೂಂಡು ಗುಂಡು ಗುರಿ ತಪ್ಪಿದೆ.
 
ಗುಂಟೇನಿಂದ ಆರೋಪಿ ಕಾಲಿಗೆ ಗಾಯವಾಗಿದ್ದರೆ, ಆರೋಪಿ ಚಾಕು ಇರಿತದಿಂದ ಎಸೈ ಆರೀಫ್‌ ಹಾಗೂ ಪೇದೆ ಎಂ.ಎ. ಮಾದನಶಟ್ಟಿ ಅವರು ಗಾಯಗೊಂಡಿದ್ದು ಕೂಡಲೇ ಗಾಯಾಳುಗಳನ್ನೆಲ್ಲ ಬಿಎಲ್‌ಡಿಇ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿ ತ ಆರೋಪಿ ಮನೆಯಿಂದ 600 ಗ್ರಾಂ ಗಾಂಜಾ ಹಾಗೂ ಒಂದು ಹರಿತವಾದ ತಲವಾರ ವಶಕ್ಕೆ ಪಡೆದಿರುವ ಗಾಂಧಿ ಚೌಕ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಯಾರು ಈ ಯೂನಿಸ್‌?
ನಗರದ ನವಬಾಗ ನಿವಾಸಿಯಾಗಿರುವ ಯೂನಿಸ್‌ 2016, ಮೇ 29 ರಂದು ನಗರದ ಹೃದಯ ಭಾಗದಲ್ಲಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದಾನೆ. ಮತ್ತೂಂದೆಡೆ ಗಾಂಜಾ ಮತ್ತಿನಲ್ಲಿ ಇಟ್ಟಂಗಿಹಾಳದ ಶ್ರೀಶೈಲ ಹಟ್ಟಿ ಎಂಬುವರನ್ನು ಕಲ್ಲು ಜಜ್ಜಿ ಕೊಲೆ ಮಾಡಿದ್ದಾನೆ ಎಂಬ ಆರೋಪ ಸೇರಿ ವಿವಿಧ ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಸೋಮವಾರ ಆರೋಪಿ ಬಂಧನಕ್ಕೆ ಮುಂದಾದಾಗ ಪೊಲೀಸರ ಮೇಲೆ ದಾಳಿಗೆ ಮುಂದಾಗಿ ಗುಂಡೇಟು ತಿಂದು ಪೊಲೀಸರಿಗೆ ಸೆರೆಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿಚೌಕ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಕುಲದೀಪ ಜೈನ್‌
ತಿಳಿಸಿದ್ದಾರೆ.

 ಬಂಧಿಸಲು ಹೋದ  ಪೊಲೀಸರ ಮೇಲೆ ಹಲ್ಲೆಗೆ  ಯತ್ನಿಸಿದ ಯೂನಿಸ್‌  ಆತ್ಮರಕ್ಷಣೆಗೆ ಹಾರಿಸಿದ ಎಸ್‌ಐ ಆರೀಫ್   ಗಾಯಗೊಂಡ ಎಸ್‌ಐ,  ಪೇದೆ, ರೌಡಿಶೀಟರ್‌  ಆಸ್ಪತ್ರೆಗೆ ದಾಖಲು

ಟಾಪ್ ನ್ಯೂಸ್

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.