ಸಮಾಜವಾದಿ ಎಂದವರು ಸಮಾಜ ವಿರೋಧಿ ಕೆಲಸ ಮಾಡಿದರು
Team Udayavani, Mar 17, 2018, 12:07 PM IST
ಮೈಸೂರು: ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಗೊಂಡು ಹಲವು ವರ್ಷ ಕಳೆದರೂ ಪ್ರಜಾಪ್ರಭುತ್ವ ಆಚರಣೆಯಲ್ಲಿ ನಾವು ಇಂದಿಗೂ ಪರಿವರ್ತನೆ ಹಂತದಲ್ಲಿದ್ದೇವೆ ಎಂದು ಮುಂಬೈ ವಿವಿಯ ಪ್ರಾಧ್ಯಾಪಕ ಡಾ. ಜೋಸ್ ಜಾರ್ಜ್ ಹೇಳಿದರು.
ಮೈಸೂರು ವಿವಿ ರಾಜ್ಯಶಾಸ್ತ್ರ ವಿಭಾಗದಿಂದ ಮಾನಸಗಂಗೋತ್ರಿಯ ಪತ್ರಿಕೋದ್ಯಮ ವಿಭಾಗದಲ್ಲಿ ಆಯೋಜಿಸಿದ್ದ ಭಾರತದ ಪ್ರಜಾಪ್ರಭುತ್ವ ರಾಜಕಾರಣ: ಸಿದ್ಧಾಂತ ಹಾಗೂ ವಾಸ್ತವ ಕುರಿತ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಬ್ರಿಟಿಷರಿಂದ ಸ್ಥಾಪನೆಗೊಂಡ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಸ್ವಾತಂತ್ರ್ಯಕ್ಕಾಗಿ ಹೋರಾಡಿತು,
ಅಲ್ಲದೆ ಮಹಾತ್ಮ ಗಾಂಧೀಜಿ ಅವರಿಗೆ ಪ್ರಜಾಪ್ರಭುತ್ವವನ್ನು ಸಂಪೂರ್ಣವಾಗಿ ಆಚರಿಸುವ ಭರವಸೆಯನ್ನು ಸಹ ನೀಡಿತು. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೋಲಿಸಿದರೆ ನಮ್ಮ ದೇಶ ಪರಿಪೂರ್ಣ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ.
ಆದರೆ, ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಗೊಂಡು ಹಲವು ವರ್ಷ ಕಳೆದರೂ ಈ ಹಿಂದೆ ಗಾಂಧೀಜಿ ಅವರಿಗೆ ಕೊಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳಲು ಆಗದೆ, ಇನ್ನೂ ಪ್ರಜಾಪ್ರಭುತ್ವ ಆಚರಣೆಯಲ್ಲಿ ಪರಿವರ್ತನೆ ಹಂತದಲ್ಲಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಸಣ್ಣ ಸಾಲಕ್ಕೂ ರೈತರ ಆತ್ನಹತ್ಯೆ: ಪ್ರಧಾನಿ ಜವಾಹರಲಾಲ್ ನೆಹರು ತಮ್ಮನ್ನು ತಾವು ಸಮಾಜವಾದಿ ಎಂದು ಬಿಂಬಿಸಿಕೊಂಡರೂ ಸಮಾಜವಾದಿಗಳನ್ನು ವಿರೋಧಿಸುವ ಮೂಲಕ ಸಮಾಜ ವಿರೋಧಿ ಕೆಲಸ ಮಾಡಿದರು. ಇನ್ನೂ ರಾಜೀವ್ ಗಾಂಧಿ ಸಹ ಸಮಾಜವಾದಿ ಎಂದು ಬಿಂಬಿಸಿಕೊಂಡಿದ್ದರೂ, ಅವರು ಜಾರಿಗೆ ತಂದ ಹಸಿರು ಕಾಂತ್ರಿ ಫಲವತ್ತಾದ ಆಂಧ್ರಪ್ರದೇಶ, ತಮಿಳುನಾಡು, ಪಂಜಾಬ್, ಮಹಾರಾಷ್ಟ್ರ, ಹರಿಯಾಣ ರಾಜ್ಯಗಳಿಗೆ ಮಾತ್ರವೇ ಸೀಮಿತಗೊಳಿಸಿದರು.
ಇವರ ನಡುವೆ ವಿಜಯ್ ಮಲ್ಯ, ಲಲಿತ್ ಮೋದಿ, ನೀರವ್ ಮೋದಿ ಸೇರಿದಂತೆ ಹಲವು ಮೋದಿಗಳು ರಾಷ್ಟ್ರಕ್ಕೆ ದ್ರೋಹವೆಸಗಿ ಓಡಿ ಹೋದರು. ಆದರೆ, ನಮ್ಮ ರೈತರು ಸಣ್ಣ ಪ್ರಮಾಣದ ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗುತ್ತಿದ್ದು, ಇದು ಪ್ರಜಾಪ್ರಭುತ್ವ, ಸಮಾನತೆಯೇ? ಎಂದು ಪ್ರಶ್ನಿಸಿದ ಅವರು, ಪ್ರಜಾಪ್ರಭುತ್ವ ಕೇವಲ ರಾಜಕೀಯಕ್ಕೆ ಸೀಮಿತವಾಗಿಲ್ಲ.
ಜನರು ಸ್ವತಂತ್ರವಾಗಿ ಸಂಘ ಸಂಸ್ಥೆಗಳನ್ನು ರೂಪಿಸುವುದು, ತೀರ್ಮಾನ ತೆಗದುಕೊಳ್ಳುವುದು, ಚಿಂತನಾ ಕ್ರಮ, ಕಾನೂನು ಸುವ್ಯವಸ್ಥೆ ಇವೆಲ್ಲವೂ ಪ್ರಜಾಪ್ರಭುತ್ವವೇ ಆಗಿದ್ದು, ಇದನ್ನು ತತ್ವಶಾಸ್ತ್ರದ ನೆಲೆಗಟ್ಟಿನ ಗ್ರಹಿಕೆಯಲ್ಲಿ ನೋಡಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಮತ್ತು ಚಿಂತಕ ಪ್ರೊ.ಮುಜಾಪರ್ ಅಸ್ಸಾದಿ, ರಾಜ್ಯಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೊ.ಜಿ.ಟಿ.ರಾಮಚಂದ್ರಪ್ಪ, ಕಾರ್ಯಾಗಾರದ ಸಂಚಾಲಕ ಡಾ.ಕೃಷ್ಣ ಹೊಂಬಾಳ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.