ಅಮಲಿನಲ್ಲಿ ಬಿಎಂಟಿಸಿ ಬಸ್ ಚಲಾವಣೆ: ಕಾರಿಗೆ ಡಿಕ್ಕಿ
Team Udayavani, Mar 22, 2018, 12:22 PM IST
ಬೆಂಗಳೂರು: ಬಿಎಂಟಿಸಿ ಚಾಲಕ ಲೋಕೇಶ್ ವಿರುದ್ಧ ಕುಡಿದು ವಾಹನ ಚಲಾಯಿಸಿದ ಆರೋಪ ಪ್ರಕರಣದಲ್ಲಿ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ ಮದ್ಯಸೇವಿಸಿ ಬಸ್ ಚಲಾಯಿಸುತ್ತಿದ್ದ ಚಾಲಕ ಲೋಕೇಶ್, ಅಡ್ಡ ದಿಡ್ಡಿಯಾಗಿಯೇ ತೂರಾಡುತ್ತ ಬಸ್ ಚಲಾಯಿಸಿದ್ದಾನೆ.
ಬಳಿಕ ಸಾರಕ್ಕಿ ಮೆಟ್ರೋ ನಿಲ್ದಾಣದ ಸಮೀಪ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಸುತ್ತಿದ್ದು, ನಿಧಾನಕ್ಕೆ ಬಸ್ ಚಲಿಸುತ್ತಿದ್ದರಿಂದ ಯಾವುದೇ ಅವಘಡ ಸಂಭವಿಸಲಿಲ್ಲ. ಕೂಡಲೇ ಚಾಲಕನ ವರ್ತನೆಗೆ ಪ್ರಯಾಣಿಕರು ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡಿದ್ದಾರೆ.
ಸಿಗ್ನಲ್ನಲ್ಲಿದ್ದ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಯಾಣಿಕರನ್ನು ಇಳಿಸಿ ಮತ್ತೂಂದು ಬಸ್ಗೆ ಕಳುಹಿಸಿದರು. ಬಳಿಕ ಚಾಲಕ ಲೋಕೇಶ್ನ ವಿರುದ್ಧ ಮದ್ಯ ಸೇವಿಸಿ ವಾಹನ ಚಲಾಯಿಸಿದ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಬಿಎಂಟಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.