ಹಟ್ಟಿ ಗೊಬ್ಬರ ಬಳಸಿ ಕೃಷಿ ಬೆಳೆವ ಮಹಾಬಲ ಭಟ್ಟರು!


Team Udayavani, Mar 20, 2018, 8:10 AM IST

pradesha-samachara-19-3.jpg

ಬಹುತೇಕ ಕೃಷಿಕರು, ಗೋಸಾಕಾಣಿಕೆ ಮಾಡುವ ಮಂದಿ ಮಾತನಾಡುವುದು ದನದ ಹಾಲಿನ ಬಗ್ಗೆ. ದನ ಹಾಲೆಷ್ಟು ನೀಡುತ್ತದೆ. ಲಾಭ,  ನಷ್ಟ ಇತ್ಯಾದಿ ಲೆಕ್ಕಚಾರಗಳು. ಆದರೆ ಗುತ್ತಿಗಾರು ಗ್ರಾಮದ ವಳಲಂಬೆ ಮಹಾಬಲೇಶ್ವರ ಭಟ್ಟರು ಮೊದಲು ಕೇಳುವ ಪ್ರಶ್ನೆ ದನ ಎಷ್ಟು ಸೆಗಣಿ ಹಾಕುತ್ತದೆ ಎಂಬುದು. ನಮ್ಮ ಮನೆಯ ಎರಡು ದನ ದಿನಕ್ಕೆ ಹಾಕುವ ಸೆಗಣಿ 17 ಕೆಜಿ..!. ಇಲ್ಲಿಂದಲೇ ಅವರ ಮಾತು ಧಾಟಿ ಶುರುವಾಗುತ್ತದೆ.

ಅರ್ಚಕರಾದ ಮಹಾಬಲೇಶ್ವರ ಭಟ್ಟರು ಅನೇಕ ವರ್ಷಗಳಿಂದಲೂ ಸಾವಯವ ಕೃಷಿಕರಾಗಿದ್ದಾರೆ. ಅರ್ಚಕ ವೃತ್ತಿಯ ಜತೆಗೆ ಅಡಿಕೆ ಪ್ರಮುಖ ಬೆಳೆ. ಜತೆಗೆ ಕೊಕೋ, ಕಾಳುಮೆಣಸು, ಬಾಳೆ. ಆದರೆ ಇದೆಲ್ಲಾ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ಸು ಕಾಣುತ್ತಿರಲಿಲ್ಲ. ತೋಟದ ನಡುನಡುವೆ ಅಡಿಕೆ ಮರದ ಸೋಗೆ ಕೆಂಪಾಗಿ ಎದ್ದು ಕಾಣುತ್ತಿತ್ತು. 

ಪರಿಹಾರ ಎಲ್ಲೂ ಸಿಕ್ಕಿರಲಿಲ್ಲ. ಆದರೆ ಈಗ ಅದೇ ತೋಟ ಹಚ್ಚ ಹಸುರಿನಿಂದ ನಳನಳಿಸುತ್ತಿದೆ. ಕಾಳುಮೆಣಸು ಸಹಿತ ಇತರೆಲ್ಲಾ ಕೃಷಿಗಳಿಗೆ ಮರುಜೀವ ಬಂದಿದೆ. ಇಂತಹ ಬದಲಾವಣೆ ಕಂಡದ್ದು, ಗೋವಿನ ಮೂಲಕ. ಅದೂ ದೇಸೀ ಗೋವಿನ ಕಾರಣದಿಂದ.

ತರಬೇತಿ ಪ್ರೇರಣೆ
ತಮ್ಮ ಅಡಿಕೆ ತೋಟದ ಸುಮಾರು 380 ಅಡಿಕೆ ಮರಗಳಿಗೆ ಕಂಪನಿಗಳಿಂದ ಸಾವಯವ ಗೊಬ್ಬರ ಖರೀದಿ ಮಾಡಿ ಹಾಕುತ್ತಿದ್ದರು. 17 ವರ್ಷಗಳಿಂದ ಇದೇ ರೀತಿ ಮಾಡುತ್ತಾ ಬಂದಿದ್ದರೂ ನಿರೀಕ್ಷಿತ ಫ‌ಲಿತಾಂಶ ಸಿಗಲಿಲ್ಲ. ಅದೊಂದು ದಿನ ಕೃಷಿ ಋಷಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಲ್ಲಿಂದ ವಿವಿಧ ಪ್ರಯೋಗ ಮಾಡುತ್ತಲೇ ಇದ್ದರು. ಬಳಿಕ ನೆಕ್ಕರಕಳೆಯ ಸುಬ್ರಹ್ಮಣ್ಯ ಪ್ರಸಾದ್‌ ಎಂಬ ಕೃಷಿಕರು  ನೀಡಿದ ಮಾಹಿತಿ ಆಧಾರದಲ್ಲಿ ತಾವೇ ಸ್ವತಃ ಗೊಬ್ಬರ ತಯಾರು ಮಾಡಲು ಶುರು ಮಾಡಿದರು. ಅದಕ್ಕಾಗಿಯೇ ದೇಸೀ ಗೋವನ್ನು ಸಾಕಲು ಆರಂಭಿಸಿದರು. ಅದುವರೆಗೆ ಇದ್ದ ವಿವಿಧ ತಳಿಯ ಗೋವುಗಳ ಸಾಕಾಣಿಗೆ ದೂರ ಮಾಡಿ ದೇಸೀ ತಳಿಯ ಗೋವನ್ನು ಸಾಕಿದರು. ಅದುವರೆಗೆ ಇದ್ದ ಗೋಬರ್‌ ಗ್ಯಾಸ್‌, ಸ್ಲರಿ ಪದ್ದತಿ ಬಿಟ್ಟರು. ಕೇವಲ ದೇಸೀ ಗೋವಿನ ಸೆಗಣಿ ಸಂಗ್ರಹಿಸಿ ಅದರ ಮೂಲಕವೇ ಗೊಬ್ಬರ ತಯಾರು ಮಾಡಿ ಅಡಿಕೆ ಮರ ಸಹಿತ ತಮ್ಮೆಲ್ಲಾ ಕೃಷಿಗೆ ಹಾಕಿದರು. ಕೆಲವೇ ಸಮಯದಲ್ಲಿ ಬದಲಾವಣೆ ಕಂಡರು. ಈಗ ಸೆಗಣಿಗಾಗಿಯೇ ಗೋವನ್ನು ಸಾಕಲು ಶುರು ಮಾಡಿದ್ದಾರೆ. ದನ ಹಾಲು ಕೊಡುವುದಕ್ಕಾಗಿಯೇ ಇರುವುದು ಎಂಬ ಭಾವವೇ ಇಲ್ಲ. ಹಾಲಿನಿಂದಲೇ ಲಾಭ ಅಲ್ಲ ಎಂಬ ಮನೋಭಾವ ಬೆಳೆಸಿದ್ದಾರೆ.

ಇನ್ನೊಂದು ಪ್ರಮುಖವಾದ ಅಂಶವೆಂದರೆ ಬೇಸಗೆಯಲ್ಲಿ ನೀರಿನ ಸಮಸ್ಯೆ ಇವರ ತೋಟಕ್ಕೆ ಇದೆ.ಆದರೆ ಈ ಬಾರಿ ನೀರು ಕಡಿಮೆಯಾದರೂ ತೊಂದರೆಯಾಗಿಲ್ಲ. ಕಳೆದ 8 ವರ್ಷಗಳಿಂದ ಅಡಿಕೆ ನಳ್ಳಿ ಬೀಳುತ್ತಿತ್ತು, ಈಗ ನಳ್ಳಿ ಬೀಳುವುದು ಕಡಿಮೆಯಾಗಿದೆ ಎಂದು ಹೇಳುವಾಗ ಮಹಾಬಲೇಶ್ವರ ಭಟ್ಟ ಮುಖದಲ್ಲಿ ಸಾರ್ಥಕತೆ ಕಾಣುತ್ತದೆ. ಈಗ 2 ಗೋವಿನ ಮೂಲಕ ವರ್ಷಕ್ಕೆ 2 ಬಾರಿ 4 ಕೆಜಿ ಗೊಬ್ಬರ ನೀಡಲು ಸಾಧ್ಯವಾಗುತ್ತದೆ. ಈಗ ಮಣ್ಣಿನಲ್ಲಿ ಬದಲಾವಣೆ ಕಂಡಿದೆ. ಎರೆಹುಳಗಳು ಸಾಕಷ್ಟು ಇವೆ. ಕಾಳುಮೆಣಸು ಬಳ್ಳಿಗೆ ಬರುವ ರೋಗ ನಿಯಂತ್ರಣದಲ್ಲಿದೆ ಎನ್ನುತ್ತಾ ಗೋವಿನ ಮೂಲಕ ಆದ ಕೃಷಿ ಬದಲಾವಣೆ, ಮಣ್ಣು ಜೀವ ಪಡೆದ ಬಗೆಯನ್ನು ಸೊಗಸಾಗಿ ವಿವರಿಸುತ್ತಾರೆ.

ಲಾಭ ಹೇಗೆ?
ದನದ ಸೆಗಣಿ ಹೇಗೆ ಲಾಭ ಎಂಬುದನ್ನೂ ಅವರೇ ವಿವರಿಸುತ್ತಾರೆ. ಅವರ 2 ದನಗಳು ದಿನಕ್ಕೆ 17 ಕೆಜಿ ಸೆಗಣಿ ಹಾಕುತ್ತದೆ. ಇವನೆಲ್ಲ ಸಂಗ್ರಹ ಮಾಡುತ್ತಾ ಸುಮಾರು 700 ಕೆಜಿ ಸೆಗಣಿ ಸಂಗ್ರಹವಾದ ಬಳಿಕ ಅದಕ್ಕೆ ಜೀವಾಮೃತ ಸಿಂಪಡಣೆ ಮಾಡಿ ಅನಂತರ 2 ತಿಂಗಳ ಕಾಲ ಮುಚ್ಚಿಡುತ್ತಾರೆ. ಅನಂತರ 700 ಕೆಜಿಗೆ ತಲಾ ಶೇ. 30 ರಂತೆ ಹೊಂಗೆ, ಹರಳಿಂಡಿ, ಬೇವಿನಹಿಂಡಿ ಹಾಗೂ ರಾಕ್‌ ಪಾಸ್ಪೇಟ್‌ನೊಂದಿಗೆ ಮಿಶ್ರಣ ಮಾಡಿ ಗೋಣಿಯಲ್ಲಿ ತುಂಬಿ ಕೃಷಿಗೆ ಅಳವಡಿಸುತ್ತಿದ್ದಾರೆ. ಈಗ ಅಡಿಕೆ ಮರದ ಸೋಗೆ, ಹಿಂಗಾರ ಉದ್ದ ಬರುತ್ತಿದೆ, ಹಳದಿಯಾಗಿಯೇ ಇರುತ್ತಿದ್ದ ಅಡಿಕೆ ಮರದ ಸೋಗೆ ಹಸುರಾಗಿದೆ.

— ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car-parkala

ಕಾಸರಗೋಡು: ಬೈಕ್‌ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.