ಮಾರನ್ ಸೋದರರ ಖುಲಾಸೆ
Team Udayavani, Mar 15, 2018, 7:30 AM IST
ಚೆನ್ನೈ: ಯುಪಿಎ ಸರ್ಕಾರದ ಅವಧಿಯಲ್ಲಿ ಆಗಿದ್ದ ಟೆಲಿಕಾಂ ಹಗರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರಸಂಪರ್ಕ ಖಾತೆ ಮಾಜಿ ಸಚಿವ ದಯಾನಿಧಿ ಮಾರನ್ ಹಾಗೂ ಅವರ ಸಹೋದರ ಕಲಾನಿಧಿ ಮಾರನ್ ಸೇರಿದಂತೆ ಪ್ರಕರಣದ ಇತರ ಆರೋಪಿಗಳನ್ನು ಸಿಬಿಐ ವಿಶೇಷ ಕೋರ್ಟ್ ಆರೋಪ ಮುಕ್ತಗೊಳಿಸಿದೆ. ನ್ಯಾಯಾಧೀಶ ಎನ್. ನಟರಾಜನ್ ಈ ತೀರ್ಪು ನೀಡಿದ್ದಾರೆ.
2004ರಿಂದ 2006ರ ಅವಧಿಯಲ್ಲಿ, ಟೆಲಿಕಾಂ ಸಚಿವ ದಯಾನಿಧಿ ಮಾರನ್ ಅವರ ಚೆನ್ನೈ ನಿವಾಸದಲ್ಲಿ ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಕಚೇರಿ ತೆರೆದು, ಸರ್ಕಾರಕ್ಕೆ 1.78 ಕೋಟಿ ರೂ. ನಷ್ಟವಾಗಿದೆಯೆಂದು ಸಿಬಿಐ ಆರೋಪಿಸಿತ್ತು.
ಆದರೆ, ಇದನ್ನು ಅಲ್ಲಗಳೆದಿದ್ದ ಮಾರನ್ ಸಹೋದರರು, ಪ್ರಕರಣದಲ್ಲಿ ತಮ್ಮನ್ನು ದೋಷಮುಕ್ತಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಮೇಲ್ನೋಟಕ್ಕೆ ತಮ್ಮ ವಿರುದ್ಧ ಯಾವುದೇ ಆರೋಪಗಳಿಲ್ಲದಿರುವ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದಿದ್ದ ಅವರು, ಇದೇ ಕಾರಣಕ್ಕಾಗಿ ತಮ್ಮನ್ನು ದೋಷಮುಕ್ತಗೊಳಿಸುವಂತೆ ಕೋರಿದ್ದರು. ಮಾರ್ಚ್ 9ರಂದು ವಿಚಾರಣೆ ಅಂತ್ಯಗೊಳಿಸಿ ತೀರ್ಪನ್ನು ಮಾ. 14ಕ್ಕೆ ಮುಂದೂಡಿತ್ತು.
ಮಾರನ್ ಸಹೋದರರಲ್ಲದೆ, ಇದೇ ಪ್ರಕರಣದಲ್ಲಿ ಆರೋಪ ಹೊತ್ತಿದ್ದ ಬಿಎಸ್ಎನ್ಎಲ್ನ ಮಾಜಿ ಮಹಾ ಪ್ರಬಂಧಕ ಕೆ. ಬ್ರಹ್ಮನಾಥನ್, ಉಪ ಮಹಾ ಪ್ರಬಂಧಕ ಎಂ.ಪಿ. ವೇಲುಸಾಮಿ ಹಾಗೂ ದಯಾನಿಧಿ ಮಾರನ್ ಅವರ ಖಾಸಗಿ ಕಾರ್ಯದರ್ಶಿ ಗೌತಮನ್ ಅವರನ್ನೂ ಸಿಬಿಐ ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ತೀರ್ಪಿನ ವಿರುದ್ಧ ಮದ್ರಾಸ್ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.