ಸುಲ್ತಾನ್‌ಬತ್ತೇರಿ ಜೆಟ್ಟಿ: ಇಂದು ಉದ್ಘಾಟನೆ 

Team Udayavani, Mar 22, 2018, 10:36 AM IST

22-March-3.jpg

ಮಹಾನಗರ: ಮಂಗಳೂರು ಬಂದರಿನಲ್ಲಿ ಬೋಟ್‌ಗಳ ಒತ್ತಡ ನಿವಾರಣೆಗಾಗಿ ಮೀನುಗಾರರ ಬಹುದಿನಗಳ ಬೇಡಿಕೆಯಾದ ನಗರದ ಸುಲ್ತಾನ್‌ಬತ್ತೇರಿ ಸಮೀಪದ ಬೋಳೂರು ಬೊಕ್ಕಪಟ್ಣದಲ್ಲಿ ನಿರ್ಮಾಣಗೊಂಡಿರುವ ಮೀನುಗಾರಿಕಾ ಜೆಟ್ಟಿ ಮಾ. 22ರಂದು ಉದ್ಘಾಟನೆಗೊಳ್ಳಲಿದೆ. ರಾಜ್ಯ ಮೀನು
ಗಾರಿಕಾ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಉದ್ಘಾಟಿಸಲಿದ್ದಾರೆ.

ಮೀನುಗಾರರು ತಮ್ಮ ಮೀನನ್ನು ಮಂಗಳೂರು ಬಂದರಿನಲ್ಲಿ ಇಳಿಸಿ ಬಳಿಕ ಸುಲ್ತಾನ್‌ಬತ್ತೇರಿ ಜೆಟ್ಟಿಯಲ್ಲಿ ಬೋಟ ನ್ನು(ಐಡೆಲ್‌ ಬರ್ಫಿಂಗ್‌) ನಿಲ್ಲಿಸಲು ಅನುಕೂಲವಾಗಲಿದೆ. ಸ್ಥಳೀಯ ಶಾಸಕ ಜೆ.ಆರ್‌. ಲೋಬೋ ಅವರ ಪ್ರಸ್ತಾವನೆಯ ಮೇರೆಗೆ ಇದಕ್ಕೆ ಮೀನುಗಾರಿಕಾ ಇಲಾಖೆಯು ನಬಾರ್ಡ್‌ನ ಆರ್‌ಐಡಿಎಫ್‌ 19ರ ಮೂಲಕ 100 ಮೀ. ಉದ್ದದ ಜೆಟ್ಟಿ ನಿರ್ಮಾಣಕ್ಕೆ 5 ಕೋ.ರೂ. ಅನುದಾನ ಮಂಜೂರು ಮಾಡಿತ್ತು.

ಐಡೆಲ್‌ ಬರ್ಫಿಂಗ್‌ ಜೆಟ್ಟಿ ಎಂದರೆ ಅಲ್ಲಿ ಬೋಟ್‌ನ ಮೀನುಗಳನ್ನು ಅನ್‌ಲೋಡ್‌ ಮಾಡಲು ಅವಕಾಶವಿಲ್ಲ. ಇಲ್ಲಿ ಕೇವಲ ಬೋಟ್‌ಗಳಿಗೆ ಲಂಗರ್‌ ಹಾಕಿ ನಿಲ್ಲಿಸಲು ಮಾತ್ರ ಅವಕಾಶವಿರುತ್ತದೆ. ಪ್ರಸ್ತುತ ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಸ್ಥಳಾವಕಾಶದ ಕೊರತೆ ಇರುವ ಹಿನ್ನೆಲೆಯಲ್ಲಿ ಈ ಜೆಟ್ಟಿಯನ್ನು ನಿರ್ಮಿಸಲಾಗಿತ್ತು. ಸುಮಾರು 30 ಬೋಟ್‌ಗಳನ್ನು ನಿಲ್ಲಿಸಲು ಇಲ್ಲಿ ಅವಕಾಶವಿರುತ್ತದೆ.

ಬೋಳೂರಿನಲ್ಲಿ ಜೆಟ್ಟಿ ನಿರ್ಮಾಣವಾಗಿರುವುದರಿಂದ ಬೋಳೂರು, ಬೊಕ್ಕ ಪಟ್ಣ ಭಾಗದ ಮೀನುಗಾರರು ತಮ್ಮ ಬೋಟ್‌ಗಳನ್ನು ಇಲ್ಲಿ ನಿಲ್ಲಿಸಬಹುದಾಗಿದೆ. ಹಿಂದೆ ಮೀನುಗಾರರು ತಮ್ಮ ಬೋಟ್‌ ಗಳನ್ನು ಬಂದರಿನಲ್ಲೇ ನಿಲ್ಲಿಸಿ ವಾಹನದ ಮೂಲಕ ತೆರಳುತ್ತಿದ್ದರು. ಜತೆಗೆ ಬೋಟಿನ ದುರಸ್ತಿ ಕಾರ್ಯಕ್ಕೂ ಇಲ್ಲಿ ಅವಕಾಶವಿರುತ್ತದೆ.

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.