ಉತ್ತಮ ಸಂಸ್ಕಾರದಿಂದ ಉನ್ನತಿ ಸಾಧ್ಯ: ಡಾ| ಬೇ.ಸಿ. ಗೋಪಾಲಕೃಷ್ಣ ಭಟ್
Team Udayavani, Mar 20, 2018, 10:50 AM IST
ಕುಂಬಳೆ: ಉತ್ತಮ ಗುಣನಡತೆ, ಜ್ಞಾನದಿಂದ ಜೀವನದಲ್ಲಿ ಉನ್ನತಿ ಸಾಧ್ಯ. ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲುವ ಸಾಮಾರ್ಥ್ಯ ಕೆಲವೇ ಜನರಿಗೆ ಇರುತ್ತದೆ. ಇದರಲ್ಲಿ ನಾರಾಯಣ ರಾವ್ ಅವರು ತಮ್ಮ ಹಾಸ್ಯ ಪ್ರಜ್ಞೆಯಿಂದಲೇ ಇಂತಹ ಸವಾಲುಗಳನ್ನು ಎದುರಿಸಿ ವಿಜಯಿಯಾಗಿದ್ದಾರೆ ಎಂದು ಹಿರಿಯ ಸಾಹಿತಿ ನಿವೃತ್ತ ಪ್ರಾಂಶುಪಾಲರಾದ ಡಾ| ಬೇ.ಸಿ. ಗೋಪಾಲಕೃಷ್ಣ ಭಟ್ ನುಡಿದರು. ಪೈವಳಿಕೆನಗರ ಸರಕಾರಿ ಹೈಯರ್ ಸೆಕೆಂಡರಿ ವಿದ್ಯಾಲಯದಿಂದ ನಿವೃತ್ತರಾಗುತ್ತಿರುವ ಹೈಯರ್ ಸೆಕೆಂಡರಿ ವಿಭಾಗದ ನಾರಾಯಣ ರಾವ್ ಅವರನ್ನು ಅಭಿನಂದಿಸಿ ಮಾತನಾಡಿದರು.
ಕುಂಬಳೆಯ ಹೋಲಿ ಫ್ಯಾಮಿಲಿ ಶಾಲೆ ಹಾಗೂ ಏತಡ್ಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿ, ಅಗಲ್ಪಾಡಿ ಹೆ„ಸ್ಕೂಲಿನಲ್ಲಿ ಪ್ರೌಢ ಶಿಕ್ಷಣ ಪಡೆದು, ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದರು. ಅಧ್ಯಾಪನ ವೃತ್ತಿಯತ್ತ ಆಕರ್ಷಿತರಾದ ಅವರು ಕಲ್ಲಿಕೋಟೆ ವಿಶ್ವವಿದ್ಯಾಲಯದ ಶಿಕ್ಷಕ ತರಬೇತಿ ಕೇಂದ್ರದಲ್ಲಿ ತರಬೇತಿ ಪೂರ್ಣಗೊಳಿಸಿ ಕುಂಡಂಕುಳಿ ಶಾಲೆಯಲ್ಲಿ ತಾತ್ಕಾಲಿಕ ಶಿಕ್ಷಕರಾಗಿ ತಮ್ಮ ಔದ್ಯೋಗಿಕ ಜೀವನಕ್ಕೆ ಕಾಲಿರಿಸಿದರು. ಮುಂದೆ ಪಾಂಡಿ, ಅಡೂರು, ಅಂಗಡಿಮೊಗರು ಶಾಲೆಗಳಲ್ಲಿ ತಾತ್ಕಾಲಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ 1998ರಲ್ಲಿ ಪಡ್ರೆ ಹೆ„ಸ್ಕೂಲಲ್ಲಿ ಶಿಕ್ಷಕರಾಗಿ ಸರಕಾರಿ ಸೇವೆಗೆ ಪಾದಾರ್ಪಣೆ ಮಾಡಿದರು. 2006ರಲ್ಲಿ ಅದೇ ಶಾಲೆಯಲ್ಲಿ ಇಲಾಖಾ ವರ್ಗಾವಣೆಯ ಮುಖಾಂತರ ಹೈಯರ್ ಸೆಕೆಂಡರಿ ವಿಭಾಗದ ಉಪನ್ಯಾಸಕರಾಗಿ ಭಡ್ತಿ ಹೊಂದಿ 2013ರಲ್ಲಿ ಪೈವಳಿಕೆ ನಗರ ಸರಕಾರಿ ಹೈಯರ್ ಸೆಕೆಂಡರಿ ಶಾಲೆಗೆ ವರ್ಗಾವಣೆಗೊಂಡರು. ಓದು ಮತ್ತು ಯಕ್ಷಗಾನದಲ್ಲಿ ವಿಶೇಷ ಒಲವು ಹೊಂದಿರುವ ನಾರಾಯಣ ರಾವ್ ಡಿ.ಪಿ.ಇ.ಪಿ.ಯಿಂದ ತೊಡಗಿ ಎಸ್.ಎಸ್.ಎ. ವರೆಗೆ ಕನ್ನಡ ಪಠ್ಯಪುಸ್ತಕ ಸಮಿತಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಪೂರ್ವ ಸೇವೆ ಸಲ್ಲಿಸಿದರು. ಪಡ್ರೆ ಶಾಲೆಯಲ್ಲಿ ಸುಮಾರು 5 ವರ್ಷಗಳ ಕಾಲ ಪ್ರಭಾರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವರು.
ಅಭಿನಂದನ ಸಮಾರಂಭವನ್ನು ಪ್ರಾಂಶುಪಾಲೆ ವಿಶಾಲಾಕ್ಷಿ ಉದ್ಘಾಟಿಸಿದರು. ಮುಖ್ಯೋಪಾಧ್ಯಾಯಿನಿ ಶ್ಯಾಮಲಾ ಪಿ. ಅಧ್ಯಕ್ಷತೆ ವಹಿಸಿದರು. ಇದೇ ಸಂದರ್ಭದಲ್ಲಿ ಪೈವಳಿಕೆ ನಗರ ಶಾಲೆಯಲ್ಲಿ ಕಳೆದ 14 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಕಲ್ಲಿಕೋಟೆಗೆ ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕ ಸುನೀಶ್ ಕುಮಾರ್ ತಡತ್ತಿಲ್ ಅವರನ್ನು ಸಮಾರಂಭದಲ್ಲಿ ಶಾಲು ಹೊದೆಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಇಬ್ರಾಹೀಂ ಪಾವಲುಕೋಡಿ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಪಿ. ಅಬ್ದುಲ್ಲ ಹಾಜಿ, ನಿವೃತ್ತ ಶಿಕ್ಷಣ ಉಪನಿರ್ದೇಶಕರಾದ ಶ್ರೀನಿವಾಸ ಕೆ., ನಿವೃತ್ತ ಶಿಕ್ಷಕ ರತ್ನಕುಮಾರ್, ಮಾಜಿ ಪಿಟಿಎ ಅಧ್ಯಕ್ಷ ಲಾರೆನ್ಸ್ ಡಿ’ಸೋಜ ಶುಭಾಶಂಸನೆಗೈದರು. ಪಿಟಿಎ ಉಪಾಧ್ಯಕ್ಷರಾದ ರಮೇಶ್ ಪೈವಳಿಕೆ, ಕ್ರೆಸೆಂಟ್ ನ್ಪೋರ್ಟ್ಸ್ ಕ್ಲಬ್‌ನ ಅಬ್ದುಲ್ ರಹಿಮಾನ್, ವೆಂಕಟರಮಣ ನಾಯಕ್, ಕುಞಿಕೃಷ್ಣನ್ ಉಪಸ್ಥಿತರಿದ್ದರು. ಶ್ರದ್ಧಾ ಎನ್. ಭಟ್ ಪ್ರಾರ್ಥನೆ ಹಾಡಿದರು. ಹೈಯರ್ ಸೆಕೆಂಡರಿ ವಿಭಾಗದ ವಿಶ್ವನಾಥ ಕುಂಬಳೆ ಸ್ವಾಗತಿಸಿದರು, ಎಸ್‌ಆರ್‌ಜಿ ಸಂಚಾಲಕ ರವೀಂದ್ರನಾಥ್ ಕೆ.ಆರ್. ವಂದಿಸಿದರು. ಶಾಲಾ ನೌಕರರ ಸಂಘದ ಕಷ್ಣಮೂರ್ತಿ ಎಂ.ಎಸ್.
ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್
Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.