ಪರಿಹಾರ ಹಣ ಬಿಡುಗಡೆಗೆ ಆಗ್ರಹ

Team Udayavani, Mar 21, 2018, 7:51 PM IST

8.jpg

ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ ಅಗಲಿಕರಣ ಸಂಬಂಧ ಗೂಡಂಗಡಿಗಳನ್ನು ಕಳೆದುಕೊಂಡವರಿಗೆ ಪರಿಹಾರದ ಹಣ ನೀಡದೆ ಸತಾಯಿಸಲಾಗುತ್ತಿದೆ ಎಂದು ಆರೋಪಿಸಿ ಗ್ಯಾರೇಜ್‌ ಹಾಗೂ ಡಬ್ಟಾ ಅಂಗಡಿಗಳ ಮಾಲೀಕರು ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಧರಣಿ ನಡೆಸಿದರು.

ತಾಲೂಕಿನ ಪಿಳ್ಳೆಕೆರನಹಳ್ಳಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-13ರ ಅಗಲೀಕರಣ ಸಂದರ್ಭದಲ್ಲಿ ಹೆದ್ದಾರಿಯ ಎರಡು
ಬದಿಗಳಲ್ಲಿದ್ದ ಗ್ಯಾರೇಜ್‌, ಡಬ್ಬದ ಹೋಟೆಲ್‌ ಗಳನ್ನು ತೆರವುಗೊಳಿಸಲಾಗಿದೆ. ಇದಾಗಿ ಎರಡು ವರ್ಷಗಳಾಗಿದ್ದರೂ ಯಾವುದೇ ಪರಿಹಾರ ನೀಡಿಲ್ಲ. ಗ್ಯಾರೇಜ್‌ ಮತ್ತು ಡಬ್ಟಾ ಅಂಡಿಗಳನ್ನು ತೆರವುಗೊಳಿಸಿದರೆ ಪ್ರತ್ಯೇಕ ಜಾಗ ನೀಡುವಂತೆ ಗ್ಯಾರೇಜ್‌ ಹಾಗೂ ಡಬ್ಟಾ ಹೋಟೆಲ್‌ಗ‌ಳ ಬಡ ಕೂಲಿ ಕೆಲಸಗಾರರು ಅನೇಕ ಬಾರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರಕ್ಕೆ
ಮನವಿ ಮಾಡಿದ್ದರು. ಹೆದ್ದಾರಿ ತೆರವಿನಿಂದ ಗ್ಯಾರೇಜ್‌, ಗೂಡಂಗಡಿ ಹಾಗೂ ಡಬ್ಬದಂಗಡಿಗಳನ್ನು ಕಳೆದುಕೊಂಡವರಿಗೆ ಪರಿಹಾರ ನೀಡಲು ಕೇಂದ್ರದಿಂದ ಹಣ ಮಂಜೂರಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯನ್ನು ಭೇಟಿಯಾದಾಗ ಹಣ ಬಂದಿದ್ದು ಜಿಲ್ಲಾಧಿಕಾರಿ ಖಾತೆಗೆ ಜಮಾ ಮಾಡಲಾಗಿದೆ. ಹಾಗಾಗಿ ನಿಮ್ಮ ಪರಿಹಾರವನ್ನು ಜಿಲ್ಲಾಧಿಕಾರಿ ಬಳಿ ಪಡೆದುಕೊಳ್ಳಿ ಎಂದು ತಿಳಿಸಿ
ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎನ್‌.ಎಚ್‌-13  ಗ್ಯಾರೇಜ್‌-ಹೋಟೆಲ್‌ ಮಾಲೀಕರ ಸಂಘದ ಅಧ್ಯಕ್ಷಎಚ್‌.ಆರ್‌. ಮಹಮ್ಮದ್‌ ಮಾತನಾಡಿ, 2017, ಆಗಸ್ಟ್‌ನಲ್ಲೇ ಪರಿಹಾರದ ಮೊತ್ತ ಬಿಡುಗಡೆಯಾಗಿದೆ. ಜಿಲ್ಲಾ ಧಿಕಾರಿ ಬಳಿ ಹಣ ಇರುವುದರಿಂದ ಕೂಡಲೆ
ಪರಿಹಾರ ನೀಡುವಂತೆ ನಾಲ್ಕೈದು ಬಾರಿ ಒತ್ತಾಯಿಸಿದರೂ ಜಿಲ್ಲಾ ಧಿಕಾರಿಗಳು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪ್ರತಿ ಮಂಗಳವಾರ ನಡೆಯುವ ಜನಸ್ಪಂದನ ಸಭೆಯಲ್ಲಿಯೂ ಮನವಿ ಮಾಡಿದ್ದೇವೆ. ಜಿಲ್ಲಾ ಧಿಕಾರಿಗಳು ಬಡ, ಕೂಲಿ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಕೂಡಲೇ ಪರಿಹಾರದ ಮೊತ್ತ ನೀಡಬೇಕು ಎಂದು ಒತ್ತಾಯಿಸಿದರು. ಅಖೀಲ ಕರ್ನಾಟಕ ಜನಸೇವಾ ಸಂಘದ ಅಧ್ಯಕ್ಷ ಅಮ್ಜದ್‌ ಖಾನ್‌, ಉಪಾಧ್ಯಕ್ಷ ಉಮ್ಮರ್‌, ಅನ್ವರ್‌ ಭಾಷಾ, ಜಾಕೀರ್‌, ತನ್ವೀರ್‌ ಬಾಬು ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ಟಾಪ್ ನ್ಯೂಸ್

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಇನ್ನಾ ಗ್ರಾಮದ ವ್ಯಕ್ತಿ ನಾಪತ್ತೆ

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Missing Case: ಪಡುಬಿದ್ರಿ: ಗೃಹಿಣಿ ನಾಪತ್ತೆ; ದೂರು ದಾಖಲು

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

Padubidri; ಖಾಸಗಿ ಬಸ್‌ ಢಿಕ್ಕಿ: ವಿದ್ಯಾರ್ಥಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

arrest-lady

PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.