ಚಿಕ್ಕಬಳ್ಳಾಪುರ, ಮಾಗಡಿಯಲ್ಲಿ ರಾಜಕೀಯ ಜಟಾಪಟಿ
Team Udayavani, Mar 17, 2018, 6:10 AM IST
ಚಿಕ್ಕಬಳ್ಳಾಪುರ/ಮಾಗಡಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಸಂಘರ್ಷಗಳು ತೀವ್ರಗೊಂಡಿದೆ. ಚಿಂತಾಮಣಿಯಲ್ಲಿ ಇಂದಿರಾ ಕ್ಯಾಂಟೀನ್ ಭೂಮಿ ಪೂಜೆಗೆ ತೆರಳಿದ್ದ ಕ್ಷೇತ್ರದ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ರಾಜ್ಯ ಕರಕುಶಲ ಅಭಿವೃದ್ಧಿ ನಿಮಗದ ಅಧ್ಯಕ್ಷೆ ವಾಣಿ ಕೃಷ್ಣಾರೆಡ್ಡಿ ಮೇಲೆ ಮಾಜಿ ಶಾಸಕ ಡಾ.ಎಂ.ಸಿ.ಸುಧಾಕರ್ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿಂದೆ ಗುರುಭವನದ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಕ್ಕೆ ನಿರ್ಧರಿಸಲಾಗಿತ್ತು. ಸರ್ಕಾರಿ ನೌಕರರ ತೀವ್ರ ವಿರೋಧದಿಂದ ನಗರಸಭೆ ಎಪಿಎಂಸಿ ಮಾರುಕಟ್ಟೆ ಆವರಣಕ್ಕೆ ಕ್ಯಾಂಟೀನ್ ಸ್ಥಳಾಂತರಗೊಂಡಿತ್ತು.
ಎಪಿಎಂಸಿಯಿಂದ ಅನುಮತಿ ಪಡೆದು ಶುಕ್ರವಾರ ಭೂಮಿ ಪೂಜೆ ನಿಗದಿಪಡಿಸಿತ್ತು. ಈ ಹಿನ್ನೆಲೆಯಲ್ಲಿ ಜೆ.ಕೆ.ಕೃಷ್ಣಾರೆಡ್ಡಿ ಭೂಮಿ ಪೂಜೆ ನೆರವೇರಿಸಲು ಬಂದಿದ್ದರು. ಆಗ, ಸುಧಾಕರ್ ಹಿಡಿತದಲ್ಲಿರುವ ಎಪಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಭೂಮಿ ಪೂಜೆ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ, ಗಲಾಟೆ ನಡೆಯಿತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು.
ಬಿಜೆಪಿ ಕಾರ್ಯಕರ್ತರ ಮಾರಾಮಾರಿ: ರಾಮನಗರ ಜಿಲ್ಲೆ ಮಾಗಡಿಯಲ್ಲಿ ಬಿಜೆಪಿ ಭಿನ್ನಮತ ಸ್ಫೋಟಗೊಂಡಿದ್ದು, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜು ಮತ್ತು ರಾಷ್ಟ್ರೀಯ ಕಾರ್ಯದರ್ಶಿ ರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರಮನಿ ಎದುರಲ್ಲೆ ಬಿಜೆಪಿಯ 2 ಬಣಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ, ಕೆಲವರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.