ನಿತ್ಯಾನಂದರ ಜತೆ ಸಂತ್ರಸ್ತೆ ನಡೆಸಿದ್ದು ಒಪ್ಪಿತ ಸೆಕ್ಸ್
Team Udayavani, Mar 17, 2018, 11:27 AM IST
ಬೆಂಗಳೂರು: ಬಿಡದಿಯ ಧ್ಯಾನಪೀಠದ ನಿತ್ಯಾನಂದ ಸ್ವಾಮಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ. ಅದೊಂದು ಒಪ್ಪಿತ ಲೈಂಗಿಕ ಸಂಪರ್ಕವಾಗಿತ್ತು ಎಂಬುದು ಪ್ರಾಸಿಕ್ಯೂಷನ್ನ ದಾಖಲೆಗಳಲ್ಲಿ ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಅವರ ಪರ ವಕೀಲರು ಹೈಕೋರ್ಟ್ನಲ್ಲಿ ವಾದ ಮಂಡಿಸಿದರು.
ಪ್ರಕರಣದಲ್ಲಿ ತಮ್ಮನ್ನು ಕೈ ಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ರಾಮನಗರ ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಿತ್ಯಾನಂದ ಸ್ವಾಮಿ ಸೇರಿದಂತೆ 6 ಮಂದಿ ಆರೋಪಿಗಳು ಸಲ್ಲಿಸಿದ್ದ ಕ್ರಿಮಿನಲ್ ಪುನರ್ಪರಿಶೀಲನಾ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಆರ್.ಬಿ ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ನಿತ್ಯಾನಂದ ಸ್ವಾಮಿ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದಿಸಿದರು.
ಅರ್ಜಿದಾರ ನಿತ್ಯಾನಂದ ಸ್ವಾಮೀಜಿ ದೂರುದಾರ ಮಹಿಳೆಯ ಮೇಲೆ ಅತ್ಯಾಚಾರ ಎಸಗಿಲ್ಲ, ಬಲತ್ಕಾರದಿಂದ ಲೈಂಗಿಕ ಸಂಪರ್ಕ ನಡೆಸಿಲ್ಲ. ಹಲವು ವರ್ಷಗಳ ಕಾಲ ಆಶ್ರಮದಲ್ಲಿ ಉಳಿದುಕೊಂಡಿದ್ದ ದೂರುದಾರೆ, ನಿತ್ಯಾನಂದ ಅವರ ಜತೆ ಆಧ್ಯಾತ್ಮದ ಪರಮ ಸುಖ ಪಡೆಯಲು ಲೈಂಗಿಕ ಸಂಪರ್ಕ ಹೊಂದಿದ್ದಳು. ವಿದ್ಯಾವಂತೆಯೂ ಆದ ಆಕೆಗೆ ಇದೆಲ್ಲಾ ಗೊತ್ತಿದ್ದೇ ಮಾಡಿದ್ದಾರೆ.
ಆಕೆಯ, ಹಿನ್ನೆಲೆಯನ್ನು ಗಮನಿಸಿದಾಗ ಆಕೆ ಇನ್ನೂ ಹಲವರ ಜೊತೆ ಸಂಪರ್ಕ ಹೊಂದಿದ್ದಳು ಎಂಬುದು ವೇದ್ಯವಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇಡೀ ಪ್ರಕರಣದ ಬಗ್ಗೆ ಪೊಲೀಸರು ಆಳವಾದ ತನಿಖೆ ನಡೆಸಿಲ್ಲ. ಹಲವು ಮಹತ್ವದ ದಾಖಲೆಗಳನ್ನು ಅಧೀನ ನ್ಯಾಯಾಲಯಕ್ಕೆ ಸಲ್ಲಿಸಿಲ್ಲ.ಜತೆಗೆ ನ್ಯಾಯಾಲಯ ಕೂಡ, ಪ್ರಕರಣದ ಸಾಕ್ಷ್ಯಗಳನ್ನು ಸೂಕ್ತವಾಗಿ ಅವಲೋಕಿಸಿದೆ ಅರ್ಜಿದಾರರ ಅರ್ಜಿಯನ್ನು ವಜಾಗೊಳಿಸಿದೆ ಎಂದು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.