ದೆಹಲಿಯಲ್ಲಿ ಕಾವೇರಿ ಕುರಿತ ಸಂಸದರ ಸಭೆ ಮುಂದೂಡಿಕೆ
Team Udayavani, Mar 17, 2018, 6:10 AM IST
ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂಕೋರ್ಟ್ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಶುಕ್ರವಾರ ದೆಹಲಿಯಲ್ಲಿ ಕರೆದಿದ್ದ ಸಭೆ ಮುಂದೂಡಲಾಗಿದ್ದು, ಮಾ. 22ರಂದು ಬೆಂಗಳೂರಿನಲ್ಲಿ ಈ ಸಭೆ ನಡೆಯಲಿದೆ.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸೇರಿ ಕೆಲವು ಸಂಸದರು ಮಾ.16ರಂದು ಕರೆಯಲಾಗಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಭೆ ಮುಂದೂಡಿದ್ದಾರೆಂದು ತಿಳಿದುಬಂದಿದೆ. ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಶುಕ್ರವಾರ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳುತ್ತಿದ್ದುದರಿಂದ ಅದೇ ವೇಳೆ ಕಾವೇರಿ ನದಿ ನೀರಿನ ಹಂಚಿಕೆ ಕುರಿತು ಸುಪ್ರೀಂ ತೀರ್ಪಿನ ಸಾಧಕ-ಬಾಧಕಗಳ ಬಗ್ಗೆ ರಾಜ್ಯದ ಸಂಸದರೊಂದಿಗೆ ಸಮಾಲೋಚನೆ ನಡೆಸಲು ನಿರ್ಧರಿಸಿದ್ದರು. ಅದರಂತೆ ಸಂಜೆ 6 ಗಂಟೆಗೆ ಸಭೆ ನಿಗದಿಯಾಗಿತ್ತು.
ಆದರೆ, ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ಸಂಸದರು ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಪೂರ್ವ ನಿರ್ಧರಿತ ಕಾರ್ಯಕ್ರಮದ ಕಾರಣ ಮಾಜಿ ಪ್ರಧಾನಿ ದೇವೇಗೌಡ ಸೇರಿ ಇನ್ನೂ ಕೆಲ ಸಂಸದರು ಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಿಲ್ಲವೆಂಬ ಕಾರಣಕ್ಕೆ ಸಭೆ ಮುಂದೂಡಲಾಗಿದೆ ಎಂದು ಹೇಳಲಾಗಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾಲ್ಕೈದು ಸಂಸದರು ಮಾತ್ರ ಲಭ್ಯವಿದ್ದುದರಿಂದ ಶುಕ್ರವಾರ ಕರೆದಿದ್ದ ಸಂಸದರ ಸಭೆಯನ್ನು ಮಾ.22ಕ್ಕೆ ಮುಂದೂಡಲಾಗಿದೆ. ಅಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಕಾವೇರಿ ವಿಷಯದಲ್ಲಿ ಕಾನೂನು ತಜ್ಞರು ಮತ್ತು ನಮ್ಮ ವಕೀಲರ ತಂಡದ ಅಭಿಪ್ರಾಯ ಪಡೆದೇ ಮುಂದಿನ ಹೆಜ್ಜೆ ಇಡಲಾಗುವುದೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.