ಬೆಳ್ಳಿ ಒಡವೆಗಾಗಿ ನೆರೆಮನೆಯ ಮಗುವನ್ನೇ ಕೊಂದು ಬಿಟ್ಟಳು !
Team Udayavani, Mar 22, 2018, 9:44 AM IST
ಕೊಪ್ಪಳ: ಕೇವಲ ಬೆಳ್ಳಿಯ ಒಡವೆಗಳ ದುರಾಸೆಗಾಗಿ ಮಹಿಳೆಯೊಬ್ಬಳು ನೆರೆ ಮನೆಯ ಒಂದೂವರೆ ವರ್ಷದ ಮಗುವನ್ನು ಅಮಾನುಷವಾಗಿ ಕೊಲೆಗೈದಿರುವ ಘಟನೆ ಯಲಬುರ್ಗಾ ತಾಲೂಕಿನ ಕುಕನೂರಿನ ಯಡಿಯಾಪುರದಲ್ಲಿ ನಡೆದಿದೆ.
ಅಂಬವ್ವ ಎನ್ನುವ ಮಹಿಳೆ ಮನೆಯೆದುರು ಆಟವಾಡುತ್ತಿದ್ದ ಒಂದೂವರೆ ವರ್ಷದ ಪ್ರತಿಭಾ ಎನ್ನುವ ಮಗುವನ್ನು ತನ್ನ ಮನೆಗೆ ಕರೆದೊಯ್ದು ಕುತ್ತಿಗೆಗೆ ಉರುಳು ಹಾಕಿ ಕೊಲೆಗೈದು 4 ಸಾವಿರದಷ್ಟು ಬೆಲೆ ಬಾಳುವ ಬೆಳ್ಳಿಯ ಆಭರಣಗಳನ್ನು ತೆಗೆದಿಟ್ಟಿದ್ದಾಳೆ.
ಪ್ರತಿಭಾ ಕಾಣೆಯಾದ ಬಳಿಕ ಪೋಷಕರು ಹುಡುಕಾಟ ನಡೆಸುತ್ತಿದ್ದ ವೇಳೆ ಅಂಬವ್ವ ಅನುಮಾನಾಸ್ಪದವಾಗಿ ವರ್ತಿಸಿದ್ದು ಅನುಮಾನದಲ್ಲಿ ಮನೆಯಲ್ಲಿ ಪರಿಶೀಲಿಸಿದಾಗ ಪ್ರತಿಭಾ ಶವವಾಗಿ ಪತ್ತೆಯಾಗಿದ್ದಾಳೆ.
ಕುಕನೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಬವ್ವಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.