ಅತ್ಯಾಧುನಿಕ ಮಾದರಿಯ ಸಿಸಿ ಟಿವಿ ಕೆಮರಾಗಳ ಸ್ಥಾಪನೆ

Team Udayavani, Mar 15, 2018, 10:05 AM IST

CCTV-Camera-2-600.jpg

ಕಾಸರಗೋಡು: ರಾಜ್ಯದ ಪ್ರಧಾನ ನಗರಗಳಲ್ಲಿ ನಡೆಯುತ್ತಿರುವ ಅಪರಾಧ ಕೃತ್ಯಗಳು ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಸ್ತೆಗಳಲ್ಲಿ ಹಾಗೂ ಪ್ರಮುಖ ಕೇಂದ್ರಗಳಲ್ಲಿ ದೈನಂದಿನ 24 ಗಂಟೆಗಳ ಕಾಲವೂ ಕಾರ್ಯಾಚರಿಸುವ ಅತ್ಯಾಧುನಿಕ ಮಾದರಿಯ ಸಿಸಿ ಟಿವಿ ಕ್ಯಾಮರಾಗಳನ್ನು  ಸ್ಥಾಪಿಸುವ ಮಹತ್ವದ ಯೋಜನೆಗೆ ಕೇರಳ ಗೃಹ ಇಲಾಖೆಯು ರೂಪು ನೀಡಿದೆ. ಇದಕ್ಕಾಗಿ 19.60 ಕೋಟಿ ರೂಪಾಯಿಗಳನ್ನು  ಸರಕಾರವು ಬಿಡುಗಡೆ ಮಾಡಿದೆ. ಅತಿ ಹೆಚ್ಚು  ಜನನಿಬಿಡತೆ ಹೊಂದಿರುವ 439 ರಸ್ತೆ  ಬದಿಯ ಹಲವು ಪ್ರದೇಶಗಳಲ್ಲಾಗಿ 1,004 ಸಿಸಿ ಟಿವಿ ಕ್ಯಾಮರಾಗಳನ್ನು  ಉದ್ದಿಮೆದಾರರ ಸಹಾಯದೊಂದಿಗೆ ಬ್ಯಾಂಕ್‌ಗಳು, ಎಟಿಎಂ, ಪೆಟ್ರೋಲ್‌ ಬಂಕ್‌, ಪ್ರಮುಖ ಬಸ್‌ ಮತ್ತು ರೈಲು ನಿಲ್ದಾಣಗಳು, ಚಿನ್ನದಂಗಡಿಗಳಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ.

ಇದಲ್ಲದೆ ಇಂತಹ ಕ್ಯಾಮರಾಗಳನ್ನು ಇನ್ನಷ್ಟು ಹೆಚ್ಚು ಕೇಂದ್ರಗಳಲ್ಲಿ  ಸ್ಥಾಪಿಸಲು ಕೂಡ ತೀರ್ಮಾನಿಸಲಾಗಿದೆ. ಆ ಮೂಲಕ ಅಪರಾಧ ಕೃತ್ಯಗಳನ್ನು ನಡೆಸುತ್ತಿರುವವರು ಮತ್ತು ರಸ್ತೆ ಅಪಘಾತಗಳಿಗೆ ಕಾರಣವಾಗುವ ವಾಹನಗಳ ಚಾಲಕರನ್ನು  ಸೆರೆಹಿಡಿದು ಅವರಿಗೆ ಕಾನೂನು ಪರ ಶಿಕ್ಷೆ ವಿಧಿಸಲು ಗೃಹ ಖಾತೆ ಮುಂದಾಗಿದೆ. ಕೇರಳದಲ್ಲಿ ಇತ್ತೀಚೆಗೆ ಕೊಲೆ, ದರೋಡೆ, ರಾಜಕೀಯ ಕೊಲೆ, ಹಿಂಸಾಚಾರ, ಮತೀಯ ಗಲಭೆ, ಕಳವು ಮತ್ತು  ಅವಘಡಗಳ ಸಂಖ್ಯೆ ಮಿತಿಮೀರುತ್ತಿದ್ದು, ಅದನ್ನು  ಸಂಪೂರ್ಣವಾಗಿ ತಡೆಗಟ್ಟುವುದೇ ಅತ್ಯಾಧುನಿಕ ಕ್ಯಾಮರಾಗಳನ್ನು  ಸ್ಥಾಪಿಸುವುದರ ಪ್ರಧಾನ ಉದ್ದೇಶವಾಗಿದೆ.

ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಇಂಟರ್‌ ಗ್ರೇಟೆಡ್‌ ಡಿಜಿಟಲ್‌ ಎನ್‌ಪೋರ್ಸ್‌ಮೆಂಟ್‌ ಸಿಸ್ಟಂ ಜಾರಿಗೊಳಿಸುವ ನಿರ್ಧಾರವನ್ನು ಕೂಡ ಗೃಹ ಇಲಾಖೆ ಕೈಗೊಂಡಿದ್ದು, ಇದರಿಂದ ಸಾರಿಗೆ ಕಾನೂನು ಉಲ್ಲಂಘನೆಯನ್ನು  ಸಮರ್ಪಕವಾಗಿ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಇಲಾಖೆಯ ಅಧಿಕಾರಿ ವಲಯ ತಿಳಿಸಿದೆ.

ವಿಶೇಷ ಕಂಟ್ರೋಲ್‌ ರೂಮ್‌
ರಾಜ್ಯದಲ್ಲಿ ಗೂಂಡಾಗಳನ್ನು ಹತ್ತಿಕ್ಕಲು ಆಧುನಿಕ ಶೈಲಿಯ ವಿಶೇಷ ಕಂಟ್ರೋಲ್‌ ರೂಮ್‌ಗಳನ್ನು ಸ್ಥಾಪಿಸಲು ಗೃಹ ಖಾತೆ ತೀರ್ಮಾನಿಸಿದೆ. ಕೇರಳದ ಹಲವೆಡೆಗಳಲ್ಲಿ ಅನೇಕ ರೀತಿಯ ಗೂಂಡಾಕೃತ್ಯಗಳು ನಡೆಯುತ್ತಿವೆ. ಮಾದಕದ್ರವ್ಯ ಸಾಗಾಟ, ಭೂ ಮಾಫಿಯಾ, ಹವಾಲಾ ಹಣ, ಕಾಳಧನ, ಲೈಂಗಿಕ ದಂಧೆ, ಮಾನವ ಕಳ್ಳಸಾಗಾಟ, ಅಕ್ರಮ ಹಫ್ತಾ  ವಸೂಲಿ, ಮಕ್ಕಳ ಸಾಗಾಟ, ಅವಯವ ಅಪಹರಣ, ಅಪಾರ ಬಡ್ಡಿ ದರದಲ್ಲಿ ಸಾಲ ನೀಡಿ ಮರುಪಾವತಿಸದವರ ಶೋಷಣೆ ಇತ್ಯಾದಿ ನಡೆಯುತ್ತಿರುತ್ತವೆ. ಮಾತ್ರವಲ್ಲದೆ ಕೆಲವು ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು  ವ್ಯಕ್ತಿಗಳು ಗೂಂಡಾಗಳಿಗೆ ಬೆಂಬಲ ನೀಡುತ್ತಿದ್ದಾರೆ. ಇಂತಹ ಗೂಂಡಾ ತಂಡಗಳನ್ನು ಸಂಪೂರ್ಣವಾಗಿ ಹತ್ತಿಕ್ಕುವ ಗುರಿಯೊಂದಿಗೆ ವಿಶೇಷ ಕಂಟ್ರೋಲ್‌ ರೂಮ್‌ಗಳನ್ನು ಸ್ಥಾಪಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು

2

Kasaragod: ಯುವತಿ ನಾಪತ್ತೆ; ದೂರು ದಾಖಲು

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್‌ ಟಿಕೆಟ್‌ ದರ ಏರಿಕೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Untitled-1

Kasaragod Crime News: ನೇಣು ಬಿಗಿದು ಯುವಕ ಆತ್ಮಹ*ತ್ಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.