ಕೆಎಸ್‌ಆರ್‌ಟಿಸಿಯಿಂದ ಮತ್ತೆ 3 ಫ್ಲೈಬಸ್ ಸೇವೆ
Team Udayavani, Mar 20, 2018, 12:09 PM IST
ಬೆಂಗಳೂರು: ಪ್ರಯಾಣಿಕರ ಬೇಡಿಕೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯು ಮತ್ತೆ ಮೂರು ಫ್ಲೈಬಸ್ ಸೇವೆ ಆರಂಭಿಸಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎಎಲ್)ದಿಂದ ಮೈಸೂರು, ಮಡಿಕೇರಿ ಮತ್ತು ಕೊಯಮತ್ತೂರಿಗೆ ಫ್ಲೈಬಸ್‌ಗಳ ಸೇವೆ ಕಲ್ಪಿಸಲಾಗಿದ್ದು, ಮಾರ್ಚ್ 22ರಿಂದ ಈ ಸೇವೆ ಆರಂಭಗೊಳ್ಳಲಿದೆ.
ಬೆಂಗಳೂರು-ಮೈಸೂರು ನಡುವೆ ಪ್ರಯಾಣ ದರ 800 ರೂ., ಬೆಂಗಳೂರು-ಮಡಿಕೇರಿ 1,000 ರೂ. ಮತ್ತು ಬೆಂಗಳೂರು-ಕೊಯಮತ್ತೂರು ಮಧ್ಯೆ 1,040 ರೂ. ಪ್ರಯಾಣ ದರ ನಿಗದಿಪಡಿಸಲಾಗಿದೆ.
ಈಗಾಗಲೇ ಬೆಂಗಳೂರು-ಮೈಸೂರು ನಡುವೆ 6 ಫ್ಲೈಬಸ್‌ಗಳು, ಮಡಿಕೇರಿಗೆ ಮತ್ತು ಮಣಿಪಾಲ-ಕುಂದಾಪುರಕ್ಕೆ ತಲಾ ಒಂದು ಫ್ಲೈಬಸ್‌ಗಳು ಕಾರ್ಯಾಚರಣೆ ಮಾಡುತ್ತಿವೆ. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತ ಹಿನ್ನೆಲೆಯಲ್ಲಿ ಈ ಮಾದರಿಯ ಸೇವೆಯನ್ನು ವಿಸ್ತರಿಸಲಾಗಿದೆ ಎಂದು ನಿಗಮದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.