ಇಂದಿನಿಂದ ಜಾಹೀರಾತು ಫಲಕಗಳ ತೆರವು
Team Udayavani, Mar 16, 2018, 11:43 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಅನಧಿಕೃತ ಜಾಹೀರಾತು ಫಲಕಗಳ ತೆರವು ಕಾರ್ಯಾಚರಣೆಗೆ ಶುಕ್ರವಾರ ಮೇಯರ್ ಆರ್.ಸಂಪತ್ರಾಜ್ ಚಾಲನೆ ನೀಡಲಿದ್ದಾರೆ. ಬಿಬಿಎಂಪಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಿರುವ ಹಾಗೂ ಬೆಂಗಳೂರಿನ ಸೌಂದರ್ಯಕ್ಕೆ ಮಾರಕವಾಗಿರುವ ಅನಧಿಕೃತ ಜಾಹೀರಾತು ಫಲಕಗಳ ತೆರವು ಕಾರ್ಯಾಚರಣೆಗೆ ಮೇಯರ್ ಮುಂದಾಗಿದ್ದಾರೆ.
ಅದರಂತೆ ಶುಕ್ರವಾರದಿಂದ ನಗರದಲ್ಲಿರುವ ಅನಧಿಕೃತ ಫಲಕಗಳು, ಬ್ಯಾನರ್ಗಳು, ಬಂಟಿಂಗ್ಸ್ಗಳ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಿದ್ದಾರೆ. ಅನಧಿಕೃತ ಜಾಹೀರಾತು ಫಲಕಗಳನ್ನು ಗುರುತಿಸಿ ತೆರವುಗೊಳಿಸುವ ಜವಾಬ್ದಾರಿಯನ್ನು ಮೇಯರ್ ಅವರು ಆಯಾ ವಾರ್ಡ್ ಪಾಲಿಕೆ ಸದಸ್ಯರಿಗೆ ವಹಿಸಿದ್ದಾರೆ.
ಪಾಲಿಕೆಯ ಕೌನ್ಸಿಲ್ ಸಭೆಯಲ್ಲಿ ಎಲ್ಲ ಪಾಲಿಕೆ ಸದಸ್ಯರು ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ. ಅದರಂತೆ ಶುಕ್ರವಾರದಿಂದಲೇ ತೆರವು ಕಾರ್ಯಾಚರಣೆ ಆರಂಭಿಸಲಾಗುವುದು.
-ಆರ್.ಸಂಪತ್ರಾಜ್, ಮೇಯರ್
ಅನಧಿಕೃತ ಜಾಹಿರಾತು ಫಲಕಗಳ ತೆರವು ಕಾರ್ಯಾಚರಣೆಗೆ ನನ್ನ ಸಂಪೂರ್ಣ ಬೆಂಬಲವಿದ್ದು, ಭಿತ್ತಿ ಪತ್ರ ಅಂಟಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಿದೆ. ಅನಧಿಕೃತ ಜಾಹೀರಾತು ಫಲಕಗಳನ್ನು ಯಾವುದೇ ಪಕ್ಷದವರು ಅಳವಡಿಸಿದ್ದರೂ, ಮುಲಾಜಿಲ್ಲದೆ ತೆರವುಗೊಳಿಸುವಂತೆ ಸೂಚಿಸಲಾಗಿದೆ.
-ಕೆ.ಜೆ.ಜಾರ್ಜ್, ಬೆಂಗಳೂರು ನಗರಾಭಿವೃದ್ಧಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.