ಬಂಟರ ಭವನ ಆವರಣದ ಮಹಾವಿಷ್ಣು ದೇವಸ್ಥಾನ :ಜಾತ್ರೆ
Team Udayavani, Mar 16, 2018, 4:23 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಆವರಣದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಜಾತ್ರಾ ಮಹೋತ್ಸವವು ಮಾ. 10 ರಂದು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಜರಗಿತು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ದೇವಸ್ಥಾನದ ಜ್ಞಾನಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಇವರ ನೇತೃತ್ವದಲ್ಲಿ ಮಂದಿರದ ಪ್ರಧಾನ ಅರ್ಚಕ ವಿದ್ವಾನ್ ಅರವಿಂದ ಬನ್ನಿಂತಾಯ ಇವರಿಂದ ಪೂಜೆ-ಪುನಸ್ಕಾರಗಳು ನಡೆಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಮಾ. 9 ರಂದು ಸಂಜೆ 6 ರಿಂದ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಪುಣ್ಯಾಹ ವಾಚನ, ವಾಸ್ತು ಹೋಮ, ವಾಸ್ತುಪೂಜೆ, ರಾತ್ರಿಪೂಜೆ ನೆರವೇರಿತು. ಮಾ. 10 ರಂದು ಬೆಳಗ್ಗೆ 9 ರಿಂದ ಗಣಹೋಮ, ಪಂಚ ವಿಶಂತಿ ಕಲಶಾಭಿಷೇಕ, ಆಶ್ಲೇಷ ಬಲಿ, ಪ್ರಸನ್ನ ಪೂಜೆ, ಮಧ್ಯಾಹ್ನ 1 ರಿಂದ ಅಪರಾಹ್ನ 2 ರವರೆಗೆ ಅನ್ನ ಸಂತರ್ಪಣೆ ನಡೆಯಿತು.
ಸಮಾಜ ಬಾಂಧವರು ಸೇರಿದಂತೆ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಅನ್ನಪ್ರಸಾದ ಸ್ವೀಕರಿಸಿದರು.
ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮದ ಮೆರುಗು
ಅಪರಾಹ್ನ 4 ರಿಂದ ಬಂಟರ ಸಂಘ ಮಹಿಳಾ ವಿಭಾಗದ ವತಿಯಿಂದ ಭಜನೆ, ಸಂಜೆ 6 ರಿಂದ ದುರ್ಗಾಪೂಜೆ, ರಂಗಪೂಜೆ, ದರ್ಶನ ಬಲಿ, ಉತ್ಸವ ಹಾಗೂ ಪ್ರಸಾದ ವಿತರಣೆ ಜರಗಿತು. ಮಾ. 11 ರಂದು ಬೆಳಗ್ಗೆ 8 ರಿಂದ ಸಂಪ್ರೋಕ್ಷಣೆ, ಮಂತ್ರಾಕ್ಷತೆ ಪೂಜೆಯೊಂದಿಗೆ ಜಾತ್ರಾ ಮಹೋತ್ಸವ ಮುಕ್ತಾಯಗೊಂಡಿತು.
ಬಂಟರ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ್ ಎಂ. ಭಂಡಾರಿ, ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಜೊತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ್ ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ ಹಾಗೂ ಜ್ಞಾನ ಮಂದಿರ ಸಮಿತಿಯ ಸದಸ್ಯರು, ಸಂಘದ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಪದಾಧಿಕಾರಿಗಳು, ವಿವಿಧ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಉದ್ಯಮಿಗಳು, ಸಮಾಜ ಸೇವಕರು, ವಿವಿಧ ಕ್ಷೇತ್ರಗಳ ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.