ಸೂಕ್ಷ್ಮ ಪರಿಸರ ಪ್ರದೇಶದ ಯಥಾವತ್‌ ಜಾರಿಗೆ ಷಡ್ಯಂತ್ರ

Team Udayavani, Mar 16, 2018, 11:05 AM IST

Save-Kodagu-15-3.jpg

ಮಡಿಕೇರಿ: ದಕ್ಷಿಣ ಕೊಡಗಿನ ಮೂಲಕ ಹಾದುಹೋಗುವ ಮೈಸೂರು-ತಲಚ್ಚೇರಿ ರೈಲ್ವೆ ಮಾರ್ಗವನ್ನು ಜಿಲ್ಲೆಯ ಜನತೆಯ ನಿರೀಕ್ಷೆಯಂತೆ ವಿರೋಧಿಸುವ ನೆಪದಲ್ಲಿ ಡೋಂಗಿ ಪರಿಸರವಾದಿಗಳು ಸೂಕ್ಷ್ಮ ಪರಿಸರ ಪ್ರದೇಶವನ್ನು ಯಥಾವತ್‌ ಜಾರಿಗೊಳಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಸೇವ್‌ ಕೊಡಗು ಫೋರಂ ಸಂಘಟನೆಯ ಪದಾಧಿಕಾರಿ ಮಧು ಬೋಪಣ್ಣ ತೀಕ್ಷ್ಣವಾಗಿ ನುಡಿದಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಕೇಂದ್ರ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ ಅವರನ್ನು ರೈಲ್ವೆ ಯೋಜನೆ ಬೇಡವೆಂದು ಮನವರಿಕೆ ಮಾಡಲು ಭೇಟಿಯಾಗಿರುವ ಪರಿಸರವಾದಿಗಳು, ಇದರ ಜೊತೆಯಲ್ಲೆ ಕೊಡಗಿನ 55 ಗ್ರಾಮಗಳು ಹಾಗೂ ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಹಾದು ಹೋಗುವ ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ವ್ಯಾಪ್ತಿಯನ್ನು ಯಥಾವತ್ತಾಗಿ ಸೂಕ್ಷ್ಮ ಪರಿಸರ ಪ್ರದೇಶವನ್ನಾಗಿ ಘೋಷಿಸುವಂತೆ ಕೇಂದ್ರಕ್ಕೆ ಒತ್ತಡ ಹೇರಿರುವುದಾಗಿ ಆರೋಪಿಸಿದರು.

ರಕ್ಷಿತಾರಣ್ಯದ ಮೂಲಕ ಸಾಗಿ ಹೋಗಬೇಕಾದ ಮೈಸೂರು-ತಲಚ್ಚೇರಿ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಕೇರಳ ರಾಜ್ಯದಿಂದ ಹೆಚ್ಚಿನ ಒತ್ತಡವಿತ್ತಾದರು, ಈ ಸಂಬಂಧ ನಡೆದ ಸರ್ವೇ ಕಾರ್ಯದ ವರದಿಯಲ್ಲಿ, ಯೋಜನೆ ಆರ್ಥಿಕವಾಗಿ ಲಾಭದಾಯಕವಲ್ಲ ಎನ್ನುವುದು ಸೇರಿದಂತೆ ವಿವಿಧ ಕಾರಣಗಳನ್ನು ಬೊಟ್ಟು ಮಾಡಿ ಯೋಜನೆಯನ್ನು ತಿರಸ್ಕರಿಸಲಾಗಿದೆಯೆಂದು ಮಧು ಬೋಪಣ್ಣ ತಿಳಿಸಿದರು. ಇದೀಗ ಈ ರೈಲ್ವೆ ಯೋಜನೆಯನ್ನು ವಿರೋಧಿಸುವುದನ್ನು ಮುಂದು ಮಾಡಿಕೊಂಡು ಸೂಕ್ಷ್ಮ ಪರಿಸರವಲಯದ ಘೋಷಣೆಗೆ ಕೇಂದ್ರದ ಮೇಲೆ ಒತ್ತಡ ಹೇರುವ ಕಾರ್ಯ ಪರಿಸರವಾದಿಗಳಿಂದ ನಡೆಯುತ್ತಿರುವುದಾಗಿ ಆರೋಪಿಸಿದರು.

ಬಿಜೆಪಿ ಸ್ಪಷ್ಟಪಡಿಸಲಿ 
ಕರ್ನಾಟಕ ವಿಧಾನ ಸಭಾ ಚುನಾವಣಾ ಹಂತದಲ್ಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳು ಕೊಡಗಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಜನರ ಪರ ವಹಿಸದೆ ಮೌನವಾಗಿ ಉಳಿದಿವೆ. ಪ್ರಸ್ತುತ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ಸೂಕ್ಷ್ಮ ಪರಿಸರ ಪ್ರದೇಶಕ್ಕೆ ಸಂಬಂಧಿಸಿದಂತೆ ತನ್ನ ನಿಲುವನ್ನು ಜಿಲ್ಲಾ ಬಿಜೆಪಿ ಸ್ಪಷ್ಟಪಡಿಸಬೇಕೆಂದು ಒತ್ತಾಯಿಸಿದರು.

ಕೆಲವು ಸಮಯಗಳ ಹಿಂದೆ ದಕ್ಷಿಣ ಕೊಡಗಿನ ಜನರೊಂದಿಗೆ ತಾವಿರುವುದಾಗಿ ತಿಳಿಸಿ ರೈಲ್ವೆ ಯೋಜನೆ ವಿರೋಧಿಸಿ ಜಾಥಾ ಮಾಡಿದ್ದ ಪರಿಸರವಾದಿಗಳು, ರೈತರ ಪ್ರತಿಭಟನೆ ಸಂದರ್ಭ ತಾವು ಜಿಲ್ಲೆಯ ಹಿಡುವಳಿದಾರರಿಗೆ ತೊಂದರೆಯಾಗುವ ಯೋಜನೆಗಳನ್ನು ಬೆಂಬಲಿಸುವುದಿಲ್ಲವೆಂದು ತಿಳಿಸಿದ್ದರು. ಇದೀಗ ಇದೇ ಮಂದಿ ಡೆಲ್ಲಿಗೆ ತೆರಳಿ ಸೂಕ್ಷ್ಮ ಪರಿಸರ ಪ್ರದೇಶದ ಜಾರಿಗೆ ಕೇಂದ್ರವನ್ನು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ನಿಲುವನ್ನು ತಿಳಿಸುವಂತೆ ಆಗ್ರಹಿಸಿದರು. 

ನೆರವು ಅಗತ್ಯ
ಕೊಡಗು ಜಿಲ್ಲೆಯ ಹವಾಮಾನ ವೈಪರೀತ್ಯಗಳಿಗೆ ಜಾಗತಿಕ ತಾಪಮಾನ ಹೆಚ್ಚಳವೂ ಒಂದು ಕಾರಣವೆಂದು ದೃಢವಾಗಿ ನುಡಿದ ಮಧು ಬೋಪಣ್ಣ, ಪ್ರಸ್ತುತ ಕೊಡಗಿನ ಬೆಳೆಗಾರರು ತಮ್ಮ ತೋಟಗಳಲ್ಲಿ  ಮರಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಕಾಣಿಕೆಯನ್ನು ನೀಡುತ್ತಿದ್ದಾರೆ. ಇಂತಹ ಪ್ರಯತ್ನಕ್ಕೆ ಕೇಂದ್ರದ ಗ್ರೀನ್‌ ಫ‌ಂಡ್‌ ಮೂಲಕ ಅಗತ್ಯ ನೆರವನ್ನು ಒದಗಿಸಬೇಕು. ಈ ಫ‌ಂಡ್‌ನ‌ಲ್ಲಿ 3 ಬಿಲಿಯನ್‌ ಹಣವಿದ್ದು, ಇದರ ಪ್ರಯೋಜನ ಕೆಲವೇ ಕೆಲ ದೊಡ್ಡ ತೋಟಗಳ ಮಂದಿ ಪಡೆದುಕೊಳ್ಳುತ್ತಿದ್ದಾರೆ, ಸಣ್ಣ ಬೆಳೆಗಾರರಿಗೆ ಇದರ ಪ್ರಯೋಜನ ದೊರಕುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದರು.

ಸಂಘಟನೆಯ ಪದಾಧಿಕಾರಿ ಜಿನ್ನು ನಾಣಯ್ಯ ಮಾತನಾಡಿ, ಬೆರಳೆಣಿಕೆೆಯ ಢೋಂಗಿ ಪರಿಸರವಾದಿಗಳಿಂದ  ಕೊಡಗಿನಲ್ಲಿ ಸಮಸ್ಯೆಗಳು ನಿರ್ಮಾಣವಾಗಿವೆ. ಕಾಡ್ಗಿಚ್ಚು ಜಾಥಾಗಳನ್ನು ಶಾಲಾ ವಿದ್ಯಾರ್ಥಿಗಳ ಮೂಲಕ ಪಟ್ಟಣ ಪ್ರದೇಶಗಳಲ್ಲಿ ನಡೆಸುವ ಈ ಮಂದಿ, ಮೊದಲು ಬೆಂಕಿ ಬಿದ್ದ ಅರಣ್ಯ ಪ್ರದೇಶಗಳಲ್ಲಿ ಅಗ್ನಿಯನ್ನು ಶಮನಗೊಳಿಸುವ ಕಾರ್ಯಕ್ಕೆ ಮುಂದಾಗಬೇಕೆಂದು ಕಟುವಾಗಿ ನುಡಿದು, ಕಾಫಿ ಧಾರಣೆ ಕುಸಿತ, ಕುಡಿಯುವ ನೀರಿನ ಸಮಸ್ಯೆ ಈ ಯಾವತ್ತೂ ಸಮಸ್ಯೆಗಳ ಬಗ್ಗೆ ಡೋಂಗಿ ಪರಿಸರವಾದಿಗಳಿಗೆ ಯಾವುದೇ ಆಸಕ್ತಿ ಇಲ್ಲವೆಂದು ತಿಳಿಸಿದರು. ಬಿರುನಾಣಿಗೆ ತೆರಳಲು ಸಮೀಪದ ಮಾರ್ಗವಾಗಿರುವ ಕೂಟಿಯಾಲ ಸೇತುವೆಯ ಹಾದಿ ನಿರ್ಮಾಣಕ್ಕೆ ಇಲ್ಲಿಯವರೆಗೂ ಡೋಂಗಿ ಪರಿಸರವಾದಿಗಳಿಂದಲೆ ಅಡ್ಡಿ ಉಂಟಾಗುತ್ತಿರುವುದಾಗಿ ತಿಳಿಸಿದರು.

ಸಂಘ‌ಟನೆಯ ಪ್ರಮುಖರಾದ ಬಿ.ಟಿ.ದಿನೇಶ್‌ ಮಾತನಾಡಿ, ಬೆರಳೆಣಿಕೆಯ ಕೆಲವೇ ಕೆಲವು ಡೋಂಗಿ ಪರಿಸರವಾದಿಗಳು ತಮ್ಮ ಹಿಡಿತದಲ್ಲಿ ಕೊಡಗನ್ನು ಇರಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಪರಿಸರ ಸಂರಕ್ಷಣೆೆಯ ಹೆಸರಿನಲ್ಲಿ ವಿದೇಶಿ ನೆರವು ಪಡೆದ ಮಂದಿ ಇದೀಗ ದೊಡ್ಡ ಉದ್ಯಮಿಗಳಾಗಿದ್ದಾರೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಫೋರಂನ ಪ್ರಮುಖರಾದ ಉದಯ ಶಂಕರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

4-

Madikeri: ದೇಗುಲದಲ್ಲಿ ಸಮಾನತೆಯೇ ಉದ್ದೇಶ ; ಕಟ್ಟೆಮಾಡಿನ ಶ್ರೀ ಮಹಾ ಮೃತ್ಯುಂಜಯ ವಿವಾದ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್‌ ಆಸ್ಪತ್ರೆ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Kodagu: ಯೋಧ ದಿವಿನ್‌ ಪಂಚಭೂತಗಳಲ್ಲಿ ಲೀನ

Untitled-1

Kasaragod ಅಪರಾಧ ಸುದ್ದಿಗಳು: ಅಂಗಡಿಗೆ ಲಾರಿ ಢಿಕ್ಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.