ರೈತರ ಆತ್ಮಸ್ಥೈರ್ಯಕ್ಕೆ ಮುಷ್ಠಿಧಾನ್ಯ

Team Udayavani, Mar 18, 2018, 6:00 AM IST

Minister-,-BJP.jpg

ಬೆಂಗಳೂರು: ರೈತರಿಗೆ ಆತ್ಮಸ್ಥೈರ್ಯ ತುಂಬಲು ಹಾಗೂ ಬಿಜೆಪಿ ಸರ್ಕಾರದ ಸಾಧನೆಯನ್ನು ತಿಳಿಸಲು ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯ್ತಿಗಳಲ್ಲಿ ಮುಷ್ಠಿಧಾನ್ಯ ಅಭಿಯಾನ ಮಾ.21ರಿಂದ ಆರಂಭವಾಗಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದರು.

ಶನಿವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯಾದ್ಯಂತ ಹದಿನೈದು ದಿನಗಳ ಕಾಲ ಮುಷ್ಠಿಧಾನ್ಯ ಅಭಿಯಾನ ನಡೆಯಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ರೈತರಿಗಾಗಿ ಏನೂ ಮಾಡುತ್ತಿಲ್ಲ. ಕೃಷಿ ಹಾಗೂ ನೀರಾವರಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ರೈತರ ಅಭಿವೃದ್ಧಿಗಾಗಿ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ರೈತರಲ್ಲಿ ಆತ್ಮಸ್ಥೈರ್ಯ ತುಂಬಲು ಮುಷ್ಠಿಧಾನ್ಯ ಅಭಿಯಾನ ನಡೆಸಲಾಗುತ್ತದೆ ಎಂದು ತಿಳಿಸಿದರು.

ಮಾ.21ರಿಂದ ಆರಂಭ: “ರೈತಬಂಧು ಯಡಿಯೂರಪ್ಪ’ ಘೊಷಣೆಯಡಿ ಮಾ.21ರಿಂದ ಆರಂಭವಾಗುವ ಈ ಅಭಿಯಾನ ಏ.8ರಿಂದ 10 ರ ಅವಧಿಯಲ್ಲಿ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲೂ ಸಂಚರಿಸಲಿದೆ. ಈ ಸಂದರ್ಭದಲ್ಲಿ ರೈತರನ್ನು ಒಗ್ಗೂಡಿಸಿ ಮುಷ್ಠಿಧಾನ್ಯದಿಂದ ಸಂಗ್ರಹವಾದ ಅಕ್ಕಿ, ಜೋಳ, ರಾಗಿಯಿಂದ ಊಟ ಸಿದ್ಧಪಡಿಸಿ, ಸಾಮೂಹಿಕ ಭೋಜನ ಮಾಡಲಾಗುತ್ತಿದೆ. ಹಾಗೆಯೇ ಪ್ರತಿ ಗ್ರಾಮ ಪಂಚಾಯ್ತಿಯ ದೊಡ್ಡಹಳ್ಳಿಯಲ್ಲಿ ಗ್ರಾಮ ಸಭೆಯನ್ನು ನಡೆಸಲಿದ್ದೇವೆ ಎಂದರು.

ಮುಷ್ಠಿಧಾನ್ಯ ಅಭಿಯಾನಕ್ಕಾಗಿ 6000 ಪ್ರಮುಖರನ್ನು ನೇಮಿಸಲಾಗಿದ್ದು, ಇವರಿಗೆಲ್ಲಾ ಒಂದು ಬ್ಯಾಗ್‌ ನೀಡಲಾಗುತ್ತದೆ. ಅದರಲ್ಲಿ ರೈತರಿಗೆ ಆತ್ಮಸ್ಥೈರ್ಯ ತುಂಬುವ ಕರಪತ್ರ, ಬಿಜೆಪಿಯ ಸಾಧನೆ, ಕಾಂಗ್ರೆಸ್‌ ರೈತರಿಗೆ ಮಾಡಿರುವ ವಂಚನೆಯ ವಿವರದ ಇನ್ನೊಂದು ಕರಪತ್ರ ಇರಲಿದೆ. ಜತೆಗೆ ಬಿಜೆಪಿಯ ನಾಲ್ಕೈದು ಶಾಲು ಇರಲಿದೆ. ಮುಷ್ಠಿಧಾನ್ಯ  ಪ್ರಮುಖರು ರೈತರ ಮನೆ ಮನೆಗೆ ಹೋಗಿ ಅವರಿಂದ ಧಾನ್ಯ ಸಂಗ್ರಹಿಸಿ, ಬಿಜೆಪಿಯ ಕರಪತ್ರವನ್ನು ನೀಡಲಿದ್ದಾರೆ. ಈ ವೇಳೆ ನಾಯಕರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

ಕೇಂದ್ರದಲ್ಲಿ 50 ವರ್ಷಕ್ಕೂ ಅಧಿಕ ಕಾಲ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ಪೂರ್ಣಗೊಳಿಸದೇ ನೆನೆಗುದಿಗೆ ಬಿದ್ದಿದ್ದ 99 ನೀರಾವರಿ ಯೋಜನೆಗಳನ್ನು ಬಿಜೆಪಿ ಜಾರಿಗೆ ತಂದಿದೆ. ಹಾಸನದ ರೈತರಿಗೆ ಆಲೂಗಡ್ಡೆ ಬೆಲೆಯಲ್ಲಿ ನಷ್ಟವಾದಾಗ ಅದನ್ನು ಭರಿಸಲಾಗಿದೆ. ದಾವಣೆಗೆರೆಯಲ್ಲಿ ಜೋಳದ ಬೆಲೆ ಕುಸಿದಾಗ 1,550 ರೂ. ಬೆಂಬಲ ಬೆಲೆ ನೀಡಿ ಖರೀದಿಸಲಾಗಿತ್ತು ಎಂದರು.  ಮುಖಂಡರಾದ ಅರವಿಂದ ಲಿಂಬಾವಳಿ, ರವಿಕುಮಾರ್‌, ಅನ್ವರ್‌ ಮಾನಿಪ್ಪಾಡಿ ಮೊದಲಾದವರು ಇದ್ದರು.

ಬಿಜೆಪಿ ಆಡಳಿತದ ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದಲ್ಲಿ ರೈತರ ಸಾಲ ಮನ್ನಾ ಮಾಡಿದ ಮಾದರಿಯಲ್ಲೇ ಕರ್ನಾಟಕದ ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿರುವ ಸಾಲವನ್ನು ರಾಜ್ಯ ಸರ್ಕಾರವೇ ಮನ್ನಾ ಮಾಡಲಿ.
ಪ್ರಕಾಶ್‌ ಜಾವಡೇಕರ್‌, ಕೇಂದ್ರ ಸಚಿವ

ಟಾಪ್ ನ್ಯೂಸ್

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Jharkhand Polls: Coalition of INDIA to power in tribal state; A setback for BJP

Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.