ಸಾಧನೆಯ ಹಾದಿಯಲ್ಲಿ ಮಹಿಳೆಯರು : ಆರ್‌ಕೆಜಿಎಂಎಂ ಸ್ವಾಮೀಜಿ ಶ್ಲಾಘನೆ
Team Udayavani, Mar 17, 2018, 10:20 AM IST
ಮಡಿಕೇರಿ: ಎಲ್ಲಿ ಮಹಿಳೆಯರನ್ನು ಗೌರವಿಸುತ್ತೆವೋ ಅಲ್ಲಿ ದೇವತೆಗಳು ನೆಲೆಸಿರುತ್ತಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಆರ್‌ಕೆಜಿಎಂಎಂ ಮಹಾಸ್ವಾಮೀಜಿ ನುಡಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ ಮತ್ತು ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘ ಸರ್ಕಾರಿ ಅಭಿಯೋಜನಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಗುರುವಾರ ನಡೆದ ಗ್ರಾಹಕರ ದಿನಾಚರಣೆ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಹಾಸ್ವಾಮೀಜಿ ಮಾತನಾಡಿದರು.
ದಯಾನಂದ ಸರಸ್ವತಿ, ಜ್ಯೋತಿಭಾಪುಲೆ ಅವರಂತಹ ಮಹಾನೀಯರು ಮಹಿಳಾ ಸಬಲೀಕರಣಕ್ಕಾಗಿ ದುಡಿದಿದ್ದಾರೆ ಎಂದು ಅವರು ಹೇಳಿದರು. ಇಂದಿನ ಸಮಾಜದಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಪುರುಷರಿಗೆ ಸಮಾನವಾಗಿ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿಜ್ಞಾನ ಮತ್ತು ರಕ್ಷಣಾ ಕ್ಷೇತ್ರ ರಾಜಕೀಯ, ಶಿಕ್ಷಣ ಕ್ಷೇತ್ರಗಳಲ್ಲಿ ಮಹಿಳೆಯು ತನ್ನದೆ ಆದ ಚಾಪು ಮೂಡಿಸಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ತಿಳಿಸಿದರು.
ಕಾನೂನಿನಲ್ಲಿ ಮಹಿಳೆಯರಿಗೆ ವಿಶೇಷ ಹಕ್ಕುಗಳು ಮತ್ತು ರಕ್ಷಣೆ ನೀಡಲಾಗಿದೆ. ಸರಕಾರ ವಿಶೇಷ ಸವಲತ್ತುಗಳನ್ನು ನೀಡುತ್ತಾ ಮಹಿಳೆಯರ ಸಬಲೀಕರಣಕ್ಕಾಗಿ ಮುನ್ನುಡಿ ಬರೆದಿದೆ ಎಂದು ಆರ್‌ಕೆಜಿಎಂಎಂ ಮಹಾಸ್ವಾಮೀಜಿ ಅವರು ಅಭಿಪ್ರಾಯಪಟ್ಟರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶ ವಿಜಯ ಕುಮಾರ್ ಅವರು ಮಾತನಾಡಿದರು. ಮಹಿಳೆಯರು ಮನಸು ಮಾಡಿದರೆ ಎಲ್ಲಾವನ್ನು ಸಾಧಿಸಬಲ್ಲರೂ ಎಂಬುದಕ್ಕೆ ಕಲ್ಪನಾ ಚಾವ್ಲಾರಂತಹ ಬಾಹ್ಯಕಾಶ ವಿಜ್ಞಾನಿ ಸಾಕ್ಷಿಯಾಗಿದ್ದಾರೆ ಎಂದು ಅವರು ಹೇಳಿದರು.
ಗ್ರಾಹಕರ ಸಂರಕ್ಷಣಾ ಕಾಯ್ದೆಯು 1986ರಲ್ಲಿ ಜಾರಿಗೆ ಬಂದಿದ್ದು ಈ ಕಾಯ್ದೆಯು ಪ್ರತಿಯೊಬ್ಬಗ್ರಾಹಕನ ಹಕ್ಕುಗಳನ್ನು ಸಮರ್ಥವಾಗಿ ರಕ್ಷಣೆ ಮಾಡಿದೆ ಎಂದು ತಿಳಿಸಿದ ವಿಜಯ ಕುಮಾರ್ ಅವರು ಗ್ರಾಹಕರ ಹಕ್ಕುಗಳ ಬಗ್ಗೆ ವಿವರಣೆ ನೀಡಿದರು.
ಒಂದನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪವನೇಶ್ ಡಿ. ಮಾತನಾಡಿ ಮಹಿಳೆಯರನ್ನು ಹಲವು ರೂಪದಲ್ಲಿ ಕಾಣುತ್ತೇವೆ. ಪ್ರತಿಯೊಬ್ಬ ಪುರುಷನ ಜೀವನದಲ್ಲೂ ಅತಿ ಮುಖ್ಯವಾದ ಸ್ಥಾನ ಪಡೆದಿರುತ್ತಾರೆ, ವಕೀಲರು ಕೂಡ ಗ್ರಾಹಕರ ಕಾಯ್ದೆ ವ್ಯಾಪ್ತಿಗೆ ಒಳಪಡುತ್ತಾರೆ ಎಂದು ಅವರು ತಿಳಿಸಿದರು.
ಅಪರ ಸಿವಿಲ್ ನ್ಯಾಯಾಧೀಶ ಶರ್ಮಿಳಾ ಕಾಮತ್ ಕೆ. ಅವರು ಮಾತನಾಡಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರ ಬಗ್ಗೆ ಮತ್ತು ಮಹಿಳಾ ಹಕ್ಕುಗಳ ಕುರಿತು ಮಾಹಿತಿ ನೀಡಿದರು.
ಸಮಾರಂಭದಲ್ಲಿ ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ವಕೀಲರ ಸಂಘದ ಅಧ್ಯಕ್ಷ ಸಿ.ಟಿ.ಜೋಸೆಫ್, ನ್ಯಾಯಾಂಗ ಇಲಾಖೆ ನೌಕರರ ಸಂಘದ ಅಧ್ಯಕ್ಷ ಎಸ್.ಟಿ.ಸ್ವಾಮಿ ಮೊದಲಾವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.