ಮುಂದಿನ ಹೋರಾಟ: ಶೀಘ್ರ ನಿರ್ಧಾರ
Team Udayavani, Mar 20, 2018, 6:15 AM IST
ಹುಬ್ಬಳ್ಳಿ: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ಕೋರಿ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿರುವುದು ಖಂಡನೀಯ. ಈ ಕುರಿತು ಮುಂದಿನ ದಿನಗಳಲ್ಲಿ ಹೋರಾಟದ ರೂಪರೇಷೆ ನಿರ್ಧರಿಸಲಾಗುವುದು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ವೀರ ಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾ| ನಾಗಮೋಹನದಾಸ ಸಮಿತಿ ವೀರಶೈವ ಧರ್ಮದ ಇತಿಹಾಸ ಕುರಿತು ಅಧ್ಯಯನ ಮಾಡದೆ ಸರಕಾರದ ಅಣತಿಯಂತೆ ವರದಿ ಮಂಡಿಸಿದೆ ಎಂದು ಆರೋಪಿಸಿದರು. ಲಿಂಗಾಯತ ಧರ್ಮದಲ್ಲಿ 99 ಒಳಪಂಗಡಗಳನ್ನು ಸೇರಿಸಿದ್ದು, ಅಷ್ಟು ಜಾತಿಗಳಿರುವುದೇ ಸುಳ್ಳು. ಆಯಾ ಜಾತಿಯ ಮುಖಂಡರನ್ನು ಕೇಳಿದಾಗಲೇ ಸತ್ಯ ಬಯಲಾಗುತ್ತದೆ. ರಾಜ್ಯ ಸರಕಾರವು ವೀರಶೈವ/ಲಿಂಗಾಯತ ಧರ್ಮ ಒಡೆಯುವುದಕ್ಕೆ ತೋರಿದ ಇಚ್ಛಾಶಕ್ತಿಯನ್ನು ಮಹದಾಯಿ ಹಾಗೂ ಕಾವೇರಿ ವಿಷಯವಾಗಿ ತಲೆದೋರಿದ ಸಮಸ್ಯೆಗೆ ಆದ್ಯತೆ ನೀಡಲಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲವು ವೇಷಧಾರಿಗಳನ್ನು ಮುಂದಿಟ್ಟುಕೊಂಡು ಧರ್ಮ ಇಬ್ಭಾಗ ಮಾಡುವ ಕಾರ್ಯ ಕೈಗೊಂಡಿದ್ದಾರೆ. ಸಿದ್ದರಾಮಯ್ಯ ಧರ್ಮ ಒಡೆದ ಅಪವಾದ ಹೊತ್ತುಕೊಂಡಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಗೊತ್ತಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.