ಮತ ಚಲಾವಣೆಯಿಂದ ನಮಗೇನು ಪ್ರಯೋಜನ?


Team Udayavani, Mar 14, 2018, 10:30 AM IST

14-March-3.jpg

ಮಹಾನಗರ: ನಮಗೆ ಮತ ಚಲಾಯಿಸುವ ಹಕ್ಕು ದೊರೆತಿದೆ. ನಾವು ಮತದಾನ ಮಾಡುತ್ತೇವೆ ಅದರಿಂದ ನಮಗೆ ಏನು ಪ್ರಯೋಜನ ಎಂದು ಲಿಂಗತ್ವ ಅಲ್ಪಸಂಖ್ಯಾಕ, ಆರ್‌.ಜೆ. ಕಾಜಲ್‌ ಪ್ರಶ್ನಿಸಿದರು. ಲಿಂಗತ್ವ ಅಲ್ಪಸಂಖ್ಯಾಕರಲ್ಲಿ ಮತದಾನದ ಕುರಿತು ಜಾಗೃತಿ
ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ಮಂಗಳವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಆಯೋಜಿಸಿದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮತದಾನದ ಬಗ್ಗೆ ನಮಗೆ ಅಪಾರ ಗೌರವವಿದೆ. ಆದರೆ ಮತ ಚಲಾವಣೆಯಿಂದ ನಮಗೆ ನಮ್ಮ ಹಕ್ಕುಗಳು ಸಿಗುತ್ತದೆ ಎಂಬ ನಂಬಿಕೆ ನಮಗಿಲ್ಲ. ಉದ್ಯೋಗ, ವಸತಿ ಸೌಲಭ್ಯಗಳಿಲ್ಲದೆ ಕಳೆದ 20 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಈ ಸಮಸ್ಯೆಗೆ ನಮಗೆ ಈವರೆಗೆ ಪರಿಹಾರ ಸಿಕ್ಕಿಲ್ಲ. ಮತ ಚಲಾಯಿಸುವುದರಿಂದ ನಮ್ಮ ಸಮಸ್ಯೆಗೆ ಪರಿಹಾರ ಸಿಗುವುದಾದರೆ ನಾವು ಮುಂದೆ ಬರುತ್ತೇವೆ. ಲಿಂಗತ್ವ ಅಲ್ಪಸಂಖ್ಯಾಕರರಾದ ನಮಗೆ ಮತದಾನದ ಹಕ್ಕು ಮಾತ್ರವಲ್ಲ, ಸಾಮಾನ್ಯ ಜನರಿಗೆ ದೊರೆಯುವ ಎಲ್ಲ ಹಕ್ಕುಗಳು ದೊರೆಯಬೇಕು ಎಂದು ಅವರು ಮನವಿ ಮಾಡಿಕೊಂಡರು.

ಅಲ್ಪಸಂಖ್ಯಾಕರು ಪ್ರಮಾಣಿಕವಾಗಿ ಭಾಗವಹಿಸಲಿ
ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನ ಗೌಡ ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾಕರನ್ನು ತುಚ್ಚವಾಗಿ ಕಾಣುವ ಸ್ಥಿತಿ ಈಗಿಲ್ಲ. 2012ರಲ್ಲಿ ಉಚ್ಚ ನ್ಯಾಯಾಲಯ ಲಿಂಗತ್ವ ಅಲ್ಪಸಂಖ್ಯಾಕರನ್ನು 4ನೇ ದರ್ಜೆಯ ನೌಕಕರಾಗಿ ನೇಮಕ ಮಾಡಿತ್ತು. ಇವರ ಪರವಾಗಿ ನ್ಯಾಯಲಯ ನೀಡಿದ ಆದೇಶಗಳು ಸರಿಯಾಗಿ ಪಾಲನೆಯಾದರೆ ಲಿಂಗತ್ವ ಅಲ್ಪಸಂಖ್ಯಾಕರರ ಜೀವನ ಇನ್ನಷ್ಟು ಸುಖಕರವಾಗಲಿದೆ. ಮತದಾನ ಪ್ರಕ್ರಿಯೆಯಲ್ಲಿ ಎಲ್ಲ ಅಲ್ಪಸಂಖ್ಯಾಕರು ಪ್ರಮಾಣಿಕವಾಗಿ ಭಾಗವಹಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಲಿಂಗತ್ವ ಅಲ್ಪಸಂಖ್ಯಾಕಕರ ರಾಜ್ಯ ಮಟ್ಟದ ಸಂಘಟನೆ ಸಾರಥ್ಯದ ಪ್ರತಿನಿಧಿ ಸವಿತಾ, ನವಸಹಜ ಸಂಘಟನೆಯ ಪ್ರವೀಣ್‌, ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ| ರಾಜೇಶ್ವರಿ ದೇವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ರಾವ್‌, ರುಡ್‌ಸೆಟ್‌ನ ಅಜಿತ್‌ ಕೆ.ಆರ್‌., ಗಿರಿಧರ್‌ ಸಾಲ್ಯಾನ್‌ ಉಪಸ್ಥಿತರಿದ್ದರು.

ಹಕ್ಕು ಎಲ್ಲರಿಗೂ ಲಭಿಸಲಿ
ಸಂವಿಧಾನದತ್ತವಾಗಿರುವ ಎಲ್ಲ ಹಕ್ಕುಗಳು ಪ್ರತಿಯೊಬ್ಬ ನಾಗರಿಕನಿಗೂ ಲಭಿಸಬೇಕು. ಈ ನಿಟ್ಟಿನಲ್ಲಿ ಚುನಾವಣಾ ಆಯೋಗ ಲಿಂಗತ್ವ ಅಲ್ಪಸಂಖ್ಯಾಕಕರಿಗೆ ಮತದಾನದ ಹಕ್ಕು ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 250 ಮಂದಿ ಲಿಂಗತ್ವ ಅಲ್ಪಸಂಖ್ಯಾಕರಿದ್ದು, ಅದರಲ್ಲಿ ಬಹುತೇಕ ಮಂದಿ ವಲಸೆ ಬಂದಿರುವುದರಿಂದ ಅವರಿಗೆ ಸರಿಯಾದ ವಿಳಾಸವಿಲ್ಲದೆ ಸಮಸ್ಯೆಯಾಗಿದೆ. ಶೀಘ್ರವೇ ಲಿಂಗತ್ವ ಅಲ್ಪಸಂಖ್ಯಾಕರಿಗೆ ವಾಸಸ್ಥಳ ದೃಢೀಕರಣ ನೀಡುವ ಬಗ್ಗೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳಲಿದ್ದೇವೆ.
– ಎಂ.ಆರ್‌. ರವಿ,
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಜಿಲ್ಲಾ ಪಂಚಾಯತ್‌

ಟಾಪ್ ನ್ಯೂಸ್

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.