ದೌರ್ಜನ್ಯಕ್ಕೆ ಒಳಗಾದವರನ್ನು ಆತ್ಮೀಯವಾಗಿ ನೋಡಿಕೊಳ್ಳಿ: ಶಾಸಕಿ
Team Udayavani, Mar 20, 2018, 8:48 PM IST
ಪುತ್ತೂರು: ದೌರ್ಜನ್ಯಕ್ಕೆ ಒಳಗಾದವರನ್ನು ಕೆಟ್ಟ ದೃಷ್ಟಿಯಿಂದ ನೋಡದೆ ಅಥವಾ ದೂರ ಮಾಡದೆ ಆತ್ಮೀ ಯತೆಯಿಂದ ನೋಡಿಕೊಳ್ಳಬೇಕು. ಈ ದೃಷ್ಟಿಯಿಂದ ಸರಕಾರ ಆರಂಭಿಸಿರುವ ಗೆಳತಿ ವಿಶೇಷ ಚಿಕಿತ್ಸಾ ಘಟಕ ಪೂರಕ ಚಟುವಟಿಕೆ ಗಳನ್ನು ನಡೆಸಲಿದೆ ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಪುತ್ತೂರು ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಹೇಳಿದರು. ದೌರ್ಜನ್ಯಕ್ಕೆ ಒಳಗಾದ ಮಹಿಳೆ, ಮಕ್ಕಳಿಗೆ ಒಂದೇ ಸೂರಿನಡಿ ಚಿಕಿತ್ಸೆ, ನೆರವು ನೀಡುವ ರಾಜ್ಯ ಸರಕಾರದ ಯೋಜನೆಯ ‘ಗೆಳತಿ ವಿಶೇಷ ಚಿಕಿತ್ಸಾ ಘಟಕ’ವನ್ನು ಸರಕಾರಿ ಆಸ್ಪತ್ರೆಯ ಆವರಣದಲ್ಲಿ ಸೋಮವಾರ ಉದ್ಘಾಟಿಸಿದರು. ದ.ಕ. ಜಿ.ಪಂ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸರಕಾರಿ ಸಾರ್ವಜನಿಕ ಆಸ್ಪತ್ರೆ, ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.
ಆಸ್ಪತ್ರೆಯಿಂದ ತುರ್ತು ಚಿಕಿತ್ಸೆ, ಪೊಲೀಸ್ ಇಲಾಖೆಯಿಂದ ಸೂಕ್ತ ಕ್ರಮ ಹಾಗೂ ಭದ್ರತೆ, ಕಾನೂನು ಇಲಾಖೆಯಿಂದ ಉಚಿತ ಕಾನೂನು ನೆರವು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಪ್ತ ಸಮಾಲೋಚನೆ ಮೂಲಕ ಧೈರ್ಯ ತುಂಬುವ ಕಾರ್ಯ ಘಟಕದಲ್ಲಿ ಆಗಲಿದೆ. ರಾಜ್ಯಾದಾದ್ಯಂತ ಏಕ ಕಾಲದಲ್ಲಿ ಎಲ್ಲ ತಾಲೂಕುಗಳಲ್ಲಿ ಯೋಜನೆಯ ಉದ್ಘಾಟನೆ ನಡೆಯುತ್ತಿದ್ದು, ಇದರಿಂದಾಗಿ ಸಂತ್ರ ಸ್ತರಿಗೆ ಒಂದೇ ಕಡೆ ಸೂಕ್ತ ರೀತಿಯಲ್ಲಿ ಸೇವೆ ಶೀಘ್ರವಾಗಿ ದೊರೆಯಲಿವೆ ಎಂದರು.
ಆತ್ಮೀಯತೆಯ ಮಾದರಿ
ಸಹಾಯಕ ಕಮಿಷನರ್ ಎಚ್.ಕೆ. ಕೃಷ್ಣಮೂರ್ತಿ ಮಾತನಾಡಿ, ಕಾನೂನಿನ ಅರಿವಿನ ಕೊರತೆ ಹಾಗೂ ಭಯದ ಕಾರಣಕ್ಕೆ ದೌರ್ಜನ್ಯ ಪ್ರಕರಣಗಳು ತಡವಾಗಿ ಬೆಳಕಿಗೆ ಬರುತ್ತದೆ. ಇಂತಹ ಘಟನೆಗಳು ನಡೆದಾಗ ಇಲಾಖೆಗಳ ಗಮನಕ್ಕೆ ತರಬೇಕು. ಆಗ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು. ಆತ್ಮೀಯತೆಯಿಂದ ಸಹಕಾರ ಮಾಡುವ ಮಾದರಿಯಲ್ಲಿ ಗೆಳತಿ ವಿಶೇಷ ಯೋಜನೆಯ ಮುಖಾಂತರ ಉಚಿತ ಸೇವೆಗಳು ದೊರೆಯಲಿವೆ ಎಂದರು.
ತಾ. ಪಂ. ಉಪಾಧ್ಯಕ್ಷೆ ರಾಜೇಶ್ವರಿ ಮಾತನಾಡಿ, ದೌರ್ಜನ್ಯದಂತಹ ಪ್ರಕರಣಗಳು ನಡೆದಾಗ ಶೀಘ್ರವಾಗಿ ನ್ಯಾಯ ತೀರ್ಮಾನ ನಡೆಯಬೇಕು. ನೊಂದವರಿಗೆ ಪರಿಹಾರ ನೀಡುವ ಜತೆಗೆ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮನವಿ ಮಾಡಿದರು.
ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಭಾಸ್ಕರ ಕೋಡಿಂಬಾಳ, ತಹಶೀಲ್ದಾರ್ ಅನಂತ ಶಂಕರ್, ನಗರ ಠಾಣಾ ಪಿಎಸ್‌ಐ ಅಜೇಯ್ ಕುಮಾರ್ ಶುಭ ಹಾರೈಸಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕಿಶನ್ ಬಿ. ಮಡಲಗಿ, ತಾಲೂಕು ಆರೋಗ್ಯಾಧಿಕಾರಿ ಡಾ| ಅಶೋಕ್ ಕುಮಾರ್ ರೈ, ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಹರೀಶ್ ಬಿಜತ್ರೆ, ಸದಸ್ಯರಾದ ಲಲಿತಾ ಹಾಗೂ ಸುಜಾತಾ ಕೃಷ್ಣ, ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು. ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ| ವೀಣಾ ಸ್ವಾಗತಿಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಟಿ. ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೇಲ್ವಿಚಾರಕಿ ಜಲಜಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.
ನ್ಯಾಯವಾದಿ ನೇಮಕ
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಸಿ.ಕೆ. ಬಸವರಾಜ್ ಮಾತನಾಡಿ, ಗೆಳತಿ ವಿಶೇಷ ಚಿಕಿತ್ಸಾ ಘಟಕಕ್ಕೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಒಬ್ಬ ನ್ಯಾಯವಾದಿಯನ್ನು ನೇಮಿಸಿ ಕಾನೂನಿನ ಉಚಿತ ಸೇವೆಗಳು ದೊರೆಯಲಿವೆ. ಆ ಮೂಲಕ ಪ್ರಕರಣಗಳು ಶೀಘ್ರ ಇತ್ಯರ್ಥಕ್ಕೆ ಅಥವಾ ನ್ಯಾಯ ಒದಗಿಸಿಕೊಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.