ಅಡ್ಡಮತದಾನ: ತೀರ್ಪು ಕಾಯ್ದಿರಿಸಿದ ಸ್ಪೀಕರ್
Team Udayavani, Mar 20, 2018, 6:00 AM IST
ಬೆಂಗಳೂರು:ಜೆಡಿಎಸ್ ಬಂಡಾಯ ಶಾಸಕರು ಅಡ್ಡ ಮತದಾನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಕೆ.ಬಿ.ಕೋಳಿವಾಡ ತೀರ್ಪು ಕಾಯ್ದಿರಿಸಿದ್ದಾರೆ.
ಸೋಮವಾರ ಪ್ರಕರಣದ ಮರು ವಿಚಾರಣೆ ನಡೆಸಿದ ಅವರು ಪರ-ವಿರೋಧ ವಾದ ಆಲಿಸಿ ತೀರ್ಪು ಕಾಯ್ದಿರಿಸಿದರು.
ಇದಕ್ಕೂ ಮುನ್ನ ನಡೆದ ವಿಚಾರಣೆ ಸಂದರ್ಭದಲ್ಲಿ ಅಡ್ಡ ಮತದಾನ ಮಾಡಿರುವ ಏಳು ಶಾಸಕರನ್ನು ಅನರ್ಹ ಮಾಡುವಂತೆ ಜೆಡಿಎಸ್ ಶಾಸಕ ಬಿ.ಬಿ.ನಿಂಗಯ್ಯ ಸ್ಪೀಕರ್ಗೆ ಮನವಿ ಮಾಡಿದರು.
ಕಳೆದ ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ಪರವಾಗಿ ಎಚ್.ಡಿ.ರೇವಣ್ಣ ಅವರು ಮತಗಟ್ಟೆಯಲ್ಲಿ ಏಜೆಂಟಾಗಿದ್ದರು. ಆ ಸಂದರ್ಭದಲ್ಲಿ ಅವರಿಗೆ ತೋರಿಸಿಯೇ ಕಾಂಗ್ರೆಸ್ಗೆ ಮತ ಹಾಕುತ್ತಿದ್ದೇವೆ ಎಂದು ಅಡ್ಡ ಮತದಾನ ಮಾಡಿದ್ದಾರೆ. ಈ ಮೂಲಕ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ. ನಂತರದ ದಿನಗಳಲ್ಲಿ ರಾಹುಲ್ಗಾಂಧಿ ಸೇರಿದಂತೆ ಸಾಕಷ್ಟು ಕಾಂಗ್ರೆಸ್ ಮುಖಂಡರ ಜತೆ ಗುರುತಿಸಿಕೊಂಡಿದ್ದಾರೆ. ನಮ್ಮ ಪಕ್ಷದ ಚಿನ್ಹೆ ಮೇಲೆ ಗೆದ್ದು ಬಂದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಹೀಗಾಗಿ, ಇವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು ಎಂದು ಕೋರಿದರು.
ಆದರೆ, ಬಂಡಾಯ ಶಾಸಕರ ಪರ ವಕೀಲರು, ಸುಪ್ರೀಂಕೋರ್ಟ್ನ ಐವರು ನ್ಯಾಯಾಧೀಶರ ತೀರ್ಪು ಪ್ರಕಾರ ಅಧಿವೇಶನದ ಸಂದರ್ಭದಲ್ಲಿ ವಿಪ್ ಜಾರಿಯಾದರೆ ಮಾತ್ರ ಅದು ಶಾಸಕರು ಪಾಲಿಸಬೇಕು. ಅಧಿವೇಶನ ಹೊರತುಪಡಿಸಿ ಉಳಿದ ಸಂದರ್ಭದಲ್ಲಿ ಪಕ್ಷವು ಶಾಸಕರು ತಮ್ಮ ಇಷ್ಟದಂತೆ ನಡೆಸಿಕೊಳ್ಳುವಂತಿಲ್ಲ. ಹೀಗಾಗಿ, ರಾಜ್ಯಸಭೆ ಚುನಾವಣೆ ವೇಳೆ ಜಾರಿ ಮಾಡಿರುವ ವಿಪ್ಗೆ ಮಾನ್ಯತೆ ಇಲ್ಲ ಎಂದು ವಾದ ಮಂಡಿಸಿದರು.
ಜತೆಗೆ ಏಳು ಜನರಿಗೆ ಅನ್ವಯವಾಗುವ ತೀರ್ಪು ಶಾಸಕ ಗೋಪಾಲಯ್ಯ ಅವರಿಗೂ ಅನ್ವಯವಾಗಬೇಕು. ಅವರ ಸದಸ್ಯತ್ವ ಅನರ್ಹತೆಗೆ ಜೆಡಿಎಸ್ ಯಾಕೆ ಸ್ಪೀಕರ್ಗೆ ಅರ್ಜಿ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದರು.
ವಿಚಾರಣೆ ಹಿನ್ನೆಲೆಯಲ್ಲಿ ಏಳು ಬಂಡಾಯ ಶಾಸಕರು ವಕೀಲರ ಜತೆ ಸ್ಪೀಕರ್ ಮುಂದೆ ಹಾಜರಾಗಿದ್ದರು. ಜೆಡಿಎಸ್ ಪಕ್ಷದ ಪರ ಬಿ.ಬಿ.ನಿಂಗಯ್ಯ, ಸಿ.ಎನ್.ಬಾಲಕೃಷ್ಣ ವಕೀಲರ ಜತೆ ಹಾಜರಾಗಿದ್ದರು.
ಎ.ಎಸ್.ನಡಹಳ್ಳಿ ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರಿದ್ದಾರೆ. ಹಾಗಂತ ಕಾಂಗ್ರೆಸ್ನವರು ಜೆಡಿಎಸ್ ತರಹ ಕಾಟ ಕೊಡುತ್ತಿಲ್ಲ. ನಮ್ಮ ವಿಚಾರದಲ್ಲಿ ಇನ್ನೂ ತೀರ್ಪು ಬಂದಿಲ್ಲ. ತೀರ್ಪು ಬಂದ ಮೇಲೆ ಮುಂದಿನ ನಡೆ. ರಾಜ್ಯಸಭೆ ಚುನಾವಣೆಯಲ್ಲಿ ನಾವು ಮತದಾನ ಮಾಡಬಾರದು ಎಂದು ನಮ್ಮ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ.
– ಚೆಲುವರಾಯಸ್ವಾಮಿ, ಬಂಡಾಯ ಶಾಸಕ
ನಾವು ದೇವೇಗೌಡರ ವಿರುದ್ಧವೇ ಕುಮಾರಸ್ವಾಮಿಯನ್ನು ಮುಖ್ಯಮಂತ್ರಿ ಮಾಡಲು ಹೊರಟಿದ್ದೆವು. ದೇವೇಗೌಡರು ಎಂದಿಗೂ ನಮ್ಮ ನಾಯಕರೇ. ಅವರು ಪ್ರಶ್ನಾತೀತ ನಾಯಕ. ಏಳು ಶಾಸಕರ ವಿರುದ್ಧ ಅವರು ಹೋರಾಟ ಮಾಡುವುದಾದರೆ ಮಾಡಲಿ. ತೀರ್ಮಾನ ಜನರಿಗೆ ಬಿಟ್ಟದ್ದು. ಒಳ್ಳೆಯದು-ಕೆಟ್ಟದ್ದು ದೇವರಿಗೆ ಬಿಟ್ಟದ್ದು.
– ಜಮೀರ್ ಆಹಮದ್, ಬಂಡಾಯ ಶಾಸಕ
ನ್ಯಾಯಾಧೀಶರನ್ನು ಯಾವಾಗ ತೀರ್ಪು ಕೊಡುತ್ತೀರಿ ಎಂದು ಕೇಳಲು ಸಾಧ್ಯವೇ? ನಾನು ಇಲ್ಲಿ ಜಡ್ಜ್. ನೀವು ಪ್ರಶ್ನೆ ಮಾಡುವಂತಿಲ್ಲ. ತೀರ್ಪು ಯಾವಾಗ ಎಂದು ಕೇಳಿದ ಪತ್ರಕರ್ತರನ್ನು ಸ್ಪೀಕರ್ ಕೆ.ಬಿ.ಕೋಳಿವಾಡ ಪ್ರಶ್ನಿಸಿದ್ದು ಹೀಗೆ. ವಾದ ವಿವಾದ ಆಲಿಸಿದ್ದೇನೆ. ತೀರ್ಪು ಕಾಯ್ದಿರಿಸಿದ್ದೇನೆ. ಹೈಕೋರ್ಟ್ಗೆ ಹೋಗಲು ಎಲ್ಲರಿಗೂ ಹಕ್ಕಿದೆ. ನಾನು ತೀರ್ಪು ನಾಳೆನೂ ಕೊಡಬಹುದು. ಮತದಾನಕ್ಕೂ ಇದಕ್ಕೂ ಸಂಬಂಧವಿಲ್ಲ.
– ಕೆ.ಬಿ.ಕೋಳಿವಾಡ, ಸ್ಪೀಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.