ಬೂತ್ ಮಟ್ಟದಲ್ಲಿ ಪಕ್ಷ ಸಶಕ್ತವಾಗಲಿ: ಆಯನೂರು ಮಂಜುನಾಥ
Team Udayavani, Mar 20, 2018, 9:00 AM IST
ಕೊಲ್ಲೂರು: ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕಾಲ ಸನಿಹವಾಗಿದೆ, ಪ್ರತಿ ಬೂತ್ ಮಟ್ಟದಲ್ಲಿ ಬಿಜೆಪಿ ಸಶಕ್ತವಾಗಬೇಕು. ಆ ನಿಟ್ಟಿನಲ್ಲಿ ಪ್ರತಿ ಕಾರ್ಯಕರ್ತರು ಕ್ರಿಯಾಶೀಲರಾಗಿ ಮತಕ್ಕೊಂದು ಮೌಲ್ಯ ತರಬೇಕು ಎಂದು ಮಾಜಿ ರಾಜ್ಯಸಭಾ ಸದಸ್ಯ ಬಿ.ಜೆ.ಪಿ. ಮುಖಂಡ ಆಯನೂರು ಮಂಜುನಾಥ ಹೇಳಿದರು.
ವಂಡ್ಸೆ ಸಮೀಪದ ನೆಂಪು ಪೆಟ್ರೋಲ್ ಬಂಕ್ ಬಳಿ ಮಾ. 18ರಂದು ಸಂಜೆ ನಡೆದ ಬೈಂದೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲದ ನವಶಕ್ತಿ ಸಮಾವೇಶವನ್ನು ಉದ್ಘಾಟಿಸಿದರು.ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಬಿ.ಎಂ. ಸುಕುಮಾರ ಶೆಟ್ಟಿ ಅವರು ಮಾತನಾಡಿ, ನರೇಂದ್ರ ಮೋದಿ ಅವರ ಆಡಳಿತ ವ್ಯವಸ್ಥೆಯ ಪ್ರಭಾವವು ಕರ್ನಾಟಕದಲ್ಲಿ ಹೊಸ ಚೆ„ತನ್ಯ ತುಂಬಿಸುವುದರೊಡನೆ ಯಡಿಯೂರಪ್ಪನವರ ನೇತƒತ್ವದ ಬಿಜೆಪಿ ಸರಕಾರ ಮತ್ತೆ ಬರಬೇಕೆಂದರು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ ಶೆಟ್ಟಿ, ಮಂಡಲ ಸಂಚಾಲಕ ಪ್ರವೀಣ ಕುಮಾರ ಗುರ್ಮೆ, ಕುಂದಾಪುರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣಪತಿ ಶ್ರೀಯಾನ್, ಕರ್ನಾಟಕದ ಉಸ್ತುವಾರಿ ಪದ್ಮನಾಭನ್, ಬೈಂದೂರು ಉಸ್ತುವಾರಿ ರವಿ ಅಮೀನ್, ರೈತ ಸಂಘದ ಪ್ರಮುಖ ದೀಪಕ್ ಕುಮಾರ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಬೈಂದೂರು ಬಿಜೆಪಿ ಕ್ಷೇತ್ರ ಮಂಡಲದ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಚಂದ್ರ ಖಾರ್ವಿ ಮರವಂತೆ ಹಾಗೂ ಅಭಿಲಾಷ್ ಶೆಟ್ಟಿ ವಂಡ್ಸೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Badminton; ಸಯ್ಯದ್ ಮೋದಿ ಇಂಟರ್‌ನ್ಯಾಶನಲ್: ಸಿಂಧು, ಸೆನ್ ಕ್ವಾರ್ಟರ್‌ಫೈನಲಿಗೆ
Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.