ನೀತಿ ಸಂಹಿತೆ ಅನ್ವಯ ಜಯಂತ್ಯೋತ್ಸವ ಆಚರಿಸಲು ನಿರ್ಧಾರ
Team Udayavani, Mar 20, 2018, 11:44 AM IST
ಕಲಬುರಗಿ: ಹಸಿರು ಕ್ರಾಂತಿ ಹರಿಕಾರ ಡಾ| ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತ್ಯುತ್ಸವ ನಗರ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಏಪ್ರಿಲ್ 5 ಮತ್ತು 14ರಂದು ಚುನಾವಣಾ ನೀತಿ ಸಂಹಿತೆ ಅನ್ವಯ ಆಚರಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಯಿತು.
ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ಚುನಾವಣಾ ನೀತಿ ಸಂಹಿತೆ ಘೋಷಿಸಬಹುದಾಗಿದೆ. ನೀತಿ ಸಂಹಿತೆ ಸಮಯದಲ್ಲಿ ಸರ್ಕಾರಿ ಸಭೆ ಸಮಾರಂಭಗಳನ್ನು ನೀತಿ ಸಂಹಿತೆಗೆ ಅನುಗುಣವಾಗಿ ನಡೆಸಲಾಗುವುದು. ಜಯಂತಿ ಆಚರಣಾ ಸಮಿತಿಗಳು ಯಾವುದೇ ಖಾಸಗಿ ಕಾರ್ಯಕ್ರಮ ನಡೆಸುವವರಿದ್ದರೆ ಮುಂಚಿತವಾಗಿಯೇ
ಚುನಾವಣಾ ಅಧಿಕಾರಿಗಳಿಂದ ಪರವಾನಿಗೆ ಪಡೆದುಕೊಳ್ಳಬೇಕು ಎಂದು ಹೇಳಿದರು.
ಡಾ| ಬಾಬು ಜಗಜೀವನರಾಂ ಅವರ 111ನೇ ಜಯಂತ್ಯುತ್ಸವದ ಅಂಗವಾಗಿ ಏಪ್ರಿಲ್ 5 ರಂದು ಬೆಳಗ್ಗೆ 9:00ರಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಡಾ| ಎಸ್.ಎಂ. ಪಂಡಿತ ರಂಗಮಂದಿರದವರೆಗೆ ಬಾಬು ಜಗಜೀವನರಾಂ ಭಾವಚಿತ್ರದ ಮೆರವಣಿಗೆ ಆಯೋಜಿಸಲಾಗುವುದು. ಮೆರವಣಿಗೆ ನಡೆಯುವ ಮಾರ್ಗದಲ್ಲಿ ನೀರು ಸಿಂಪಡಿಸುವ, ಕುಡಿಯುವ ನೀರಿನ ವ್ಯವಸ್ಥೆ, ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳ ಮತ್ತು ಪೂರ್ಣ ಕುಂಭ ಕಲಶದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಯಿತು. ನಂತರ ಡಾ| ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಯಂತ್ಯುತ್ಸವದ ಮುಖ್ಯ ಸಮಾರಂಭ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಅದೇ ರೀತಿ ಏಪ್ರಿಲ್ 14ರಂದು ಬೆಳಗ್ಗೆ ಜಗತ್ ವೃತ್ತದ ಬಳಿಯ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿಯ ಬಳಿ 127ನೇ ಜಯಂತ್ಯುತ್ಸವದ ಅಂಗವಾಗಿ ಡಾ| ಬಾಬಾಸಾಹೇಬ್ ಅಂಬೇಡ್ಕರ್ ಪುತ್ಥಳಿಗೆ ಅಂದು ಬೆಳಗ್ಗೆ 8:00ಕ್ಕೆ ಮಾಲಾರ್ಪಣೆ ಬಳಿಕ ಜಯಂತ್ಯುತ್ಸವದ ಸಮಾರಂಭ ನಡೆಯುವುದು.
ಎರಡೂ ಜಯಂತಿಗಳ ಆಚರಣೆಗೆ ಸಂಬಂಧಿಸಿದಂತೆ ರಚಿಸಲಾದ ಎಲ್ಲ ಉಪಸಮಿತಿಗಳಿಗೆ ವಹಿಸಲಾದ ಕೆಲಸ ಕಾರ್ಯಗಳನ್ನು ಚಾಚು ತಪ್ಪದೇ ಅತ್ಯಂತ ಜವಾಬ್ದಾರಿಯಿಂದ ಕೈಗೊಳ್ಳಬೇಕು. ಜ¿ಚುಂತಿ ಆಚರಣೆ ಸಂದರ್ಭದಲ್ಲಿ ಕುಡಿಯುವ ನೀರು, ವಿದ್ಯುತ್ ಅಲಂಕಾರ, ಧ್ವನಿವರ್ಧಕ, ಸ್ವತ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಏಪ್ರಿಲ್ 5ರಂದು ಬಾಬು ಜಗಜೀವನರಾಂ ಮತ್ತು ಏಪ್ರಿಲ್ 14ರಂದು ಡಾ| ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಯಂತಿ ಆಚರಿಸಿ ಮುಖ್ಯ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಈ ಕುರಿತು ಸುತ್ತೋಲೆ ಹೊರಡಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಪಾಲಿಕೆ ಆಯುಕ್ತ ರಘುನಂದನಮೂರ್ತಿ, ಸಮಾಜಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಂದೇನವಾಜ, ಶಿಷ್ಟಾಚಾರ ತಹಶೀಲ್ದಾರ ಪ್ರಕಾಶ ಚಿಂಚೋಳಿಕರ, ಜಯಂತ್ಯುತ್ಸವ ಆಚರಣೆ ಸಮಿತಿ ಅಧ್ಯಕ್ಷರು, ಪದಾಧಿ ಕಾರಿಗಳು, ಹಲವಾರು ಮುಖಂಡರು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.