ರಾಜ್ಯಸಭೆ ಚುನಾವಣೆ ಬಳಿಕ ಬಿಜೆಪಿ ಸೇರ್ಪಡೆ
Team Udayavani, Mar 15, 2018, 6:20 AM IST
ಬಸವಕಲ್ಯಾಣ: ರಾಜ್ಯಸಭೆ ಚುನಾವಣೆ ನಂತರ ಅ ಧಿಕೃತವಾಗಿ ಬಿಜೆಪಿ ಸೇರುವುದಾಗಿ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ತಿಳಿಸಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜೆಡಿಎಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಬೇಕೆಂದು ನನ್ನ ಬೆಂಬಲಿಗರು ಒತ್ತಡ ಹಾಕುತ್ತಿದ್ದಾರೆ. ಹಾಗಾಗಿ ಬಿಜೆಪಿಗೆ ಸೇರಲು ತೀರ್ಮಾನಿಸಿದ್ದೇನೆ. ಪಕ್ಷಕ್ಕೆ ಸೇರುವಂತೆ ಬಿಜೆಪಿಯಿಂದ ಆಹ್ವಾನ ಬಂದಿದೆ. ಆ ಪಕ್ಷದ ನಾಯಕರು ಬೆಂಗಳೂರು ಅಥವಾ ಬಸವಕಲ್ಯಾಣದಲ್ಲಿ ಯಾವ ಸ್ಥಳದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗುವಂತೆ ತಿಳಿಸುತ್ತಾರೋ ಅಲ್ಲಿ ಸೇರ್ಪಡೆಗೊಳ್ಳಲಿದ್ದೇನೆ ಎಂದರು.
ಜೆಡಿಎಸ್‌ನಿಂದ ಎರಡು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನಾನು ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ ನಂತರ ಪಕ್ಷ ತೊರೆಯುತ್ತೇನೆ. ಕುಮಾರಸ್ವಾಮಿ ಹಾಗೂ ನನ್ನ ನಡುವೆ ಯಾವುದೇ ಮನಸ್ತಾಪ ಇಲ್ಲ. ಇಬ್ಬರು ಒಂದಾಗಿದ್ದೇವೆ. ರಾಜ್ಯದಲ್ಲಿ ಪ್ರತ್ಯೇಕ ಧರ್ಮ ಕೂಗು ವ್ಯಾಪಕವಾಗಿ ಕೇಳಿ ಬರುತ್ತಿದೆ. ವೀರಶೈವರು ಮತ್ತು ಲಿಂಗಾಯತರು ಇಬ್ಬರೂ ಒಂದಾಗಿ ಸಾಗುವ ಮೂಲಕ ಪ್ರತ್ಯೇಕ ಧರ್ಮ ಮಾನ್ಯತೆಗಾಗಿ ಒಮ್ಮತದ ಹೋರಾಟ ನಡೆಸಬೇಕಾದ ಅಗತ್ಯವಿದೆ. ಇದಕ್ಕೆ ಯಾರೂ ವಿರೋಧ ವ್ಯಕ್ತಪಡಿಸಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Kodagu: ಯೋಧ ದಿವಿನ್ ಪಂಚಭೂತಗಳಲ್ಲಿ ಲೀನ
Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.