3 ತಿಂಗಳಲ್ಲಿ ಕಾಮಗಾರಿ ಪೂರ್ಣ: ಜಾರ್ಜ್
Team Udayavani, Mar 22, 2018, 12:22 PM IST
ಬೆಂಗಳೂರು: ಶಾಂತಿನಗರ ಬಿಎಂಟಿಸಿ ಬಸ್ ಡಿಪೋಗೆ ಮಳೆ ನೀರು ನುಗ್ಗದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.
ಬುಧವಾರ ಶಾಂತಿನಗರ ಬಸ್ ಡಿಪೋಗೆ ಮಳೆ ನೀರು ತಡೆಗೆ ಸಮಾನಂತರ ನೀರುಗಾಲುವೆ ನಿರ್ಮಾಣ ಹಾಗೂ ಪ್ರವಾಹ ತಡೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಅವರು, ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಾಗಾಗಿ ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ರಾಜಕಾಲುವೆಗೆ ಸಮನಾಂತರವಾಗಿ 1.1 ಕಿಲೋ ಮೀಟರ್ ಉದ್ದದ ಸಮನಾಂತರ ನೀರು ಕಾಲುವೆ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಪೂರ್ಣಗೊಂಡರೆ ಬಿಎಂಟಿಸಿ ಬಸ್ ಡಿಪೋಗೆ ನೀರು ನುಗ್ಗುವುದು ತಪ್ಪಲಿದೆ. ಇದರಿಂದಾಗಿ ಪ್ರತಿ ವರ್ಷ ಬಿಎಂಟಿಸಿಗೆ ಲಕ್ಷಾಂತರ ರೂ. ನಷ್ಟವಾಗುವುದು ತಪ್ಪಲಿದೆ ಎಂದು ತಿಳಿಸಿದರು. ಮೇಯರ್ ಆರ್.ಸಂಪತ್ರಾಜ್, ಶಾಸಕ ಎನ್.ಎ.ಹ್ಯಾರೀಸ್ ಸೇರಿದಂತೆ ಪ್ರಮುಖರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.