ಕುರಿಗಾಹಿಗಳಿಗೆ ಸರ್ಕಾರದಿಂದ ನೆರವು


Team Udayavani, Mar 13, 2018, 6:05 PM IST

13.jpg

ಚಿತ್ರದುರ್ಗ: ರಾಜ್ಯ ಸರ್ಕಾರದ ಸಹಾಯಧನದೊಂದಿಗೆ ಕೇಂದ್ರ ಸರ್ಕಾರ ಕುರಿಗಾಹಿಗಳಿಗೆ ಸಾಲ ಸೌಲಭ್ಯ ನೀಡಲಿದೆ ಎಂದು ಕರ್ನಾಟಕ ಕುರಿ ಮತ್ತು ಮೇಕೆ ಮಹಾಮಂಡಳಿ ಅಧ್ಯಕ್ಷ ಪಂಡಿತ್‌ ರಾವ್‌ ಚಿದ್ರಿ ಹೇಳಿದರು.

ನಗರದ ಕ್ರೀಡಾ ಸಂಕೀರ್ಣದಲ್ಲಿ ಕರ್ನಾಟಕ ಕುರಿ ಮತ್ತು ಮೇಕೆ ಸಾಕಣೆದಾರರ ಸಹಕಾರ ಸಂಘಗಳ ಮಹಾ ಮಂಡಳ ಮತ್ತು ಜಿಲ್ಲಾ ಕುರಿ ಮತ್ತು ಉಣ್ಣೆ ಸಹಕಾರ ಸಂಘದ ಆಶ್ರಯದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಒಂದು ದಿನದ ವೈಜ್ಞಾನಿಕ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಸ್ವಾಮ್ಯದ ಎನ್‌ಸಿಟಿಸಿಗೆ ರಾಜ್ಯ ಸರ್ಕಾರ 187 ಕೋಟಿ ರೂ.ಗಳ ಖಾತ್ರಿ ನೀಡಿದೆ. ಇದರಿಂದ ಕುರಿಗಾಹಿಗಳಿಗೆ ಸಾಲ ಸೌಲಭ್ಯ ದೊರೆಯಲಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು.

ಕೃಷಿ ಪೂರಕ ಚಟುವಟಿಕೆ ವ್ಯಾಪ್ತಿಗೆ ಕುರಿಗಾಹಿ ಕೆಲಸ ಬರುವುದರಿಂದ ಸಹಕಾರ ಸಂಘಗಳಲ್ಲಿ ನೀಡುವ ಬಡ್ಡಿ ರಹಿತ ಸಾಲವನ್ನು ಕುರಿಗಾಹಿಗಳಿಗೂ ವಿಸ್ತರಣೆ ಮಾಡಬೇಕು. ಡಿಸಿಸಿ ಬ್ಯಾಂಕ್‌ಗಳಿಗೆ 50 ಸಾವಿರ ರೂ. ಬಡ್ಡಿ ರಹಿತ ಸಾಲ ನೀಡಲು ಮುಖ್ಯಮಂತ್ರಿಗಳು ಆದೇಶಿಸಿದ್ದರೂ ಯಾವೊಬ್ಬ ಕುರಿಗಾಹಿಗೂ ಸಾಲ ನೀಡಲಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ಡಿಸಿಸಿ ಬ್ಯಾಂಕುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ| ಬಿ. ಪ್ರಸನ್ನಕುಮಾರ್‌ ಮಾತನಾಡಿ, ಬಯಲು ಸೀಮೆ ಚಿತ್ರದುರ್ಗ ಜಿಲ್ಲೆ ಇಡೀ ರಾಜ್ಯದಲ್ಲೇ ಕುರಿ ಸಾಕಾಣಿಕೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಇಲ್ಲಿಯ ಅಧಿಕ ಉಷ್ಣಾಂಶದ ಹವಾಮಾನ, ಗುಡ್ಡಗಾಡು ಪ್ರದೇಶ ಕುರಿ ಮೇಕೆ ಸಾಕಾಣಿಕೆಗೆ ಹೇಳಿ ಮಾಡಿಸಿದ ಪ್ರದೇಶವಾಗಿದೆ. ಎಷ್ಟೇ ದೊಡ್ಡ ಪ್ರಮಾಣದಲ್ಲಿ ಸಾಕಣೆ ಮಾಡಿದರೂ ಆಧುನಿಕ ವಿಧಾನ ಅಳವಡಿಸಿಕೊಳ್ಳದ ಹೊರತು ಲಾಭದಾಯಕವಾಗದು ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಕುರಿ ಮತ್ತು ಮೇಕೆ ಮಹಾಮಂಡಳದ ನಿರ್ದೇಶಕರಾದ ಮಹಾಲಿಂಗಪ್ಪ, ಡಾ| ಎಂ. ಮಾರ್ತಾಂಡಪ್ಪ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ| ಸಿ.ತಿಪ್ಪೇಸ್ವಾಮಿ, ಜಿಪಂ ಸದಸ್ಯ ಶಿವಮೂರ್ತಿ ಮತ್ತಿತರರು ಇದ್ದರು.

ಆಧುನಿಕ ವಿಧಾನದಲ್ಲಿ ಕುರಿ ಸಾಕಾಣಿಕೆ ಮಾಡಿ ಹಳೆ ಪದ್ಧತಿಯಲ್ಲಿ ಸಾಂಪ್ರದಾಯಿಕ ವಿಧಾನಗಳಂತೆ ಕುರಿ ಸಾಕಾಣಿಕೆ 
ಮಾಡುವುದರಿಂದ ಯಾವುದೇ ಲಾಭ ಆಗುವುದಿಲ್ಲ. ಹೈಟೆಕ್‌ ಮಾದರಿಯಲ್ಲಿ ಕುರಿ ಸಾಕಾಣಿಕೆ ಮಾಡಲು ಮುಂದಾಗಬೇಕು. ಒಂದೇ ಪ್ರದೇಶದ ತಳಿಗಳ ಮರು ಉತ್ಪಾದನೆಯಿಂದ ಹಲವು ಸವಾಲು ಎದುರಿಸಬೇಕಾಗುತ್ತದೆ. ಅಧಿಕ ತೂಕ, ಹಾಲು ಉತ್ಪಾದನೆ, 
ಎರಡೆರಡು ಮರಿ ಹಾಕುವ ತಳಿಗಳ ಸಂಶೋಧನೆ ಆಗಿದ್ದು, ಅಂತಹ ತಳಿಗಳನ್ನೇ ಸಾಕಬೇಕು. ದಲ್ಲಾಳಿ ವ್ಯವಸ್ಥೆಗೆ ತಿಲಾಂಜಲಿ
ಹಾಡಿ ಮಾರುಕಟ್ಟೆಗಳಲ್ಲೇ ಮಾಂಸ ಮಾರಾಟ ಮಾಡುವ ವ್ಯವಸ್ಥೆ ಬರಲಿದೆ. ಇದರಿಂದ ಕುರಿಗಾಹಿಗಳಿಗೆ ನೇರ ಲಾಭ ಸಿಗಲಿದೆ ಎಂದು ಚಿದ್ರಿ ತಿಳಿಸಿದರು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.