ಬಿಜೆಪಿ ಯವರದ್ದು ಕಾಮಾಲೆ ಕಣ್ಣು
Team Udayavani, Mar 17, 2018, 12:24 PM IST
ಸೇಡಂ: ಬಿಜೆಪಿ ಯವರಿಗೆ ಕಾಮಾಲೆ ರೋಗ ಅಂಟಿಕೊಂಡಂತಿದೆ. ಅವರ ಕಣ್ಣಿಗೆ ಎಲ್ಲವೂ ಹಳದಿಯಾಗೇ ಕಾಣುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ವ್ಯಂಗ್ಯವಾಡಿದರು.
ಪಟ್ಟಣದ ಲೊಕೋಪಯೋಗಿ ಇಲಾಖೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಪುರಸಭೆಯ ನಿವೇಶನಗಳನ್ನು ಹಂಚಿಕೆ ಮಾಡಿಲ್ಲ ಎನ್ನುವ ಪ್ರತಿಪಕ್ಷಗಳ ಆರೋಪ ಸತ್ಯಕ್ಕೆ ದೂರವಾಗಿದ್ದು, ತಮ್ಮ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಜನ ಸಾಕ್ಷಿಯಾಗಿದ್ದಾರೆ. ಯಾರ ಸರ್ಟಿಫಿಕೇಟ್‌ನ ಅವಶ್ಯಕತೆ ಇಲ್ಲ ಎಂದು ಟಾಂಗ್ ನೀಡಿದರು. ಇನ್ನೆರಡು ವರ್ಷಗಳಲ್ಲಿ ಸೇಡಂ ತಾಲೂಕನ್ನು ಇಡೀ ರಾಜ್ಯ ನೋಡುವ ರೀತಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯ ಸರ್ಕಾರದ ಆಶಯದಂತೆ ಈಗಾಗಲೇ ಒಟ್ಟು ಏಳು ಇಂದಿರಾ ಕ್ಯಾಂಟೀನ್ ಪ್ರಾರಂಭಗೊಂಡಿದ್ದು, ಬಡ ರೈತರಿಗೆ ಕೇವಲ 5 ರೂಪಾಯಿಯಲ್ಲಿ ತಿಂಡಿ ಮತ್ತು 10 ರೂಪಾಯಿಗೆ ಊಟ ನೀಡುವ ವ್ಯವಸ್ಥೆ ಇದೆ ಎಂದರು.
ಕಾಡಾ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರರಾವ್ ಮಾಲಿಪಾಟೀಲ, ಕಾರ್ಯನಿರ್ವಾಹಕ ಅಭಿಯಂತರ ವಿಜಯದಶರಥ ಸಂಗನ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತು ಪಾಟೀಲ, ಗಫೂರ, ಸತ್ತಾರ ನಾಡೇಪಲ್ಲಿ ಇದ್ದರು. ಪುರಸಭೆ ಮುಖ್ಯಾಧಿ ಕಾರಿ ಶರಣಯ್ಯ ಸ್ವಾಮಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು
ಹೈಸ್ಕೂಲ್‌ನಲ್ಲಿ ಹಿಂದಿ ಬದಲಿಗೆ ಕೌಶಲ ವಿಷಯ ಆಯ್ಕೆಗೆ ಒತ್ತಡ
Road Mishap: ಲಾರಿ – ಕಾರು ನಡುವೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಮೃ*ತ್ಯು
Arrested: ಪಾಲಿಕೆ ಆಯುಕ್ತರ ನಕಲಿ ಸಹಿ ಹಾಕಿ ಹಣ ಡ್ರಾ ಮಾಡಿದ ಪ್ರಕರಣ.. ಪಿಎ ಸೇರಿ ಐವರ ಬಂಧನ
Sachin Panchal Case: ರಾಜು ಕಪನೂರ ಸೇರಿದಂತೆ ಆರೋಪಿಗಳಿಗೆ ಸಂಕ್ರಾಂತಿ ಶಾಕ್