ಶ್ರೀ ಮಾತಾ ವೈಷ್ಣೋದೇವಿ ವಿವಿ ಘಟಿಕೋತ್ಸವಕ್ಕೆ ರಾಷ್ಟ್ರಪತಿ
Team Udayavani, Mar 21, 2018, 4:56 PM IST
ಜಮ್ಮು : ಮುಂದಿನ ಎಪ್ರಿಲ್ 18ರಂದು ನಡೆಯಲಿರುವ ಶ್ರೀ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ ಘಟಿಕೋತ್ಸವವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಾತನಾಡಲಿದ್ದಾರೆ ಎಂದು ಎಸ್‌ಎಂವಿಡಿಯು ವಕ್ತಾರ ತಿಳಿಸಿದ್ದಾರೆ.
ಎಪ್ರಿಲ್ 18ರಂದು ನಡೆಯುವ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ರಾಜ್ಯಪಾಲರು ಮಾಡಿರುವ ಕೋರಿಕೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸ್ವೀಕರಿಸಿರುವುದಾಗಿ ರಾಷ್ಟ್ರಪತಿ ಭವನವು ರಾಜ ಭವನಕ್ಕೆ ತಿಳಿಸಿದೆ ಎಂದು ವಕ್ತಾರ ಹೇಳಿದರು.
ಈ ತಿಂಗಳ ಆದಿಯಲ್ಲಿ ರಾಜ್ಯಪಾಲ ಎನ್ ಎನ್ ವೋರಾ ಅವರು ರಾಷ್ಟ್ರಪತಿಗಳನ್ನು ಭೇಟಿಯಾಗಿ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಮುಖ್ಯಅತಿಥಿಯಾಗಿ ಪಾಲ್ಗೊಳ್ಳುವಂತೆ ಕೋರಿದ್ದರು.
1999ರಲ್ಲಿ ಶ್ರೀ ಮಾತಾ ವೈಷ್ಣೋದೇವಿ ದೇವಳ ಮಂಡಳಿಯಿಂದ ಸ್ಥಾಪಿಸಲ್ಪಟ್ಟಿದ್ದ ಮತ್ತು 2004ರಲ್ಲಿ ಅಂದಿನ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರಿಂದ ಉದ್ಘಾಟನೆಗೊಂಡಿದ್ದ ಈ ವಿಶ್ವವಿದ್ಯಾಲಯಕ್ಕೆ ಈ ಬಾರಿಯದು 6ನೇ ಘಟಿಕೋತ್ಸವವಾಗಿದೆ. ವಿಶ್ವವಿದ್ಯಾಲಯದ ಮೊದಲ ತರಗತಿಯಲ್ಲಿ ಕಲಾಂ ಪಾಠ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.