ಬಿಜೆಪಿ ಬಿಟೀಂ ಜೆಡಿಎಸ್; ಗೌಡರ ತವರಲ್ಲಿ ರಾಹುಲ್ ಆರೋಪ
Team Udayavani, Mar 22, 2018, 6:00 AM IST
ಹಾಸನ/ಶೃಂಗೇರಿ: ಕರ್ನಾಟಕದಲ್ಲಿ ಬಿಜೆಪಿಯ “ಬಿ’ ಟೀಂ ನಂತೆ ಜೆಡಿಎಸ್ ನಡೆದುಕೊಳ್ಳುತ್ತಿದ್ದು, ಬಿಜೆಪಿಯನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಜೆಡಿಎಸ್ ಸಹಕರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಂಭೀರವಾಗಿ ಆರೋಪಿಸಿದರು.
ರಾಜ್ಯ ಪ್ರವಾಸದಲ್ಲಿ ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿ ಅವರ ವಿರುದ್ಧವೇ ವಾಗ್ಧಾಳಿ ನಡೆಸಿಕೊಂಡು ಬರುತ್ತಿದ್ದ ರಾಹುಲ್ ಗಾಂಧಿ ಮಾಜಿ ಪ್ರಧಾನಿ ದೇವೇಗೌಡರ ತವರಿನಲ್ಲಿಯೇ ಜೆಡಿಎಸ್ ವಿರುದ್ಧ ಮೊದಲ ಬಾರಿಗೆ ವಾಗ್ಧಾಳಿ ನಡೆಸಿ ಅಚ್ಚರಿ ಮೂಡಿಸಿದರು.
ನಗರದ ಕ್ರೀಡಾಂಗಣದಲ್ಲಿ ಬುಧವಾರ ಸಂಜೆ ನಡೆದ ಜನಾರ್ಶೀವಾದ ಯಾತ್ರೆ ಉದ್ಘಾಟಿಸಿ ಮಾತನಾಡಿದರು. “ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂದು ಜೆಡಿಎಸ್ ಸಹಕಾರ ನೀಡುತ್ತಿದೆ. ಜನರಿಗೆ ತಿಳಿಯುವುದಿಲ್ಲ ಎಂದು ಜೆಡಿಎಸ್ ಹಿಂಬಾಗಿಲ ರಾಜಕಾರಣ ಮಾಡುತ್ತಿದೆ. ಆರ್‌ಎಸ್‌ಎಸ್‌ನ “ಎ’ ಟೀಂ, ಜೆಡಿಎಸ್‌ನ “ಬಿ’ಟೀಂ, ಅಥವಾ ಸಿ, ಡಿ, ಟೀಂಗಳು ಕೆಲಸ ಮಾಡಿದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವುದು ಕಾಂಗ್ರೆಸ್ ಪಕ್ಷ ಮಾತ್ರ ಎಂದರು.
ಸಹಾಯ ಹಸ್ತ ನೀಡಲು ಸದಾ ಸಿದ್ಧ: ಇಂದಿರಾಗಾಂಧಿ, ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದಾಗಲೆಲ್ಲಾ ಕರ್ನಾಟಕದ ಜನರು ಕಾಂಗ್ರೆಸ್‌ನ್ನು ಕೈ ಹಿಡಿದಿದ್ದಾರೆ. ಆರ್‌ಎಸ್‌ಎಸ್ ಆಕ್ರಮಣದಿಂದ ಇಂದಿರಾಗಾಂಧಿ ಅವರು ಅಧಿಕಾರ ಕಳೆದುಕೊಂಡಾಗ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜನರು ಇಂದಿರಾಗಾಂಧಿಯವರನ್ನು ಗೆಲ್ಲಿಸಿ ಲೋಕಸಭೆಗೆ ಕಳುಹಿಸಿದ್ದನ್ನು ಕಾಂಗ್ರೆಸ್ ಎಂದೂ ಮರೆಯುವುದಿಲ್ಲ. ಕರ್ನಾಟಕದ ಜನರು ಯಾವುದೇ ಸಂದರ್ಭದಲ್ಲಿ ಸಹಾಯ ಬೇಕೆಂದು ಕೋರಿದರೆ ನಾನು ನೆರವಿಗೆ ಬರಲು ಸಿದ್ಧ. ಕರ್ನಾಟಕದ ಜನರಿಗೆ ಸಹಾಯ ಹಸ್ತ ನೀಡಲು ಸದಾ ಸಿದ್ಧ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್.ಎನ್. ನಾಗಮೋಹನ್ ದಾಸ್ ಅಧ್ಯಕ್ಷ?
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
MUST WATCH
ಹೊಸ ಸೇರ್ಪಡೆ
NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.