ಕ್ಷೇತ್ರದ ಅಭಿವೃದ್ಧಿಗಾಗಿ ಆಶೀರ್ವದಿಸಿ
Team Udayavani, Mar 13, 2018, 5:08 PM IST
ಮಾನ್ವಿ: ತಾಲೂಕಿನ ಜನರ ಸೇವೆ ಮತ್ತು ಕ್ಷೇತ್ರದ ಅಭಿವೃದ್ಧಿ ಮಾಡಲು ತಮಗೆ ಒಂದು ಅವಕಾಶ ನೀಡಬೇಕು
ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾನ್ವಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಿಯೋಜಿತ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಮನವಿ ಮಾಡಿದರು.
ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ನಡೆದ ವಿಕಾಸ ಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಅಧಿಕಾರದಲ್ಲಿದೆ. ಅಭಿವೃದ್ಧಿ ಮಾತ್ರ ಶೂನ್ಯವಾಗಿದೆ. ಕೇವಲ
ಭರವಸೆಗಳನ್ನು ನೀಡುತ್ತಾ ಜನರಿಗೆ ಟೋಪಿ ಹಾಕಲಾಗುತ್ತಿದೆ ಎಂದು ಆರೋಪಿಸಿದರು. 2009ರಲ್ಲಿ 26,000 ಮತಗಳನ್ನು ಹಾಗೂ 2013ರಲ್ಲಿ 43,600 ಮತಗಳನ್ನು ಪಡೆದು ಸೋತಿದ್ದೇನೆ.
ಆಗ ನಾನು ರಾಜಕೀಯದಿಂದ ದೂರ ಸರಿಯಲು ನಿರ್ಧರಿಸಿದ್ದೆ. ಆದರೆ ನನ್ನ ತಾಯಿ ರಾಣಿ ರಂಗಮ್ಮನವರು
ಮುಂದಿನ ಬಾರಿ ನೀನು ಗೆಲ್ಲುವೆ ಎಂದು ಹೇಳಿದ್ದಾರೆ. ನನ್ನ ತಂದೆಯವರಾದ ರಾಜಾ ಅಂಬಣ್ಣ ನಾಯಕರು 1978ರಲ್ಲಿ ಶಾಸಕರಾಗಿ ಹಾಗು 1979ರಲ್ಲಿ ಸಚಿವರಾಗಿ ಜನರ ಸೇವೆ ಮಾಡಿದ್ದಾರೆ. ಅವರ ಹೆಸರು ಉಳಿಸುವ ಉದ್ದೇಶದಿಂದ
ಮತ್ತೆ ಚುನುವಾಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದರು.
ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರಗಳು ರೈತರನ್ನು ಸಂಪೂರ್ಣ ಕಡೆಗಣಿಸಿವೆ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ತಾಲೂಕಿನ ಕೊನೆ ಭಾಗದ ರೈತರಿಗೆ ನೀರು ನೀಡುವಲ್ಲಿ ಸ್ಥಳೀಯ ಶಾಸಕರು ಹಾಗೂ ಕಾಡಾ ಅಧ್ಯಕ್ಷರಾಗಿರುವ ಹಂಪಯ್ಯ ನಾಯಕ ವಿಫಲರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ನೂರು ದಿನಗಳಲ್ಲಿ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದರು. ಆದರೆ ಐದು ವರ್ಷವಾದರೂ ಕೆರೆ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.